ಉಡುಪಿಯಲ್ಲಿ 5 ವರ್ಷದ ಬಾಲಕಿ ಮೇಲೆ ಹಾಡುಹಗಲೇ ಲೈಂಗಿಕ ದೌರ್ಜನ್ಯ ನಡೆದ ಘಟನೆ ಆಘಾತಕಾರಿಯಾಗಿದ್ದು ಇದನ್ನು ವಿಮೆನ್ ಇಂಡಿಯಾ ಮೂವ್ಮೆಂಟ್ ಖಂಡಿಸುತ್ತದೆ.
ಆರೋಪಿಯು ಚಾಕೋಲೇಟ್ ನೀಡುವ ನೆಪದಲ್ಲಿ ಬಾಲಕಿ ಮೇಲೆ ಲೈಂಗಿಕ ಕಿರುಕುಳ ನೀಡುತ್ತಿರುವುದು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಪೊಲೀಸರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಆರೋಪಿಯನ್ನು ಶೀಘ್ರವಾಗಿ ಬಂಧಿಸಬೇಕು ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ವಿಮೆನ್ ಇಂಡಿಯಾ ಮೂವ್ಮೆಂಟ್ ಉಡುಪಿ ಜಿಲ್ಲಾಧ್ಯಕ್ಷೆ ನಾಝಿಯಾ ನಸ್ರುಲ್ಲಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
