ಬಟ್ಟೆ ಒಣ ಹಾಕುವ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಓರ್ವ ಮಹಿಳೆ ಸಾವನ್ನಪ್ಪಿದ ಘಟನೆ ಚಿತ್ತಾಪುರ ತಾಲೂಕಿನ ಕಮರವಾಡಿ ಗ್ರಾ.ಪಂ. ವ್ಯಾಪ್ತಿಯ ರಾಮನಗರ ತಾಂಡಾದಲ್ಲಿ ಇಂದು ಮಧ್ಯಾಹ್ನ ಜರುಗಿದೆ.
ರಾಮನಗರ ತಾಂಡಾದ ನಿವಾಸಿ ಕವಿತಾ ಫುಲ್ಸಿಂಗ್ ಚಹ್ವಾಣ (45) ಮೃತ ದುರ್ದೈವಿ ಡಂದು ಗುರುತಿಸಲಾಗಿದೆ. ಮನೆಯ ಮೇಲ್ಚಾವಣಿ ಮೇಲೆ ಬಟ್ಟೆ ಒಣ ಹಾಕಲು ಹೋದ ವೇಳೆ ವಿದ್ಯುತ್ ಆವರಿಸಿಕೊಂಡ ಪರಿಣಾಮ ಮಹಿಳೆ ಮೃತಪಟ್ಟಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಈ ಸುದ್ದಿ ಓದಿದ್ದೀರಾ? ನ್ಯಾಯ ಯಾತ್ರೆ | ಸೀಟು ಹಂಚಿಕೆಯಾದ ಬೆನ್ನಲ್ಲೇ ರಾಹುಲ್ ಜೊತೆ ಹೆಜ್ಜೆ ಹಾಕಿದ ಅಖಿಲೇಶ್
ಚಿತ್ತಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.