ಚಾಮರಾಜನಗರ | ಮತದಾನಕ್ಕೆ ತೆರಳುತ್ತಿದ್ದ ವ್ಯಕ್ತಿ ಮೇಲೆ ಕಾಡಾನೆ ದಾಳಿ; ಸ್ಥಳದಲ್ಲೇ ಸಾವು

Date:

  • ರಸ್ತೆ ಹದಗೆಟ್ಟ ಕಾರಣಕ್ಕೆ ಕಾಡಂಚಿನ ಗ್ರಾಮಗಳಿಗೆ ಸಾರಿಗೆ ವ್ಯವಸ್ಥೆ ಇಲ್ಲ
  • ಮತಿ ಪತ್ನಿ ನಡೆದುಕೊಂಡು ಹೋಗುತ್ತಿದ್ದಾಗ ದಾಳಿ ನಡೆಸಿದ ಒಂಟಿ ಸಲಗ

ಮತದಾನ ಮಾಡಲು ತೆರಳುತ್ತಿದ್ದ ವ್ಯಕ್ತಿಯ ಮೇಲೆ ಕಾಡಾನೆ ದಾಳಿ ನಡೆಸಿ ವ್ಯಕ್ತಿಯನ್ನು ತುಳಿದು ಸಾಯಿಸಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ ಮಾದೇಶ್ವರ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದಿದೆ.

ಕರ್ನಾಟಕ ವಿಧಾನಸಭಾ ಚುನಾವಣೆಯ ಹಿನ್ನೆಲೆ ಮೇ 10ರಂದು ಮತದಾಣ ಮಾಡಲು ಹಳೆ ಮಾಟಳ್ಳಿ ಗ್ರಾಮದಿಂದ ತೋಕೆರೆ ಗ್ರಾಮಕ್ಕೆ  ತೆರಳುತ್ತಿದ್ದ ಸಂದರ್ಭದಲ್ಲಿ ಕಾಡಾನೆ ದಾಳಿ ನಡೆಸಿದೆ. ಹನೂರು ತಾಲೂಕಿನ ತೋಕರೆ ಗ್ರಾಮದ ಪುಟ್ಟಸ್ವಾಮಿ (42) ಮೃತ ವ್ಯಕ್ತಿ.

ಹಳೆ ಮಾಟಳ್ಳಿ ಗ್ರಾಮದಿಂದ  ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೋಕೆರೆ ಗ್ರಾಮಕ್ಕೆ ಪತಿ ಪತ್ನಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಪತಿಯ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಕಾಡಾನೆ ದಾಳಿಗೆ ಪುಟ್ಟಸ್ವಾಮಿ ಸ್ಥಳದಲ್ಲಿ ಮೃತಪಟ್ಟಿದ್ದಾರೆ. ನಂತರ ಪತ್ನಿ ಗ್ರಾಮಸ್ಥರಿಗೆ ಮಾಹಿತಿ ನೀಡಿದ ನಂತರ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಗ್ರಾಮಸ್ಥರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
ಚಾಮರಾಜನಗರ 01

ಕಾಡಂಚಿನ ಗ್ರಾಮಗಳ ರಸ್ತೆ ತೀವ್ರ ಹದಗೆಟ್ಟಿರುವುದರಿಂದ ದ್ವಿಚಕ್ರವಾಹನ ಸೇರಿದಂತೆ ಇನ್ನಿತರ ವಾಹನಗಳ ಸಂಚಾರ ಸಾಧ್ಯವಾಗದೇ ಇರುವುದರಿಂದ ಇಂತಹ ಘಟನೆಗಳು ಮರುಕಳಿಸುತ್ತಿವೆ. ಇನ್ನು ಮುಂದಾದರೂ ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳು ಕಾಡಂಚಿನ ಗ್ರಾಮಗಳಿಗೆ ಮೂಲ ಸೌಲಭ್ಯ ಕಲ್ಪಿಸುವಂತೆ ನಿವಾಸಿಗಳು ಆಗಮಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮತದಾನಕ್ಕೆ ತೆರಳಿದ್ದಾಗ ಹೆರಿಗೆ; ಮತ ಕೇಂದ್ರದಲ್ಲೇ ಜನಿಸಿದ ಮಗು

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನೀತಿ ಸಂಹಿತೆ ಉಲ್ಲಂಘನೆ; ಇಬ್ಬರು ಪ್ರಭಾವಿ ನಾಯಕರ ವಿರುದ್ಧ ಎಫ್‌ಐಆರ್ ದಾಖಲು

ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಕಾವು ಜೋರಾಗಿದೆ. ಏ.26 ರಂದು ಕರ್ನಾಟಕದಲ್ಲಿ ಮೊದಲ...

ಏ.20ರಂದು ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟದ ವಿವರ ಇಲ್ಲಿದೆ

ರಾಜ್ಯದಲ್ಲಿ ವಾಡಿಕೆಯಂತೆ ಮಳೆಯಾಗದೆ. ಕರಾವಳಿ ಪ್ರದೇಶಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ,...

ಬೆಂಗಳೂರು ಗ್ರಾಮಾಂತರ | ಕಾಂಗ್ರೆಸ್‌ನ ಡಿ.ಕೆ. ಸುರೇಶ್ ಪರ ನಟ ದರ್ಶನ್ ಪ್ರಚಾರ

ಲೋಕಸಭಾ ಚುನಾವಣೆಯ ಹಿನ್ನೆಲೆ, ರಾಜ್ಯದಲ್ಲಿ ರಾಜಕೀಯ ಪಕ್ಷದ ಅಭ್ಯರ್ಥಿಗಳು ಪ್ರಚಾರ ಭರಾಟೆ...

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಹಿತಕ್ಕಾಗಿ ಸೌಮ್ಯ ರೆಡ್ಡಿಗೆ ಮತ ನೀಡಿ: ನಟ ಧ್ರುವ ಸರ್ಜಾ

ಲೋಕಸಭಾ ಚುನಾವಣೆ ಹಿನ್ನೆಲೆ, ಅಭ್ಯರ್ಥಿಗಳ ಪ್ರಚಾರದ ಭರಾಟೆ ಜೋರಾಗಿದೆ. ಬೆಂಗಳೂರು ದಕ್ಷಿಣ...