ಉಡುಪಿ | ಕೇಂದ್ರ-ರಾಜ್ಯ ಸರ್ಕಾರಗಳ ಬೆಲೆ ಏರಿಕೆ ವಿರುದ್ಧ ಪ್ರತಿಭಟನಾ ಅಭಿಯಾನ – ವಿಮೆನ್ ಇಂಡಿಯಾ ಮೂವ್ಮೆಂಟ್

Date:

Advertisements

ಈಗಾಗಲೇ ದಿನ ಬಳಕೆ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿರುವ ಜನತೆಗೆ ಅತ್ತ ಕೇಂದ್ರ ಬಿಜೆಪಿ ಸರ್ಕಾರ ಅಡುಗೆ ಅನಿಲ ದರವನ್ನು ಹೆಚ್ಚಿಸಿದರೆ, ಇತ್ತ ರಾಜ್ಯ ಕಾಂಗ್ರೆಸ್ ಸರ್ಕಾರ ವಿದ್ಯುತ್, ಹಾಲು, ನೀರು, ಬಸ್ ದರಗಳನ್ನು ಏರಿಸಿದ್ದು ಇದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಅದರ ಜೊತೆಗೆ ಜನಸ್ನೇಹಿಯಾಗಿದ್ದ ನಮ್ಮ ಮೆಟ್ರೋ ರೈಲಿನ ದರ ಏರಿಕೆಯಿಂದ ಜನಸಾಮಾನ್ಯರು ಮತ್ತೆ ತಮ್ಮ ಖಾಸಗಿ ವಾಹನಗಳ ಕಡೆ ಮುಖ ಮಾಡುವಂತಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರಾಜ್ಯದ ಜನತೆಯ ಮೇಲೆ ಮಿತಿಮೀರಿದ ಆರ್ಥಿಕ ಹೊರೆಯನ್ನು ಹೇರುತ್ತಿರುವುದರ ವಿರುದ್ಧ ವಿಮೆನ್ ಇಂಡಿಯಾ ಮೂವ್ಮೆಂಟ್ ಉಡುಪಿ ಜಿಲ್ಲಾ ಸಮಿತಿಯು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತದೆ ಎಂದು ವಿಮೆನ್ ಇಂಡಿಯಾ ಮೂವ್ಮೆಂಟ್ ನ ಉಡುಪಿ ಜಿಲ್ಲಾಧ್ಯಕ್ಷೆ ನಾಝಿಯಾ ನಸ್ರುಲ್ಲ ಹೇಳಿದರು.

ಉಡುಪಿಯ ಪತ್ರಿಕಾಭವನದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಾಗತಿಕವಾಗಿ ತೈಲ ಬೆಲೆಗಳು ಇಳಿಯುತ್ತಿದ್ದರೂ ಸಹ ತೈಲಗಳ ಮೇಲೆ ಅಬಕಾರಿ ಸುಂಕ ಹೆಚ್ಚಳ ಮಾಡುವ ಮೂಲಕ ಸರ್ಕಾರ ಹಗಲು ದರೋಡೆಗೆ ಇಳಿದಿರುವುದು ಸ್ಪಷ್ಟವಾಗಿ ಕಾಣುತ್ತಿದೆ. ಕಚ್ಚಾತೈಲಗಳ ಬೆಲೆ ಕುಸಿತದ ಲಾಭ ಜನ ಸಾಮಾನ್ಯರಿಗೆ ದೊರಕದಂತೆ ಮಾಡಲಾಗಿದೆ. ಬಡ, ಮಧ್ಯಮ ವರ್ಗಗಳಿಗೆ ಅಭಿವೃದ್ಧಿಯ ಭರವಸೆ ನೀಡಿ ಅಧಿಕಾರಕ್ಕೆ ಏರಿರುವ ಸರ್ಕಾರಗಳು ಇದೀಗ ಜನತೆಯ ದೈನಂದಿನ ಜೀವನವನ್ನೇ ತ್ರಾಸದಾಯಕವನ್ನಾಗಿಸಿವೆ.

ಒಂದು ಕಡೆ ಅಚ್ಛೇದಿನ್ ಹೆಸರಲ್ಲಿ ಕೇಂದ್ರ ಸರ್ಕಾರ, ಗ್ಯಾರಂಟಿ ಯೋಜನೆಗಳ ಮೂಲಕ ತಮ್ಮದು ಜನಪರ ಸರ್ಕಾರ ಎನ್ನುವ ರಾಜ್ಯ ಸರ್ಕಾರ ಎರಡೂ ಸೇರಿಕೊಂಡು ಬೆಲೆ ಏರಿಕೆಯಿಂದ ಜನರನ್ನೇ ಲೂಟಿ ಮಾಡುತ್ತಿವೆ. ಇದು ಸಾಲದೆಂಬಂತೆ ಪರಸ್ಪರ ಕೆಸೆರೆರಚಾಟದಲ್ಲಿ ತೊಡಗಿ ಜನರ ಗಮನ ಅತ್ತಕಡೆ ಸೆಳೆದು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿರುವ ಕೇಂದ್ರ ಬಿಜೆಪಿ ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರಗಳು ನಿರಂತರವಾಗಿ ಜನರ ಕಣ್ಣಿಗೆ ಮಣ್ಣೆರಚುವ ಪ್ರಯತ್ನ ಮಾಡುತ್ತಿವೆ‌ ಎಂದು ಹೇಳಿದರು.

Advertisements

ವಸಾಹತುಶಾಹಿ ಬ್ರಿಟಿಷರ ಜನವಿರೋಧಿ ನೀತಿಗಳಂತೆ ಇಂದು ಕೂಡ ಅಗತ್ಯ ಸೇವಾ ಕ್ಷೇತ್ರಗಳನ್ನು ಖಾಸಗೀಕರಣಗೊಳಿಸಿ ದೇಶದ ಜನತೆಯನ್ನು ಆರ್ಥಿಕ ಸಂಕಷ್ಟಕ್ಕೆ ಈಡುಮಾಡಲಾಗುತ್ತಿದೆ. ಅತ್ಯವಶ್ಯಕ ವಸ್ತುಗಳ ಖರೀದಿಗೂ ಭಾರಿ ತೆರಿಗೆ ಪಾವತಿಸಬೇಕಾದಂತ ದುಸ್ಥಿತಿ ಉಂಟಾಗಿದೆ ಎಂದು ಹೇಳಿದರು.

ಜನರ ಹಿತಾಸಕ್ತಿ ಕಾಪಾಡುವಲ್ಲಿ ಸಂಪೂರ್ಣ ಎಡುವಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನ ವಿರೋಧಿ ನೀತಿಗಳ ವಿರುದ್ಧ ಏಪ್ರಿಲ್‍ 18 ರಿಂದ 28 ರ ವರೆಗೆ ರಾಜ್ಯದಾದ್ಯಂತ ಪ್ರತಿಭಟನಾ ಅಭಿಯಾನ ಹಮ್ಮಿಕೊಳ್ಳಲು ವಿಮೆನ್ ಇಂಡಿಯಾ ಮೂವ್ಮೆಂಟ್ ತೀರ್ಮಾನಿಸಿದ್ದು ಇದರ ಅಂಗವಾಗಿ ದಿನಾಂಕ 26-04-2025 ರಂದು ಕಾಪುವಿನಲ್ಲಿ ಹಾಗೂ 28-04-2025 ರಂದು ಉಡುಪಿ DC ಕಛೇರಿ ಮುಂಭಾಗದಲ್ಲಿ ಪ್ರತಿಭಟನೆಯನ್ನು ನಡೆಸಲು ತೀರ್ಮಾನಿಸಿದ್ದೇವೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ವಿಮೆನ್ ಇಂಡಿಯಾ ಮೂವ್ಮೆಂಟ್ ಉಡುಪಿ ಜಾಲ್ಲಾ ಉಪಾಧ್ಯಕ್ಷೆ ನಸೀಮಾ, ಜಿಲ್ಲಾ ಸಮಿತಿ ಸದಸ್ಯರಾದ ನಸೀಮ್ ಫಾತಿಮಾ, ಜೋಹಾರ, ರಹಮತುನ್ನಿಸಾ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X