ಬಸ್‌ನಲ್ಲೇ ಮಗುವಿಗೆ ಜನ್ಮ; ನಿರ್ವಾಹಕಿ ಕಾರ್ಯಕ್ಕೆ ಶ್ಲಾಘನೆ

Date:

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಿರ್ವಾಹಕಿಯೊಬ್ಬರು ತುಂಬು ಗರ್ಭಿಣಿಗೆ ಹೆರಿಗೆ ಮಾಡಿಸಿರುವ ಘಟನೆ ನಡೆದಿದೆ. ಈ ಮಾನವೀಯ ಕಾರ್ಯವನ್ನು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕಿ ಜಿ ಸತ್ಯವತಿ ಶ್ಲಾಘಿಸಿದ್ದಾರೆ.  

- Advertisement -

ಮೇ 15ರಂದು ಬಿಹಾರ ಮೂಲದ ಗರ್ಭಿಣಿ ಮಹಿಳೆ ಕೂಲಿ ಕೆಲಸಕ್ಕಾಗಿ ಚಿಕ್ಕಮಗಳೂರು ಬಸ್‌ನಲ್ಲಿ ಮೂಡುಗೆರೆಗೆ ಪ್ರಯಾಣಿಸುತ್ತಿದ್ದರು. ಮಧ್ಯಾಹ್ನ ಒಂದು ಗಂಟೆಗೆ ಆಕೆಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಇದನ್ನು ಗ್ರಹಿಸಿದ ನಿರ್ವಾಹಕಿ ವಸಂತಮ್ಮ ಬಸ್ ನಿಲ್ಲಿಸಲು ಸೂಚಿಸಿ, ಬಸ್‌ನಲ್ಲೇ ಮಹಿಳೆಗೆ ಹೆರಿಗೆ ಮಾಡಿದ್ದಾರೆ. ಹೆರಿಗೆಗೆ ಬಸ್‌ನಲ್ಲಿದ್ದ ಬೆಂಗಳೂರು ಮೂಲದ ಮಹಿಳೆಯೊಬ್ಬರು ಸಹ ಸಹಾಯ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಡತನದ ಮಾಪನ ಮತ್ತು ವಾಸ್ತವ ಚಿತ್ರಣ: ಆಳ ಅಗಲ

ವಿಶ್ವಬ್ಯಾಂಕ್‌ನ ಬಡತನ ಮತ್ತು ಸಮಾನತೆಯ ಇತ್ತೀಚಿನ ವರದಿಯ ಪ್ರಕಾರ 2011ರಿಂದ 2023ರ ಅವಧಿಯಲ್ಲಿ ಭಾರತದಲ್ಲಿ ಅಂದಾಜು 49.6 ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ. ಈ ವರದಿಯನ್ನು ಆಧರಿಸಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ...

ಗಾಂಧೀಯ ‘ರಾಮ’-ಮನುವಾದಿಗಳ ‘ಶ್ರೀರಾಮ’ನಲ್ಲ

ಸಮಾನತೆಯ ರಾಮರಾಜ್ಯಕ್ಕೂ, ವರ್ಣಾಶ್ರಮದ ರಾಜಕಾರಣಕ್ಕೂ ಇರುವ ವ್ಯತ್ಯಾಸವೇನು? ಗಾಂಧೀಜಿಯವರ ಪಾಲಿಗೆ ರಾಮ ಎಂದರೆ ಸತ್ಯ, ಅಹಿಂಸೆ, ಪ್ರೀತಿ ಮತ್ತು ಸರ್ವಧರ್ಮ ಸಮಭಾವದ ಸಂಕೇತ; ಅಂಬೇಡ್ಕರ್ ಅವರ ವಿಮರ್ಶೆಯಲ್ಲಿ ಪುರಾಣದ ರಾಮನ ಆಡಳಿತದಲ್ಲಿ ಜಾತಿ...

ಮಂಡೇಲ ನೇತೃತ್ವದಲ್ಲಿ ಗುಲಾಮಗಿರಿ – ವರ್ಣಭೇದ ನೀತಿ ವಿರುದ್ಧ...

ನೆಲ್ಸನ್ ಮಂಡೇಲಾ ಅವರಂತಹ ಮಹಾನ್ ನಾಯಕರು ಕಟ್ಟಿದ್ದ ಈ ಪಕ್ಷ ದಾರಿ ತಪ್ಪಿದ್ದಾದರೂ ಹೇಗೆ ಎಂಬ ಪ್ರಶ್ನೆಗೆ ರಾಜಕೀಯ ತಜ್ಞರು ಸ್ಪಷ್ಟ ಕಾರಣಗಳನ್ನು ನೀಡಿದ್ದಾರೆ. ಆಡಳಿತಶಾಹಿಯ ಭ್ರಷ್ಟಾಚಾರ, ಮಿತಿಮೀರಿದ ಬಡತನ, ನಿರುದ್ಯೋಗ, ಮತ್ತು...

ಮಹಿಳೆ ಆರ್ಥಿಕವಾಗಿ ದುರ್ಬಲರಾಗಿದ್ದ ಕಾರಣ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು ಎಂದು ಅರಿತ ಬಸ್‌ ಸಿಬ್ಬಂದಿ ಮತ್ತು ಪ್ರಯಾಣಿಕರು ಮಹಿಳೆಯ ತುರ್ತು ಖರ್ಚಿಗಾಗಿ ₹1500 ನೀಡಿದ್ದಾರೆ. ತಾಯಿ ಮತ್ತು ಮಗುವನ್ನು ಆಂಬುಲೆನ್ಸ್ ಮೂಲಕ ಶಾಂತಿಗ್ರಾಮ ಆಸ್ಪತ್ರೆಗೆ ಕಳುಹಿಸಿದ್ದಾರೆ. ಸದ್ಯ ತಾಯಿ-ಮದು ಆರೋಗ್ಯವಾಗಿದ್ದಾರೆ ಎಂದು ತಿಳಿದುಬಂದಿದೆ.

ಸಕಾಲದಲ್ಲಿ ಗರ್ಭಿಣಿಗೆ ಸ್ಪಂದಿಸಿ ಮಗು‌ ಮತ್ತು ತಾಯಿಯನ್ನು‌ ಉಳಿಸಿ, ಮಾನವೀಯತೆ ಮೆರೆದ ನಿರ್ವಾಹಕಿ ಕಾರ್ಯವನ್ನು ವ್ಯವಸ್ಥಾಪಕ ನಿರ್ದೇಶಕರಾದ ಜಿ.ಸತ್ಯವತಿ ಶ್ಲಾಘಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ದಾವಣಗೆರೆ | ಬೀದಿ ನಾಯಿಗಳ ದಾಳಿಗೆ 15 ಕುರಿಗಳು ಬಲಿ

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ |6 ಪಟ್ಟಣ ಪಂಚಾಯಿತಿಗಳ ಮೇಲೆ ಲೋಕಾಯುಕ್ತ ದಾಳಿ

ಇ-ಸ್ವತ್ತು, ಎನ್‌ಓಸಿ, ಕಟ್ಟಡ ಪರವಾನಗಿ ಸೇರಿದಂತೆ ವಿವಿಧ ಅಕ್ರಮಗಳ ಆರೋಪ, 41...

ಕೋಲಾರ | ಅಬಕಾರಿ ಇಲಾಖೆಯ ಅಕ್ರಮಗಳ ತನಿಖೆಗೆ ಆಗ್ರಹ: ಕ್ರಮ ಕೈಗೊಳ್ಳದಿದ್ದರೆ ಅಮರಣಾಂತ ಉಪವಾಸ ಸತ್ಯಾಗ್ರಹದ ಎಚ್ಚರಿಕೆ

ಜಿಲ್ಲೆಯಲ್ಲಿ ಅಬಕಾರಿ ಇಲಾಖೆಯಲ್ಲಿ ನಡೆಯುತ್ತಿದೆ ಎನ್ನಲಾದ ಭ್ರಷ್ಟಾಚಾರ ಮತ್ತು ಅಕ್ರಮಗಳ ಕುರಿತು...

ವಿಜಯಪುರ |ತಿಕೋಟಾದಲ್ಲಿ ರಾಜ್ಯಮಟ್ಟದ ವಿಜ್ಞಾನ ಜಾತ್ರೆಗೆ ಕ್ಷಣಗಣನೆ

ಗ್ರಾಮೀಣ ಭಾಗದ ಮಕ್ಕಳಲ್ಲಿ ವೈಜ್ಞಾನಿಕ ಚಿಂತನೆ, ಸಂಶೋಧನಾ ಮನೋಭಾವ ಹಾಗೂ ವೈಚಾರಿಕ...

ವಿಜಯಪುರ |ಮೀಸಲಾತಿ ಹೆಚ್ಚಳಕ್ಕೆ ಕಾನೂನು ಮಾನ್ಯತೆ ನೀಡಿ; ಜಾತಿ ಜನಗಣತಿ ವರದಿ ಬಿಡುಗಡೆ ಮಾಡಿ

ಪರಿಶಿಷ್ಟ ಜಾತಿ (ಎಸ್‌ಸಿ) ಮೀಸಲಾತಿಯನ್ನು ಈಗಿರುವ ಶೇ.15ರಿಂದ ಶೇ.17ಕ್ಕೆ ಹೆಚ್ಚಿಸಬೇಕು. ಪರಿಶಿಷ್ಟ...