ಹೊಸಕೋಟೆ | ನಾಲ್ವರು ಕಾರ್ಮಿಕರು ಅನುಮಾನಾಸ್ಪದ ಸಾವು

Date:

ಕೋಕಾಕೋಲಾ ವೇರ್‌ಹೌಸ್‌ನಲ್ಲಿ ಕೆಲಸ ಮಾಡುತ್ತಿದ್ದ ನಾಲ್ವರು ಕಾರ್ಮಿಕರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ನಡೆದಿದೆ.

- Advertisement -

ಹೊಸಕೋಟೆ ತಾಲೂಕಿನ ಮುತ್ಸಂದ್ರ ಗ್ರಾಮದಲ್ಲಿ ಘಟನೆ ನಡೆದಿದೆ. ಮೃತರು ಅಸ್ಸಾಂ ಮೂಲದವರಾಗಿದ್ದಾರೆ. ಅವರು ಲೇಬರ್ ಶೆಡ್‌ನಲ್ಲಿ ಮಲಗಿದ್ದ ವೇಳೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯುಕ್ತರ ನೇಮಕ, ವಜಾ ಹೇಗೆ? ಈ ಹಿಂದೆ...

ಚುನಾವಣೆಯನ್ನು ನ್ಯಾಯಸಮ್ಮತವಾಗಿ ನಡೆಸಬೇಕಾದ ಚುನಾವಣಾ ಆಯೋಗ, ಚುನಾವಣಾ ಆಯುಕ್ತರು ಸರ್ಕಾರದ ಪ್ರಭಾವದಿಂದ ಮುಕ್ತವಾಗಿರಬೇಕು. ಆದರೆ ಚುನಾವಣೆ ಸ್ಪರ್ಧಿಸುವ ಆಡಳಿತ ಪಕ್ಷವೇ ತನಗೆ ಇಷ್ಟವಾದ ವ್ಯಕ್ತಿಯನ್ನು ಚುನಾವಣಾ ಅಧಿಕಾರಿಯಾಗಿ ನೇಮಕ ಮಾಡಿಕೊಂಡರೆ, ವಿರೋಧ ಪಕ್ಷಗಳಿಗೆ...

ರಾಹುಲ್‌ ಗಾಂಧಿ ಲಿಸ್ಟ್‌ನಲ್ಲಿರುವ ʼಸಂವಿಧಾನದ ವಿಧ್ವಂಸಕರುʼ ಇವರೇನಾ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರದಲ್ಲಿ ಚುನಾವಣಾ ಆಯೋಗದ ವಿರುದ್ಧ ಎದ್ದಿರುವ ಅನುಮಾನಗಳಿಂದ ರಾಜಕೀಯ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ. ಈ ಬೆನ್ನಲ್ಲೇ, ಕಾಂಗ್ರೆಸ್‌ ನಾಯಕ ಹಾಗೂ ಲೋಕಸಭೆ ವಿರೋಧ ಪಕ್ಷದ...

ತೆಲಂಗಾಣ ಬೆಳೆ ರಕ್ಷಣೆಗೆ 3 ಟಿಎಂಸಿ ನೀರು: ಅಚ್ಚುಕಟ್ಟು...

ಕೃಷ್ಣಾ ನದಿಯ ನೀರು ಮತ್ತೊಮ್ಮೆ ಕರ್ನಾಟಕ–ತೆಲಂಗಾಣದ ನಡುವಿನ ಪ್ರಮುಖ ವಿಚಾರವಾಗಿ ಮುನ್ನೆಲೆಗೆ ಬಂದಿದೆ. ತೆಲಂಗಾಣದ ಕೃಷಿ ಪ್ರದೇಶದಲ್ಲಿನ ನಿಂತಿರುವ ಬೆಳೆಗಳನ್ನು ರಕ್ಷಿಸಲು ಕರ್ನಾಟಕದಿಂದ ಕೃಷ್ಣಾ ನೀರು ಬಿಡುಗಡೆ ಮಾಡುವಂತೆ ಆ ರಾಜ್ಯದ ಸಚಿವರು...

ಮೃತರನ್ನು ಜಯಂತ್ ಸಿಂಧೆ (25), ನೀರೇಂದ್ರನಾಥ್ (24), ಡಾಕ್ಟರ್ ಟೈಡ್ (25) ಹಾಗೂ ಧನಂಜಯ್ ಟೈಡ್ (20) ಎಂದು ಗುರುತಿಸಲಾಗಿದೆ. ನಾಲ್ವರೂ ರಾತ್ರಿ ಶೆಡ್‌ನ ಕಿಟಕಿ ಮತ್ತು ಬಾಗಿಲುಗಳನ್ನು ಸಂಪೂರ್ಣವಾಗಿ ಮುಚ್ಚಿ ಅಡುಗೆ ಮಾಡಿದ್ದರು. ಅದೇ ಕಾರಣಕ್ಕೆ ಅವರು ಉಸಿರುಗಟ್ಟಿ ಸಾವನ್ನಪ್ಪಿರಬಹುದು ಎಂದು ಅನುಮಾನಿಸಲಾಗಿದೆ‌.

ಘಟನಾ ಸ್ಥಳಕ್ಕೆ ಸೂಲಿಬೆಲೆ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಾವಿನ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಸೂಲಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಮಕ್ಕಳ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ನ್ಯಾ. ಹೆಚ್. ಶಶಿಧರ್ ಶೆಟ್ಟಿ

ಮಕ್ಕಳ ಹಕ್ಕುಗಳನ್ನು ರಕ್ಷಿಸುವುದು ಕೇವಲ ಸರ್ಕಾರ, ಇಲಾಖೆಗಳು ಅಥವಾ ಸರ್ಕಾರೇತರ ಸಂಸ್ಥೆಗಳ...

ಉಡುಪಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜಿನಾಮೆಗೆ ಆಗ್ರಹಿಸಿ ಪ್ರತಿಭಟನೆ

SIR (ವಿಶೇಷ ತೀವ್ರ ಪರಿಷ್ಕರಣೆ) ಪ್ರಕ್ರಿಯೆ ರದ್ದುಪಡಿಸುವುದು, ಮತದಾರರ ಪಟ್ಟಿಯಿಂದ ತೆಗೆದುಹಾಕಿರುವ...

ಉಡುಪಿ | ವಿದ್ಯಾರ್ಥಿನಿಯರಿಗಾಗಿ ಇನ್ನೂ ಎರಡು ವಸತಿ ನಿಲಯ : ಸಚಿವ ಶಿವರಾಜ ತಂಗಡಗಿ

ಅಜ್ಜರಕಾಡಿನ ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು...

ಚಿಕ್ಕಮಗಳೂರು | ಸೆ. 26ರಂದು ವಿದ್ಯುತ್ ನಿಲುಗಡೆ

ಚಿಕ್ಕಮಗಳೂರು ನಗರದಲ್ಲಿ 66/11 ಕೆ.ವಿ. ಹಿರೇಮಗಳೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ...