ಪಿರಿಯಾಪಟ್ಟಣ | ಸಿಡಿಲು ಬಡಿದು ಮಹಿಳೆ ಹಾಗೂ ಎರಡು ಹಸುಗಳ ದುರ್ಮರಣ

Date:

ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಸತ್ಯಗಾಲ ಗ್ರಾಮದಲ್ಲಿ ಶನಿವಾರ ಸುರಿದ ಭಾರಿ ಮಳೆಯ ವೇಳೆ ಸಿಡಿಲು ಬಡಿದು ಮಹಿಳೆಯೊಬ್ಬರು ಹಾಗೂ ಎರಡು ಹಸುಗಳು ಸಾವನ್ನಪ್ಪಿದ ದುರ್ಘಟನೆ ನಡೆದಿದೆ. ಘಟನೆಯಿಂದ ಗ್ರಾಮದಲ್ಲಿ ಶೋಕ ಮಡುಗಟ್ಟಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

- Advertisement -

ಮೃತ ಮಹಿಳೆಯನ್ನು ವಿನೋದ ಎಂದು ಗುರುತಿಸಲಾಗಿದೆ. ಅವರು ಮೂಲತಃ ಆಲನಹಳ್ಳಿ ಗ್ರಾಮದವರಾಗಿದ್ದು, ತಂದೆ ದೊಡ್ಡ ಸೋಮಾಚಾರ ಅವರು ಮದುವೆ ಮಾಡಿ ಸತ್ಯಗಾಲ ಗ್ರಾಮಕ್ಕೆ ಕಳುಹಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಶನಿವಾರ ಸಂಜೆ ಸುರಿದ ಭಾರೀ ಮಳೆಯ ಸಂದರ್ಭ ತಮ್ಮ ಜಮೀನಿನಲ್ಲಿ ಕಟ್ಟಿ ಹಾಕಿದ್ದ ಎರಡು ಹಸುಗಳನ್ನು ಕರೆತರಲು ತೆರಳಿದ್ದ ವೇಳೆ ಏಕಾಏಕಿ ಸಿಡಿಲು ಬಡಿದ ಪರಿಣಾಮ ವಿನೋದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜೊತೆಗೆ ಎರಡು ಹಸುಗಳೂ ಸಹ ಸಾವನ್ನಪ್ಪಿವೆ ಎಂದು ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ?ಮೈಸೂರು | ಗುಡುಮಾದನಹಳ್ಳಿ ಕೃಷಿ ಭೂಮಿಯಲ್ಲಿ ನಿಮ್ಹಾನ್ಸ್ ಆಸ್ಪತ್ರೆ ನಿರ್ಮಾಣ ವಿರೋಧಿಸಿ ರೈತರ ಪ್ರತಿಭಟನೆ

ವಿನೋದ ಅವರಿಗೆ ಇಬ್ಬರು ಹೆಣ್ಣು ಮಕ್ಕಳು ಇದ್ದಾರೆ. ಘಟನೆ ಹಿನ್ನೆಲೆಯಲ್ಲಿ ಕುಟುಂಬಸ್ಥರ ರೋದನ ಮನಕಲಕುವಂತಿತ್ತು.

ಈ ವಿಶೇಷ ಸುದ್ದಿ ಓದಿದ್ದೀರಾ? ಆಶಾ ಕಾರ್ಯಕರ್ತೆಯರಿಗೆ ₹264.14 ಕೋಟಿ ಬಾಕಿ ಪ್ರೋತ್ಸಾಹ ಧನ ಬಿಡುಗಡೆ: ಬಗೆಹರಿಯದ ʼಆಶಾ ಸಾಫ್ಟ್ʼ ತಾಂತ್ರಿಕ ದೋಷ

ಈ ಕುರಿತು ಮೃತರ ಪತಿ ಚಿತ್ರಶೇಖರ್ ಅವರು ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮೃತದೇಹವನ್ನು ಪಿರಿಯಾಪಟ್ಟಣ ಸರ್ಕಾರಿ ಆಸ್ಪತ್ರೆ ಸಮೀಪದ ಶವಗಾರದಲ್ಲಿ ಮರಣೋತ್ತರ ಪರೀಕ್ಷೆಗೆ ಇರಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯದ ಚರ್ಚೆ: ಅನ್ನಪೂರ್ಣ ಹೆಸರು ಮುನ್ನೆಲೆಗೆ!

ರಾಜ್ಯ ಸಚಿವ ಸಂಪುಟದಲ್ಲಿ ಸದ್ಯ ಎರಡು ಸಚಿವ ಸ್ಥಾನಗಳು ಖಾಲಿ ಉಳಿದಿದ್ದು,...

ಕೊಡಗಿನಲ್ಲಿ ಮಳೆ ಕೊರತೆ; ಭತ್ತಕ್ಕೆ ಬೆಂಕಿ ರೋಗ-ಕೀಟ ಬಾಧೆ

ಕೊಡಗು ಎಂದರೆ ಕಾಫಿ ತೋಟಗಳು, ಮೆಣಸಿನ ಬಳ್ಳಿ, ಶುಂಠಿ ಹಾಗೂ ಭತ್ತದ...

ಚಿಕ್ಕಮಗಳೂರು | ಬೇಟೆ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ ಯುವಕ ಸಾವು

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕಿನ ಹಿರೇಗದ್ದೆ ಗ್ರಾಮದಲ್ಲಿ ಗುರುವಾರ ರಾತ್ರಿ ಬೇಟೆಯಾಡುತ್ತಿದ್ದ...

ಚೈತ್ರಾ ಗೋಶಾಲೆಗೆ ರೈತ ಸಂಘ ಮುತ್ತಿಗೆ; 7 ಹಸು-ಕರುಗಳ ಬಿಡುಗಡೆ

ನ್ಯಾಯಾಲಯದ ಆದೇಶವಿದ್ದರೂ ರೈತರಿಗೆ ಹಸುಗಳನ್ನು ಹಸ್ತಾಂತರಿಸದೆ ವಿಳಂಬ ಮಾಡಲಾಗುತ್ತಿದೆ ಎಂದು ಆರೋಪಿಸಿ,...