ಮಂಡ್ಯ | ಯುವ ರೈತರಿಗೆ ಶಕ್ತಿ ತುಂಬುವ ಕೆಲಸ ಮಾಡಲಾಗುವುದು: ಸಚಿವ ಚಲುವರಾಯಸ್ವಾಮಿ

Date:

ಮಂಡ್ಯ ತಾಲ್ಲೂಕು ಕೊತ್ತತ್ತಿ ಹೋಬಳಿ ತೂಬಿನಕೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳಾದ ಎಲೆಚಾಕನಹಳ್ಳಿ, ಯಲಿಯೂರು, ಉರಮಾರ ಕಸಲಗೆರೆ, ರಾಗಿಮುದ್ದನಹಳ್ಳಿ, ಜಕ್ಕನಹಳ್ಳಿ, ಆಲುಗೂಡು ಕೆರೆಕಟ್ಟೆಗಳಿಗೆ ಲೋಕಪಾವನಿ ನದಿಯಿಂದ ನೀರು ತುಂಬಿಸಲು ಅನುವು ಮಾಡಿಕೊಟ್ಟ ನೆನಪಿಗಾಗಿ ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಸಂಸದರಾದ ಬಸವರಾಜ ಬೊಮ್ಮಾಯಿ ರವರಿಗೆ ಗೌರವ ಸಮರ್ಪಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ, ‘ಜಿಲ್ಲೆಯಲ್ಲಿ ಕೃಷಿ ವಿಶ್ವ ವಿದ್ಯಾಲಯವನ್ನು ಸ್ಥಾಪಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಯುವ ರೈತರು ಆರ್ಥಿಕವಾಗಿ ಸದೃಢರಾಗಲು ಶಕ್ತಿ ತುಂಬುವ ಕೆಲಸ ಕಾರ್ಯಗಳನ್ನು ಮಾಡುತ್ತೇವೆ’ ಎಂದು ಹೇಳಿದರು.

- Advertisement -

“ಮಂಡ್ಯ ತಾಲ್ಲೂಕಿನ ತೂಬಿನಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುತ್ತಮುತ್ತಲಿನ ಗ್ರಾಮಗಳಿಗೆ ಎಲೆಚಾಕನಹಳ್ಳಿ ಏತ ನೀರಾವರಿ ಯೋಜನೆಯಡಿ ಲೋಕಪಾವನಿ ನದಿಯಿಂದ ಕೆರೆಕಟ್ಟೆಗಳಿಗೆ ನೀರು ತುಂಬಿಸುವ ಮಹತ್ವದ ಕೆಲಸಕ್ಕೆ ಸಂಸದರಾದ ಬಸವರಾಜ ಬೊಮ್ಮಾಯಿ ಅವರ ಕೊಡುಗೆಯಿದೆ. ಜಿಲ್ಲೆಯಲ್ಲಿ ರೈತರಿಗೆ ಮತ್ತು ಜಾನುವಾರುಗಳಿಗೆ ನೀರು ಕಲ್ಪಿಸುವ ನಿಟ್ಟಿನಲ್ಲಿ ಜಿಲ್ಲೆಯ ತೂಬಿನಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುತ್ತಮುತ್ತಲಿನ ಗ್ರಾಮಗಳಿಗೆ ಕೆರೆ-ಕಟ್ಟೆಗಳನ್ನು ತುಂಬಿಸಿ ಮಹತ್ವ ಪೂರ್ಣ ಯೋಜನೆಯನ್ನು ಅನುಷ್ಠಾನ ಮಾಡಿದ್ದರು”.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ಮಂಡ್ಯ ಜಿಲ್ಲೆಯು ಸುತ್ತ ಹಸಿರು ವಾತಾವರಣವಿದೆ. ಆದರೆ, ಭೂ ಮಟ್ಟವನ್ನು ನೋಡಿದರೆ 55% ಮಾತ್ರ ನೀರಾವರಿ ಪ್ರದೇಶವನ್ನು ಹೊಂದಿದೆ. ಮುಂದಿನ ದಿನಗಳಲ್ಲಿ ರೈತರಿಗೆ ಅನುಕೂಲವಾಗುವಂತೆ ಜಿಲ್ಲೆಯ ಎಲ್ಲಾ ಭಾಗಗಳಲ್ಲೂ ನೀರಾವರಿ ವ್ಯವಸ್ಥೆ ಕಲ್ಪಿಸಿ ಕೆರೆ- ಕಟ್ಟೆಗಳಿಗೆ ನೀರು ತುಂಬಿಸುವ ಕೆಲಸ ಮಾಡುತ್ತೇವೆ ಎಂದು ಹೇಳಿದರು.

ಮಾಜಿ ಮುಖ್ಯಮಂತ್ರಿ ಹಾಗೂ ಸಂಸದರಾದ ಬಸವರಾಜ ಬೊಮ್ಮಾಯಿ ಮಾತನಾಡಿ, “ಮಂಡ್ಯ ತಾಲ್ಲೂಕು ಕೊತ್ತತ್ತಿ ಹೋಬಳಿ ತೂಬಿನಕೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳಾದ ಎಲೆಚಾಕನಹಳ್ಳಿ, ಯಲಿಯೂರು, ಉರಮಾರ ಕಸಲಗೆರೆ, ರಾಗಿಮುದ್ದನಹಳ್ಳಿ, ಜಕ್ಕನಹಳ್ಳಿ, ಆಲುಗೂಡು ಕೆರೆಕಟ್ಟೆಗಳಿಗೆ ಲೋಕಪವಾನಿ ನದಿಯಿಂದ ನೀರು ಹರಿಸಿ ಕೆರೆಕಟ್ಟೆ ತುಂಬಿಸುವ ಯೋಜನೆ ಸಂಪೂರ್ಣವಾಗಿದೆ ಹಾಗೂ ಇಷ್ಟು ವರ್ಷ ಕಳೆದ ಮೇಲೆ ಯೋಜನೆಯು ಲೋಕಾರ್ಪಣೆಯಾಗಿದೆ. ಮುಖ್ಯ ಮಂತ್ರಿಯಾಗಿ ರಾಜ್ಯದಲ್ಲಿ ಎಲ್ಲಾ ಭಾಗಗಳಲ್ಲೂ ಅಭಿವೃದ್ಧಿ ಕೆಲಸ ಮಾಡುವುದು ಹಾಗೂ ಜನರ ಸಮಸ್ಯೆಗಳಿಗೆ ಸ್ಪಂದಿಸುವುದು ನಮ್ಮ ಜವಾಬ್ದಾರಿ. ಜನರ ಜೊತೆಯಿದ್ದು ಜನರಿಂದ ನಾಯಕ ಆಗೋದು ಬಹಳ ಮುಖ್ಯ. ನಮ್ಮ ಅಭಿವೃದ್ಧಿ ಕೆಲಸಗಳು ನಮಗೆ ಸಂತಸ ತಂದಿದೆ” ಎಂದರು.

ಮೈಸೂರಿನ ಸುತ್ತೂರು ಜೆಎಸ್ಎಸ್ ಪೀಠಾಧ್ಯಕ್ಷರಾದ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿಯವರು ಮಾತನಾಡಿ, ಸಂಸದರಾದ ಬಸವರಾಜ ಬೊಮ್ಮಾಯಿ ರವರು ಬೂಕನಕೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯ 8 ಗ್ರಾಮಗಳಿಗೆ ಎಲೆಚಾಕನಹಳ್ಳಿ ಏತನೀರಾವರಿ ಯೋಜನೆಯಡಿ ಕೆರೆ ಕಟ್ಟೆಗಳಿಗೆ ನೀರು ತುಂಬಿಸುವ ಮಹತ್ವದ ಕೆಲಸವನ್ನು ಮಾಡಿದ್ದರಿಂದ ರೈತರಿಗೆ ಆರ್ಥಿಕವಾಗಿ ಅಭಿವೃದ್ದಿಯಾಗಲು ಸಾಧ್ಯವಾಗಿದೆ. ಕೃಷ್ಣರಾಜಸಾಗರ ಜಲಾಶಯದಲ್ಲಿ ಬಾಗಿಲು ಅಳವಡಿಸಿರುವುದರಿಂದ ನೀರು ಪೋಲ್ ಆಗದಂತೆ ಮಾಡಲಾಗಿದೆ. ಹಾಗೂ ರೈತರ ಭೂಮಿಗೆ ನೀರಾವರಿ ವ್ಯವಸ್ಥೆ ಕಲ್ಪಿಸಲಾಗಿದೆ. ಯುವಕರು ಗ್ರಾಮೀಣ ಪ್ರದೇಶದಿಂದ ನಗರ ಪ್ರದೇಶಗಳಿಗೆ ವಲಸೆ ಹೋಗುತ್ತಿದ್ದರು ಇತ್ತೀಚಿನ ದಿನಗಳಲ್ಲಿ ನೀರಿನ ಸೌಲಭ್ಯ ಇರುವುದರಿಂದ ಹೆಚ್ಚು ಕೃಷಿಗೆ ಆದ್ಯತೆ ನೀಡುತ್ತಿದ್ದಾರೆ. ಹಾಗಾಗಿ, ನೀರು ಬಹಳ ಮುಖ್ಯವಾಗಿರುವುದರಿಂದ ನೀರನ್ನು ಸದುಪಯೋಗ ಪಡಿಸಿಕೊಂಡು ಜೀವನದಲ್ಲಿ ಆರ್ಥಿಕವಾಗಿ ಸದೃಢರಾಗಿ ಜೀವನವನ್ನು ಕಟ್ಟಿಕೊಳ್ಳಬಹುದು” ಎಂದು ತಿಳಿಸಿದರು.

ಆದಿ ಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಮಾತನಾಡಿ, “ಸಂಸದರಾದ ಬಸವರಾಜ ಬೊಮ್ಮಾಯಿ ರವರು ನೀರಾವರಿ ಮಂತ್ರಿಯಾಗಿ ರಾಜ್ಯದ ಎಲ್ಲಾ ಭಾಗಗಳಲ್ಲಿ ಅನೇಕ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಮಾಡಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ರೈತರ ಸಮಸ್ಯೆಗಳಿಗೆ ಸ್ಪಂದಿಸಿ ತೂಬಿನಕೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳ ಕೆರೆಕಟ್ಟೆಗಳಿಗೆ ಲೋಕಪಾವನಿ ನದಿಯಿಂದ ನೀರು ತುಂಬಿಸಲು ಅನುವು ಮಾಡಿ ರೈತರಿಗೆ ನೆರವು ನೀಡಿದ್ದಾರೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ವಿದ್ಯಾರ್ಥಿ ದಿಸೆಯ ಅಧ್ಯಯನ ಭವಿಷ್ಯಕ್ಕೆ ಮುನ್ನುಡಿ: ನ್ಯಾ. ಅಮರನಾಥ್

ಕಾರ್ಯಕ್ರಮದಲ್ಲಿ ಶಾಸಕ ಎ.ಬಿ. ರಮೇಶ ಬಂಡಿಸಿದ್ದೇಗೌಡ, ಮಾಜಿ ಶಾಸಕಿ ವಿಜಯಲಕ್ಷ್ಮಿ ಬಂಡಿಸಿದ್ದೇಗೌಡ, ಮಾಜಿ ಉಪ ಮುಖ್ಯಮಂತ್ರಿ ಹಾಗೂ ಶಾಸಕ ಸಿ.ಎನ್. ಅಶ್ವಥ್ ನಾರಾಯಣ, ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ. ಜಯಪ್ರಕಾಶ್ ಗೌಡ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭೋವಿ ಸಮುದಾಯದ ಅರ್ಹರಿಗೆ ಜಾತಿ ಪ್ರಮಾಣ ಪತ್ರ ನೀಡಲು ಮುತುವರ್ಜಿ ವಹಿಸಿ : ರಾಮಪ್ಪ ಎಂ

ಭೋವಿ ಸಮುದಾಯದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೊಳಿಸಿರುವ...

ರಾಯಚೂರು | ಭೀಕರ ಬರ: ₹11 ಕೋಟಿ ಬಿಡುಗಡೆ: ಸಚಿವ ಅಜಯ್ ಸಿಂಗ್

ಜಿಲ್ಲೆಯಲ್ಲಿ ಭೀಕರ ಬರ ಪರಿಸ್ಥಿತಿ ಇದ್ದು, ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ...

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ: ನಾಮಪತ್ರ ಹಿಂಪಡೆಯಲು ಅಕ್ಟೋಬರ್ 9 ಕೊನೆಯ ದಿನ

ಉತ್ತರ ಕನ್ನಡ: ಕರ್ನಾಟಕ ಪಶ್ಚಿಮ ಪದವೀಧರ ಮತ ಕ್ಷೇತ್ರದ ವಿಧಾನ ಪರಿಷತ್...

ರಾಯಚೂರು | ಲಿಂಗಸುಗೂರು ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ವರ್ಗಾವಣೆ

ಲಿಂಗಸುಗೂರ ಪೊಲೀಸ್ ಉಪವಿಭಾಗಕ್ಕೆ ನೂತನ ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ಅವರನ್ನು ವರ್ಗಾವಣೆ...