ವಸತಿ ಸಮುಚ್ಚಯದ ನಿರ್ಮಾಣ ಕೆಲಸ ಮಾಡುತ್ತಿದ್ದ ಕಟ್ಟಡ ಕಾರ್ಮಿಕರೊಬ್ಬರು ಕೆಲಸದ ವೇಳೆ 9ನೇ ಮಹಡಿಯಿಂದ ಬಿದ್ದು, ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ನಗರದ ರಾಚೇನಹಳ್ಳಿಯ ಬ್ರಿಗೇಡ್ ಲಗೂನ್ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಸಂಜೆ ದುರ್ಘಟನೆ ಸಂಭವಿಸಿದೆ. ಕಟ್ಟಡ ಕೆಲಸ ಮಾಡುತ್ತಿದ್ದ ಕಾರ್ಮಿಕ, ಕಾಲು ಜಾರಿ ಬಿದಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಟ್ಟಡ ನಿರ್ಮಾಣದ ಗುತ್ತಿಗೆದಾರ ಯಾವುದೇ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದೇ ಇದ್ದಿದ್ದರಿಂದ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.
ಅಮೃತಹಳ್ಳಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.