ದಾವಣಗೆರೆ | ತೊಗರಿ ಕಾಯಿ ಬಿಡಿಸುತ್ತಿದ್ದ ವೇಳೆ ಕಾಡಾನೆ ದಾಳಿ; ಯುವತಿ ಸಾವು

Date:

  • ತಾಯಿ ಸ್ಥಿತಿ ಗಂಭೀರ – ಐಸಿಯುನಲ್ಲಿ ಚಿಕಿತ್ಸೆ
  • ಮತ್ತೊಂದು ಪ್ರಕರಣದಲ್ಲಿ ನಾಲ್ವರಿಗೆ ಗಾಯ     

ಜಮೀನಿನಲ್ಲಿ ತೊಗರಿ ಕಾಯಿ ಬಿಡಿಸುತ್ತಿದ್ದ ಯುವತಿ ಮೇಲೆ ಕಾಡಾನೆ ದಾಳಿ ನಡೆಸಿದ್ದು, ಯುವತಿ ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಸೋಮಲಾಪುರ ಗ್ರಾಮದಲ್ಲಿ ಶನಿವಾರ ನಡೆದಿದೆ.

ಸೋಮಲಾಪುರದ ನಿವಾಸಿ ಉಮೇಶ್ ಹಾಗೂ ಮಂಜುಳ ಅವರ ಪುತ್ರಿ ಕವನ (18) ಮೃತ ದುರ್ದೈವಿ. ತಾಯಿ ಮತ್ತು ಮಗಳು ತೊಗರಿ ಕಾಯಿ ಬಿಡಿಸುತ್ತಿದ್ದ ವೇಳೆ ಎರಡು ಕಾಡಾನೆಗಳು ಹಾಗೂ ಒಂದು ಮರಿ ಹೊಲಕ್ಕೆ ನುಗ್ಗಿವೆ. ಆನೆಯೊಂದು ಯುವತಿಯ ಮೇಲೆ ದಾಳಿ ನಡೆಸಿದೆ.

ಕಾಡಾನೆ ದಾಳಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಆಕೆಯನ್ನು ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೇ ಆಸ್ಪತ್ರೆಯಲ್ಲಿ ಯುವತಿ ಮೃತಪಟ್ಟಿದ್ದಾಳೆ. ತಾಯಿ ಮಂಜುಳಾ ಕೂಡ ಗಂಭೀರವಾಗಿ ಗಾಯಗೊಂಡಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮೃತ ಯುವತಿಯ ಕುಟುಂಬಕ್ಕೆ ಸರ್ಕಾರದ ವತಿಯಿಂದ 15 ಲಕ್ಷ ರೂಪಾಯಿ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ತುಮಕೂರು | ಭೂಮಿ, ವಸತಿ ಕೊಡದೆ ನಮ್ಮ ವೋಟು ಕೊಡೆವು; ಅಲೆಮಾರಿ ಕುಟುಂಬಗಳ ಎಚ್ಚರಿಕೆ

ಮತ್ತೊಂದು ಪ್ರಕರಣದಲ್ಲಿ ನಾಲ್ವರಿಗೆ ಗಾಯ

ಮತ್ತೊಂದು ಪ್ರಕರಣದಲ್ಲಿ ಇದೇ ತಾಲೂಕಿನ ಕಾಶೀಪುರ ಗ್ರಾಮದ ದಾರಿಯಲ್ಲೂ ಕಾಡಾನೆಯೊಂದು ದಾಳಿ ನಡೆಸಿದ್ದು, ಬಾಬಾನಾಯ್ಕ (55), ಭಾವಲ್ಯನಾಯ್ಕ (55), ಶಾಂತಿಬಾಯಿ (40) ಲಕ್ಷ್ಮೀಬಾಯಿ (40) ಎಂಬುವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಗಟೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾಡಾನೆಗಳ ದಾಳಿಯಿಂದ ಸೂಳೆಕೆರೆ ಸುತ್ತಮುತ್ತಲ ಹತ್ತಾರು ಗ್ರಾಮಗಳಲ್ಲಿ ಆತಂಕ ಉಂಟಾಗಿದೆ. ಯಾರೂ ಒಂಟಿಯಾಗಿ ಓಡಾಡಬಾರದು ಎಂದು ಅರಣ್ಯ ಇಲಾಖೆಯಿಂದ ಜನರಿಗೆ ಸೂಚನೆ ನೀಡಲಾಗಿದೆ.

ಕಾಡಾನೆಗಳು ಹೊಸದುರ್ಗ ಕಡೆಯಿಂದ ಜೋಳದಾಳ ಕಾಡಂಚಿನಿಂದ ಬಂದಿದ್ದು, ಸೋಮಲಾಪುರ ಮತ್ತು ಸುತ್ತಮುತ್ತಲಿನ ಗ್ರಾಮಗಳಿಗೆ ನುಗ್ಗಿ ದಾಂಧಲೆ ನಡೆಸುತ್ತಿವೆ. ಹೊಲಗದ್ದೆಗಳಲ್ಲಿ ಕೆಲಸ ಕಾರ್ಯದಲ್ಲಿ ಎಚ್ಚರಿಕೆ ವಹಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳು ನಿರ್ದೇಶಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏ.20ರಂದು ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟದ ವಿವರ ಇಲ್ಲಿದೆ

ರಾಜ್ಯದಲ್ಲಿ ವಾಡಿಕೆಯಂತೆ ಮಳೆಯಾಗದೆ. ಕರಾವಳಿ ಪ್ರದೇಶಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ,...

ಬೆಂಗಳೂರು ಗ್ರಾಮಾಂತರ | ಕಾಂಗ್ರೆಸ್‌ನ ಡಿ.ಕೆ. ಸುರೇಶ್ ಪರ ನಟ ದರ್ಶನ್ ಪ್ರಚಾರ

ಲೋಕಸಭಾ ಚುನಾವಣೆಯ ಹಿನ್ನೆಲೆ, ರಾಜ್ಯದಲ್ಲಿ ರಾಜಕೀಯ ಪಕ್ಷದ ಅಭ್ಯರ್ಥಿಗಳು ಪ್ರಚಾರ ಭರಾಟೆ...

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಹಿತಕ್ಕಾಗಿ ಸೌಮ್ಯ ರೆಡ್ಡಿಗೆ ಮತ ನೀಡಿ: ನಟ ಧ್ರುವ ಸರ್ಜಾ

ಲೋಕಸಭಾ ಚುನಾವಣೆ ಹಿನ್ನೆಲೆ, ಅಭ್ಯರ್ಥಿಗಳ ಪ್ರಚಾರದ ಭರಾಟೆ ಜೋರಾಗಿದೆ. ಬೆಂಗಳೂರು ದಕ್ಷಿಣ...

ಕಲಬುರಗಿ | ನೇಹಾಳ ಭೀಕರ ಕೊಲೆ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಲು ಎಸ್ಎಫ್ಐ ಆಗ್ರಹ

ಹುಬ್ಬಳ್ಳಿಯ ಬಿವಿಬಿ ಕಾಲೇಜ್ ಕ್ಯಾಂಪಸ್‌ನಲ್ಲಿ ನಡೆದ ವಿದ್ಯಾರ್ಥಿನಿ ನೇಹಾಳ ಭೀಕರ ಕೊಲೆ,...