ಕೊಡಗು | ಮಸೀದಿಯಲ್ಲಿ ನಮಾಜ್ ಮಾಡಿದ್ದ ಮಹಿಳೆ; ಕುಟುಂಬಕ್ಕೆ 25 ವರ್ಷಗಳಿಂದ ಬಹಿಷ್ಕಾರ

Date:

ಮುಸ್ಲಿಂ ಮಹಿಳೆಯೊಬ್ಬರು ಮಸೀದಿಯಲ್ಲಿ ನಮಾಜ್ ಮಾಡಿದ್ದಕ್ಕೆ, ಅವರ ಕುಟುಂಬಕ್ಕೆ ಗ್ರಾಮದಲ್ಲಿ ಬಹಿಷ್ಕಾರ ಹಾಕಲಾಗಿದೆ. 25 ವರ್ಷಗಳಿಂದ ಕುಟುಂಬವು ಬಹಿಷ್ಕಾರದ ಸುಳಿಗೆ ಸಿಲುಕಿದೆ ಎಂದು ಆರೋಪಿಸಲಾಗಿದೆ.

- Advertisement -

ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಗುಂಡಿಗೆರೆಯಲ್ಲಿ ಮಹಿಳೆ ಜುಬೈದಾ ಅವರ ಕುಟುಂಬಕ್ಕೆ 25 ವರ್ಷಗಳ ಹಿಂದೆಯೇ ಬಹಿಷ್ಕಾರ ಹಾಕಲಾಗಿದೆ. ಇದೀಗ, ಎರಡು ದಿನಗಳ ಹಿಂದೆ ಜುಬೈದಾ ಅವರ ಪತಿ ಅಹಮ್ಮದ್ ಅನಾರೋಗ್ಯದಿಂದ ಮೃತಪಟ್ಟಿದ್ದರು. ಅವರ ಅಂತ್ಯಕ್ರಿಯೆಯಲ್ಲಿ ಜುಬೈದಾ ಭಾಗವಹಿಸಲು ಶಾಫಿ ಮಸೀದಿ ಜಮಾಹತ್ ಅವಕಾಶ‌ ನೀಡಿಲ್ಲ. ಹೀಗಾಗಿ, ಅವರ ಪುತ್ರ ರಶೀದ್ ಎಂಬವರು ಪೊಲೀಸರಿಗೆ ದೂರು ನೀಡಿರುವ ಹಿನ್ನೆಲೆಯಲ್ಲಿ ಬಹಿಷ್ಕಾರ ಪ್ರಕರಣ ಬೆಳಕಿಗೆ ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

30 ವರ್ಷಗಳ ಹಿಂದೆ ಜುಬೈದಾ ಅವರನ್ನು ಗುಂಡಿಗೆರೆ ಗ್ರಾಮದ ಅಹಮ್ಮದ್ ವಿವಾಹವಾಗಿದ್ದರು. ಜುಬೈದಾ ಅವರು ವಿರಾಜಪೇಟೆ ಮಸೀದಿಯಲ್ಲಿ ನಮಾಜ್ ಮಾಡಿದ್ದ ಕಾರಣಕ್ಕೆ, 25 ವರ್ಷಗಳಿಂದ ಗುಂಡಿಗೆರೆ ಗ್ರಾಮದಲ್ಲಿ ಅವರಿಗೆ ಬಹಿಷ್ಕಾರ ಹಾಕಲಾಗಿದೆ ಎಂದು ಆರೋಪಿಸಲಾಗಿದೆ.

ನಮಾಜ್ ಮಾಡಿದ್ದಕ್ಕೆ ಬಹಿಷ್ಕರಿಸಲಾಗಿದೆ ಎಂಬ ಆರೋಪವನ್ನು ತಳ್ಳಿಹಾಕಿರುವ ಮಸೀದಿಯ ಮುಖಂಡರೊಬ್ಬರು, ಎಲ್ಲದಕ್ಕೂ ನಿಯಮಗಳು ಇರುತ್ತವೆ. ಬೇರೆ ಯಾವುದೋ ಕಾರಣಕ್ಕೆ ಹೀಗಾಗಿರಬಹುದು ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...