ಶಾಂತಿ ಕದಡಿದರೆ ಬಜರಂಗದಳ, ಆರ್‌ಎಸ್‌ಎಸ್‌ ಸಂಘಟನೆಗಳ ನಿಷೇಧ : ಪ್ರಿಯಾಂಕ್‌ ಖರ್ಗೆ

Date:

  • ಯಾವುದೇ ಸಂಘಟನೆಗಳು ಕಾನೂನು ಕೈಗೆ ತೆಗೆದುಕೊಂಡರೆ ನಿಷೇಧ ಕಟ್ಟಿಟ್ಟ ಬುತ್ತಿ
  • ಹಿಜಾಬ್, ಹಲಾಲ್ ಕಟ್ ಹಾಗೂ ಗೋಹತ್ಯೆ ಕಾನೂನುಗಳ ಮೇಲಿನ ನಿಷೇಧ ಹಿಂದಕ್ಕೆ

ರಾಜ್ಯದಲ್ಲಿ ಶಾಂತಿ ಕದಡಿದರೆ ಬಜರಂಗದಳ ಮತ್ತು ಆರ್‌ಎಸ್‌ಎಸ್‌ನಂತಹ ಸಂಘಟನೆಗಳನ್ನು ತಮ್ಮ ಸರ್ಕಾರ ನಿಷೇಧಿಸುತ್ತದೆ. ಒಂದು ವೇಳೆ ಬಿಜೆಪಿ ನಾಯಕರಿಗೆ ಅದನ್ನು ಒಪ್ಪಿಕೊಳ್ಳಲು ಸಾಧ್ಯವಾಗದಿದ್ದರೆ ಪಾಕಿಸ್ತಾನಕ್ಕೆ ಹೋಗಬಹುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ.

- Advertisement -

ಬೆಂಗಳೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, “ನಾವು ಕರ್ನಾಟಕವನ್ನು ಸರ್ವ ಜನಾಂಗದ ಶಾಂತಿಯ ತೋಟ ಮಾಡುತ್ತೇವೆ ಎಂದು ಭರವಸೆ ನೀಡಿದ್ದೇವೆ. ಒಂದು ವೇಳೆ ಶಾಂತಿ ಕದಡಿದರೆ ಅದು ಬಜರಂಗದಳ ಅಥವಾ ಆರ್‌ಎಸ್‌ಎಸ್ ಎಂಬುದನ್ನು ನಾವು ಪರಿಗಣಿಸುವುದಿಲ್ಲ” ಎಂದು ಎಚ್ಚರಿಕೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

“ಹಿಜಾಬ್, ಹಲಾಲ್ ಕಟ್ ಮತ್ತು ಗೋ ಹತ್ಯೆ ಕಾನೂನುಗಳ ಮೇಲಿನ ನಿಷೇಧವನ್ನು ಸರ್ಕಾರ ಹಿಂಪಡೆಯಲಿದೆ. ಸಮಾಜದಲ್ಲಿ ಕಾನೂನು ಮತ್ತು ಪೊಲೀಸರ ಭಯವಿಲ್ಲದೆ ಕೆಲವು ಅಂಶಗಳು ಮುಕ್ತವಾಗಿ ವಿಹರಿಸುತ್ತಿವೆ. ಕಳೆದ ಮೂರು ವರ್ಷಗಳಿಂದ ಈ ಪ್ರವೃತ್ತಿ ನಡೆಯುತ್ತಿದೆ” ಎಂದಿದ್ದಾರೆ.

“ಕಾನೂನನ್ನು ಕೈಗೆ ತೆಗೆದುಕೊಂಡರೆ ನಿಷೇಧ ಕಟ್ಟಿಟ್ಟ ಬುತ್ತಿ. ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ಬಜರಂಗದಳ, ಆರ್‌ಎಸ್‌ಎಸ್ ಸೇರಿದಂತೆ ಯಾವುದೇ ಸಂಘಟನೆಯನ್ನು ನಿಷೇಧಿಸಲು ಹಿಂದೆ ಮುಂದೆ ಯೋಚಿಸುವುದಿಲ್ಲ” ಎಂದು ಹೇಳಿದ್ದಾರೆ.

“ಸಮಾಜದಲ್ಲಿ ಸ್ವಾಭಿಮಾನದಿಂದ ಬದುಕುವ ಕಾನೂನು ನಮಗೆ ಬೇಕಾಗಿದೆ. ಯಾರೋ ನಾಗಪುರದವರು ಆದೇಶಿಸುವ ಕಾನೂನು ನಮಗೆ ಬೇಕಾಗಿಲ್ಲ. ಬಿಜೆಪಿ ಸರ್ಕಾರದ ಅವಧಿಯಲ್ಲಿ ‘ಪುಣ್ಯಕೋಟಿ’ ಯೋಜನೆ ಪ್ರಾರಂಭ ಆಯಿತು. ಬಿಜೆಪಿ ಶಾಸಕರು ಯಾರೂ ಒಂದೇ ಒಂದು ಹಸುವನ್ನೂ ದತ್ತು ಪಡೆಯಲಿಲ್ಲ” ಎಂದು ಪ್ರಿಯಾಂಕ್‌ ಖರ್ಗೆ ಟಾಂಗ್‌ ನೀಡಿದರು.

ಈ ಸುದ್ದಿ ಓದಿದ್ದೀರಾ? ಷರತ್ತು ಇಲ್ಲದೆ ಗ್ಯಾರಂಟಿ ಯೋಜನೆ ಜಾರಿ ಮಾಡಿ, ಇಲ್ಲದಿದ್ದರೆ ವಿರೋಧಿ ಅಭಿಯಾನ: ಎಚ್‌ಡಿಕೆ ಎಚ್ಚರಿಕೆ

“ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಜನರು ಅವರನ್ನು ವಿರೋಧ ಪಕ್ಷದಲ್ಲಿ ಕೂರಿಸಲು ಕಾರಣವೇನು ಎಂಬುದನ್ನು ಬಿಜೆಪಿ ಅರ್ಥ ಮಾಡಿಕೊಳ್ಳಬೇಕು. ಕೇಸರೀಕರಣ ತಪ್ಪು ಎಂದು ಹೇಳಿದ್ದೇವೆ, ಎಲ್ಲರೂ ಅನುಸರಿಸಬಹುದಾದ ಬಸವಣ್ಣನವರ ತತ್ವಗಳನ್ನು ಕಾಂಗ್ರೆಸ್ ಅನುಸರಿಸುತ್ತದೆ” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಹಳೆಯ ದ್ವೇಷಕ್ಕೆ ಪಂಪ್ ಆಪರೇಟರ್ ಬಲಿ; ಚಾಕು ಇರಿದು ಬರ್ಬರ ಹತ್ಯೆ

ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಪಂಪ್ ಆಪರೇಟರ್‌ ಒಬ್ಬರ ಮೇಲೆ ಮಾರಕಾಸ್ತ್ರದಿಂದ ದಾಳಿ...

ಕಲಬುರಗಿ | ನಾಪತ್ತೆಯಾಗಿದ್ದ ಹೋಟೆಲ್‌ ವ್ಯಾಪಾರಿ ಶವವಾಗಿ ಪತ್ತೆ; ಕೊಲೆ ಶಂಕೆ

ಕಳೆದ ಶುಕ್ರವಾರದಿಂದ ನಾಪತ್ತೆಯಾಗಿದ್ದ ನಗರದ ಹೋಟೆಲ್‌ ವ್ಯಾಪಾರಿಯೊಬ್ಬರು ನಗರದ ಹೊರವಲಯದಲ್ಲಿ ಶವವಾಗಿ...

ಹಾಸನ | ರೈತರಿಗೆ ಹೆಚ್ಚಿನ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಡ

ಹಾಸನ ಜಿಲ್ಲೆ ಆಲೂರು ತಾಲ್ಲೂಕನ್ನು ತೀವ್ರ ಬರಪೀಡಿತ ಪ್ರದೇಶವೆಂದು ಘೋಷಿಸಲಾಗಿದ್ದು, ರೈತರಿಗೆ...

ಯಾದಗಿರಿ | ಕಾಂಗ್ರೆಸ್‌ ತೆಕ್ಕೆಗೆ ಯುವ ನಾಯಕ ವೀರಾರಡ್ಡಿ ಮುನ್ನಾಳ

ಗುರುಮಿಠಕಲ್, ಯಾದಗಿರಿ ಮತಕ್ಷೇತ್ರದ ಯುವ ನಾಯಕ ಬಿ.ಎಸ್. ವೀರಾರಡ್ಡಿ ಮುನ್ನಾಳ ಅವರು...