ಕೊಡಗು | ಕಾಡುಕೋಣ ಮಾಂಸ ಸಾಗಿಸುತ್ತಿದ್ದ ವಾಹನ ವಶ; ಆರೋಪಿಗಳು ಪರಾರಿ

Date:

  • ಸಿನಿಮಿಯ ರೀತಿಯಲ್ಲಿ ಆರೋಪಿಗಳ ಬೆನ್ನಟ್ಟಿದ ಪೊಲೀಸರು
  • ಕಾರು ಮರಕ್ಕೆ ಡಿಕ್ಕಿಹೊಡೆದಿದ್ದರಿಂದ ಅಲ್ಲಿಯೇ ಬಿಟ್ಟು ಪರಾರಿ

ಕೊಡಗು ಜಿಲ್ಲೆ ನಾಪೋಕ್ಲು ಬಳಿಯ ಕಕ್ಕಬ್ಬೆ ಕುಂಜಿಲ ಗ್ರಾಮದಿಂದ ಅಕ್ರಮವಾಗಿ ಕಾಡುಕೋಣದ ಮಾಂಸ ಸಾಗಾಟ ಮಾಡುತ್ತಿದ್ದ ಕೇರಳ ರಾಜ್ಯದ ನೋಂದಣಿ ಹೊಂದಿರುವ ಕಾರನ್ನು ಸೀನಿಮಿಯ ರೀತಿಯಲ್ಲಿ ಬೆನ್ನಟ್ಟಿ, ವಶಕ್ಕೆ ಪಡೆದುಕೊಳ್ಳುವಲ್ಲಿ ನಾಪೋಕ್ಲು ಪೊಲೀಸರು ಯಶಸ್ವಿಯಾಗಿದ್ದಾರೆ.

ನಾಪೋಕ್ಲು ಸಮೀಪದ ಕಕ್ಕಬ್ಬೆ ಕುಂಜಿಲ ಗ್ರಾಮದಿಂದ ಶುಕ್ರವಾರ ಮದ್ಯರಾತ್ರಿ ಕೇರಳ ರಾಜ್ಯದ (KL-26-L-8042) ನೊಂದಣಿ ಹೊಂದಿರುವ ವ್ಯಾಗನಾರ್ ಕಾರಿನಲ್ಲಿ ಅಕ್ರಮವಾಗಿ ಕಾಡುಕೋಣ ಮಾಂಸ ಸಾಗಾಟ ಮಾಡುತ್ತಿರುವ ಬಗ್ಗೆ ನಾಪೋಕ್ಲು ಪೊಲೀಸರಿಗೆ ದೊರೆತ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದಾಗ ವಾಹನದೊಂದಿಗೆ ಆರೋಪಿಗಳು ಪರಾರಿ ಯಾಗಲು ಯತ್ನಿಸಿದ್ದಾರೆ.

ಆರೋಪಿಗಳನ್ನು ಸೆರೆ ಹಿಡಿಯಲು ಸಿನಿಮಿಯ ರೀತಿಯಲ್ಲಿ ಬೆನ್ನಟ್ಟಿದ ನಾಪೋಕ್ಲು ಪೊಲೀಸರು ಮಡಿಕೇರಿ ಗ್ರಾಮಾಂತರ ಪೋಲೀಸರ ಸಹಕಾರದೊಂದಿಗೆ ಮಡಿಕೇರಿ ಸಮೀಪದ ಮೇಕೇರಿ ಸುಭಾಷ್ ನಗರ ಗ್ರಾಮದ ರಸ್ತೆಯಲ್ಲಿ ಸಂಚರಿಸುವಾಗ ಆರೋಪಿಗಳ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದರಿಂದ ಸಂಚರಿಸಲಾಗದೆ ಆರೋಪಿಗಳು ವಾಹನವನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಇದೇ ಸಂದರ್ಭ ಸ್ಥಳಕ್ಕೆ ಧಾವಿಸಿದ ಪೊಲೀಸರು ವಾಹನ ಸಮೇತ ಮಾಂಸವನ್ನು ವಶಕ್ಕೆ ಪಡೆದುಕೊಂಡಿದ್ದು, ಆರೋಪಿಗಳ ಪತ್ತೆಗಾಗಿ ಬಲೆಬಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕಾರ್ಯಾಚರಣೆಯಲ್ಲಿ ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್ ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು. ಪ್ರಕರಣವನ್ನು ಅರಣ್ಯ ವನ್ಯಜೀವಿ ಸಂರಕ್ಷಣ ಇಲಾಖೆಗೆ ಹಸ್ತಾಂತರಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಗೋಹತ್ಯೆ ನಿಷೇಧ ಕಾಯ್ದೆ ರದ್ದುಗೊಳಿಸುವ ಬಗ್ಗೆ ಚರ್ಚಿಸಿ ತೀರ್ಮಾನ: ಪಶುಸಂಗೋಪನೆ ಸಚಿವ ವೆಂಕಟೇಶ್

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭಾ ಚುನಾವಣೆ | ಮತ ಎಣಿಕೆ; ಜೂ. 4ರಂದು ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ

ಲೋಕಸಭಾ ಚುನಾವಣೆಯ ಮತ ಎಣಿಕೆ ಹಿನ್ನೆಲೆ, ಜೂನ್ 4ರಂದು ಬೆಂಗಳೂರು ಪೊಲೀಸ್...

ಜೂನ್‌ನಲ್ಲಿ ದೇಶಾದ್ಯಂತ ಬ್ಯಾಂಕುಗಳಿಗೆ ಒಟ್ಟು 13 ದಿನ ರಜೆ

ಈ ವರ್ಷದ ಆರಂಭದಲ್ಲಿ ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ಬ್ಯಾಂಕ್ ರಜಾದಿನಗಳ...

ಬೆಂಗಳೂರು | ಗಗನಕ್ಕೇರಿದ ತರಕಾರಿ ಬೆಲೆ; ಬೀನ್ಸ್‌ ಕೆಜಿಗೆ ₹220

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ತರಕಾರಿ ಬೆಲೆ ಏರಿಕೆಯಾಗುತ್ತಿದ್ದು, ಜನರು...

ಬೇಸಿಗೆ ವಿಶೇಷ | ಬೆಂಗಳೂರು-ಕಲಬುರಗಿ ಎಕ್ಸ್ ಪ್ರೆಸ್ ರೈಲು ರದ್ದು

ಮಧ್ಯ ರೈಲ್ವೆ ವ್ಯಾಪ್ತಿಯಲ್ಲಿನ ಕಾರ್ಯಾಚರಣೆ ನಿರ್ಬಂಧಗಳ ಕಾರಣದಿಂದಾಗಿ ಬೆಂಗಳೂರಿನ ಸರ್ ಎಂ.ವಿಶ್ವೇಶ್ವರಯ್ಯ...