ಮೈಸೂರು | ಪತ್ನಿಯನ್ನು 12 ವರ್ಷ ಗೃಹ ಬಂಧನದಲ್ಲಿಟ್ಟಿದ್ದ ದುರುಳನ ಬಂಧನ

Date:

ಪತ್ನಿಯ ನಡೆತೆ ಶಂಕಿಸಿ, ಆಕೆಯನ್ನು ದುರುಳ ಪತಿಯೊಬ್ಬ 12 ವರ್ಷ ಗೃಹ ಬಂಧನದಲ್ಲಿಟ್ಟಿದ್ದ ಪ್ರಕರಣ ಮೈಸೂರು ಜಿಲ್ಲೆಯ ಎಚ್‌.ಡಿ ಕೋಟೆ ತಾಲೂಕಿನ ಹೈರಿಗೆ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪತ್ನಿಯ ಮೇಲೆ ದೌರ್ಜನ್ಯ ಎಸಗಿರುವ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

ಹೈರಿಗೆ ಗ್ರಾಮದ ಸಣ್ಣಾಲಯ್ಯ ಎಂಬಾತ ತನ್ನ ಪತ್ನಿ ಸುಮಾ ಅವರನ್ನು 12 ವರ್ಷಗಳಿಂದ ಗೃಹಬಂಧನದಲ್ಲಿಟ್ಟಿದ್ದ. ಈ ಬಗ್ಗೆ ಪೊಲೀಸರಿಗೆ ಇತ್ತೀಚೆಗೆ ಮಾಹಿತಿ ದೊರೆತಿದ್ದು, ಗ್ರಾಮಕ್ಕೆ ತೆರಳಿ ಮಹಿಳೆಯನ್ನು ರಕ್ಷಿಸಿದ್ದಾರೆ. ಆತನನ್ನು ಬಂಧಿಸಿದ್ದು, ವಿಚಾರಣೆಗೆ ಒಳಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಸುಮಾ ಅವರು ಸಣ್ಣಾಲಯ್ಯನ ಮೂರನೇ ಪತ್ನಿಯಾಗಿದ್ದಾರೆ. ಮದುವೆಯಾದ ದಿನದಿಂದಲೂ ಆಕೆಯ ನಡತೆ ಬಗ್ಗೆ ಶಂಕೆ ಹೊಂದಿದ್ದ ಆತ, ಆಕೆಯನ್ನು ಗೃಹಬಂಧನದಲ್ಲಿ ಇರಿಸಿದ್ದ ಎಂದು ತಿಳಿದುಬಂದಿದೆ.

ಎಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಟ್ಕಳ | ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಮಿನಿ ಬಸ್ ಕಳವು

ಭಟ್ಕಳ: ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದ ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಮಿನಿ...

ಯಲ್ಲಾಪುರ | ಉಡ ಬೇಟೆ ಆರೋಪ: ತಂದೆ-ಮಗ ಬಂಧನ

ಅಕ್ರಮವಾಗಿ ವನ್ಯಪ್ರಾಣಿಗಳನ್ನು ಬೇಟೆಯಾಡಿ, ಅದರ ಮಾಂಸವನ್ನು ಮನೆಯಲ್ಲಿ ಇಟ್ಟುಕೊಂಡಿದ್ದ ಆರೋಪದ ಮೇಲೆ...

ಉಡುಪಿ | ಡಾ.ಮೆಹೆವಿಶ್ ಮುಶೀರ್ ಶೇಖ್‌ಗೆ ಪಿಎಚ್‌ಡಿ ಪದವಿ

ಡಾ. ಮಮತಾ ಬಾಲಚಂದ್ರ ಅವರ ಮಾರ್ಗದರ್ಶನದಲ್ಲಿ ಹಾಗೂ ಡಾ. ನರೇಂದ್ರ ವಿ.ಜಿ....