ಬೀದರ್‌ | ಸಾಲಬಾಧೆಯಿಂದ ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ : ಮನೆಗೆ ತಹಸೀಲ್ದಾರ್‌ ಭೇಟಿ

Date:

ಹುಲಸೂರ ತಾಲ್ಲೂಕಿನ ಗಡಿಗೌಡಗಾಂವ ಗ್ರಾಮದಲ್ಲಿ ಸಾಲಬಾಧೆಯಿಂದ ನೊಂದು ನೇಣು ಬಿಗಿದುಕೊಂಡು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

- Advertisement -

ರೇಷ್ಮಾ ಸುನಿಲ್ ಸೂರ್ಯವಂಶಿ (25) ಮೃತ ಮಹಿಳೆ. ಸ್ಥಳೀಯ 6 ಸ್ವ-ಸ್ವಹಾಯ ಸಂಘಗಳಲ್ಲಿ 3 ಲಕ್ಷಕ್ಕೂ ಅಧಿಕ ಸಾಲ ಪಡೆದಿದ್ದರು. ಸಕಾಲಕ್ಕೆ ಸಾಲ ತೀರಿಸಲು ಸಾಧ್ಯವಾಗದೆ ಮಹಿಳೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಈ ಕುರಿತು ಹುಲಸೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಹಸೀಲ್ದಾರ್‌ ಶಿವಾನಂದ ಮೇತ್ರೆ ಭೇಟಿ :

ಸಾಲ ತೀರಿಸಲು ಸಾಧ್ಯವಾಗದೆ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಗಡಿಗೌಡಗಾಂವ್‌ ಗ್ರಾಮದ ರೇಷ್ಮಾ ಸೂರ್ಯವಂಶಿ ಅವರ ಮನೆಗೆ ಶುಕ್ರವಾರ ಹುಲಸೂರ ತಹಶೀಲ್ದಾರ್‌ ಶಿವಾನಂದ ಮೇತ್ರೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಆತ್ಮಹತ್ಯೆಗೆ ಕಾರಣವಾದ ವಿಷಯ ಕುರಿತು ಮಾಹಿತಿ ಪಡೆದರು. ಕೂಡಲೇ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುವುದಾಗಿ ಭರವಸೆ ನೀಡಿದರು.

ʼಮೃತರು ಸ್ಥಳೀಯ 5-6 ಖಾಸಗಿ ಸ್ವ-ಸಹಾಯ ಸಂಘಗಳಲ್ಲಿ ಸಾಲ ಪಡೆದಿದ್ದರು ಎಂದು ತಿಳಿದು ಬಂದಿದು, ಈ ಬಗ್ಗೆ ತಾಲ್ಲೂಕಿನ ಎಲ್ಲ ಸಂಘಗಳ ಮುಖ್ಯಸ್ಥರೊಂದಿಗೆ ಸೋಮವಾರ ಸಭೆ ನಡೆಸಿ, ಸಾಲ ಸಂಬಂಧ ಯಾರಿಗೂ ಕಿರುಕುಳ ಕೊಡದಂತೆ ನಿರ್ದೇಶನ ನೀಡಲಾಗುವುದು. ಒಂದು ವೇಳೆ ಇಂಥ ಪ್ರಕರಣಗಳು ಮರುಕಳಿಸಿದರೆ ಕಾನೂನು ಕ್ರಮಕೈಗೊಳ್ಳಲಾಗುವುದುʼ ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ವೈಜ್ಞಾನಿಕ ತಂತ್ರಜ್ಞಾನ ಅಳವಡಿಸಿಕೊಂಡು ಹೆಚ್ಚಿನ ಇಳುವರಿ ಪಡೆಯಿರಿ: ಜಾಬಾ ಜಗದೀಶ

ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಿದ ಬೆಳೆ ತಳಿಗಳನ್ನು ಬಳಸಿಕೊಳ್ಳುವ ಮೂಲಕ ರೈತರು ಕಡಿಮೆ ಅವಧಿಯಲ್ಲಿ...

ಗದಗ | ಕೇಂದ್ರ ಸಚಿವ ಪ್ರಲ್ಹಾದ ಜೋಶಿಗೆ ಮನವಿ ಸಲ್ಲಿಸುವ ಮುನ್ನವೇ ಕಬ್ಬು ಬೆಳೆಗಾರರು ಪೋಲಿಸರ ವಶ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆ ಕುರಿತಂತೆ ಕೇಂದ್ರ ಸಚಿವ ಪ್ರಹ್ಲಾದ...

ಬೀದರ್ ದಕ್ಷಿಣ | ಜಿಪಂ ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿಗೆ ಅನ್ಯಾಯ: ಜನಪ್ರತಿನಿಧಿಗಳಿಗೆ ಎಚ್ಚರಿಕೆ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಆರು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಲ್ಲಿ...

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...