ಬೆಂಗಳೂರಿನ ಮಹದೇವಪುರದ ಚನ್ನಸಂದ್ರದಲ್ಲಿ ಇಂದು ಬೆಳಗ್ಗೆ ಕಾಂಪೌಂಡಿನ ಗೋಡೆ ಕುಸಿದು 35 ವರ್ಷದ ಶಶಿಕಲಾ ಎಂಬ ಮಹಿಳೆ ಸಾವನ್ನಪ್ಪಿದ್ದ ಘಟನೆ ವರದಿಯಾಗಿತ್ತು. ಇದೀಗ ಮೃತ ಮಹಿಳೆ ಕುಟುಂಬಕ್ಕೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ 5 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದೆ.
ಯಾದಗಿರಿ ಜಿಲ್ಲೆ ಶಹಾಪುರ ಮೂಲದ ಶಶಿಕಲಾ ಕುಟುಂಬ ಬೆಂಗಳೂರಿನಲ್ಲಿ ನಲೆಸಿತ್ತು. ಪತಿ ಕೂಲಿ ಕೆಲಸ ಮಾಡಿ ಜೀವನ ನಿರ್ವಹಿಸುತ್ತಿದ್ದರು. ಐ ಝಡ್ ಕಂಪನಿಯಲ್ಲಿ ಶಶಿಕಲಾ ಹೌಸ್ ಕೀಪಿಂಗ್ ಕೆಲಸ ಮಾಡುತಿದ್ದರು. ಕೆಲಸದ ಸ್ಥಳದಲ್ಲಿದ್ದ ಕಾಂಪೌಂಡ್ ಗೋಡೆ ರಾತ್ರಿಯಿಡೀ ಸುರಿದ ಮಳೆಗೆ ನೆಂದು ಕುಸಿದು ಶಶಿಕಲಾ ಮೇಲೆ ಬಿದ್ದಿತ್ತು. ಪರಿಣಾಮ ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದರು.
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.
ಇದನ್ನೂ ಓದಿ: ಬೆಂಗಳೂರು | ಶಾಲೆಗೆ ತೆರಳುತ್ತಿದ್ದ ಬಾಲಕಿ ಮೇಲೆ ಹರಿದ ಬಿಎಂಟಿಸಿ ಬಸ್; ಸಾವು