ಉತ್ತರ ಕನ್ನಡ ಜಿಲ್ಲೆಯಲ್ಲಿ ಕೆಲಸ ಮಾಡಿದ್ದು ಮರೆಯಲಾಗದ ಅನುಭವ: ನಿರ್ಗಮಿತ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

Date:

ಉತ್ತರ ಕನ್ನಡ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ 2 ವರ್ಷ 4 ತಿಂಗಳ ಅವಧಿ ಅತ್ಯಂತ ಸುಂದರ ಹಾಗೂ ಮರೆಯಲಾಗದ ಅನುಭವ ನೀಡಿದೆ ಎಂದು ನಿರ್ಗಮಿತ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಹೇಳಿದರು.

- Advertisement -

ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದ ಅವರು, ಜಿಲ್ಲೆಯ ಸಾರ್ವಜನಿಕರು, ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ, ರಾಜಕೀಯ ಪಕ್ಷಗಳು ಹಾಗೂ ಮಾಧ್ಯಮ ಪ್ರತಿನಿಧಿಗಳು ಉತ್ತಮ ಸಹಕಾರ ನೀಡಿದ್ದಾರೆ. ಎಲ್ಲರ ಸಹಕಾರದಿಂದ ಹಲವು ಸವಾಲುಗಳ ನಡುವೆಯೂ ಉತ್ತಮವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಯಿತು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಎಸ್‌ಐಆರ್‌ | ಪ್ರಜಾಪ್ರಭುತ್ವದ ಕಾವಲುಗಾರನಿಗೆ ʼಕನ್ನಡಕʼ ಬೇಕಿದೆ…

ತನ್ನ ನಿಷ್ಪಕ್ಷಪಾತ ಧೋರಣೆಯಿಂದಾಗಿ ಅತ್ಯುನ್ನತ ಗೌರವಕ್ಕೆ ಪಾತ್ರವಾಗಿದ್ದ ಚುನಾವಣೆ ಅಯೋಗ ಇಂದು ತನ್ನ ನಿಷ್ಪಕ್ಷಪಾತತೆಯನ್ನೇ ಜನ ಪರೀಕ್ಷೆಗೆ ಒಡ್ಡಿಕೊಂಡಿದೆ. ಆಯೋಗದ ನಿರ್ಣಯಗಳನ್ನು ಅನುಮಾನಿಸಿ ಬೀದಿ ಹೋರಾಟಗಳು, ಹರತಾಳಗಳು ಭುಗಿಲೆದ್ದಿವೆ. ಇಷ್ಟಕ್ಕೆ, ನಿಲ್ಲದೆ ಮುಖ್ಯ...

ಟ್ರಂಪ್‌ಗೆ ಮುಖಭಂಗ, ಯುರೋಪಿನಲ್ಲಿ ಆತಂಕ; ಜಗತ್ತಿನಲ್ಲಿ ಬದಲಾಗುತ್ತಿರುವ ಬಲಪಂಥೀಯ...

2026ರ ಅಮೆರಿಕ ಮತ್ತು ಬ್ರೆಜಿಲ್‌ನ ಚುನಾವಣಾ ಫಲಿತಾಂಶಗಳು ಜಾಗತಿಕ ಮಟ್ಟದಲ್ಲಿ ರಾಜಕೀಯ ಒಲವಿನ ಬದಲಾವಣೆಯನ್ನು ದೃಢಪಡಿಸಿವೆ. ಡೆಮಾಕ್ರಟರು ಸಾಧಿಸಿದ 255 ಹೌಸ್ ಮತ್ತು 54 ಸೆನೆಟ್ ಸ್ಥಾನಗಳ ಜಯ, ಹಾಗೂ ಬ್ರೆಜಿಲ್‌ನಲ್ಲಿನ ಅಧಿಕಾರ...

ಹೆಣ್ಣು-ಹಣ-ಚಾರಣ ಹಗರಣ: ಜಾಗತಿಕ ಚಿಪ್ ಸಾಮ್ರಾಜ್ಯದಲ್ಲಿ ಅಲ್ಲೋಲ ಕಲ್ಲೋಲ...

ಚಿಪ್ ಸಾಮ್ರಾಜ್ಯದ ಸಿಇಒ ಸುತ್ತ ಹೆಣೆದುಕೊಂಡಿರುವ ವಿವಾಹೇತರ ಸಂಬಂಧ, ಚೀನಿ ಚಾರಣ ಜಾಲ ಮತ್ತು ಭದ್ರತಾ ಆರೋಪಗಳು ಜಾಗತಿಕ ಮಾರುಕಟ್ಟೆಯನ್ನು ಅಲ್ಲೋಲ ಕಲ್ಲೋಲಗೊಳಿಸಿವೆ. ತಂತ್ರಜ್ಞಾನ ದೈತ್ಯರ ಒಳಸುಳಿಗಳೇನು? ಭಾರತದ ಡಿಜಿಟಲ್ ಹಾಗೂ ಸೆಮಿಕಂಡಕ್ಟರ್...

ತಾವು ಈ ಹಿಂದೆ ಕಾರ್ಯನಿರ್ವಹಿಸಿದ ಜಿಲ್ಲೆಗಳಿಗೆ ಹೋಲಿಸಿದರೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಯಿಂದ ಅತ್ಯುತ್ತಮ ಸಹಕಾರ ದೊರೆತಿದೆ. ಶಿರೂರು ಗುಡ್ಡಕುಸಿತ ದುರಂತ, ಕಾಳಿ ಸೇತುವೆ ಕುಸಿತ, ಜನಗಣತಿ ಹಾಗೂ ಎಸ್‌ಐಆರ್ ಕಾರ್ಯಗಳ ಸಂದರ್ಭದಲ್ಲಿ ದೊರೆತ ಸಹಕಾರವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ.

ಈ ಸುದ್ದಿ ಓದಿದ್ದೀರಾ? ಮುಂಡಗೋಡ | ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ: ನಿಷ್ಪಕ್ಷಪಾತ ತನಿಖೆಗೆ ಸಾರ್ವಜನಿಕರ ಆಗ್ರಹ

ಜಿಲ್ಲಾ ಪಂಚಾಯಿತಿ ಸಿಇಒ ಡಾ. ದಿಲೀಷ್ ಶಶಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್., ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಸೇರಿದಂತೆ ತಮ್ಮ ಕಚೇರಿಯ ಸಿಬ್ಬಂದಿ, ವಾಹನ ಚಾಲಕರು, ಡಿ ಗ್ರೂಪ್ ಸಿಬ್ಬಂದಿ ಹಾಗೂ ಅಂಗರಕ್ಷಕರ ಸೇವೆಯನ್ನು ಸ್ಮರಿಸಿದ ಅವರು, ಉತ್ತಮ ನೆನಪುಗಳೊಂದಿಗೆ ಜಿಲ್ಲೆಯಿಂದ ತೆರಳುತ್ತಿದ್ದೇನೆ ಎಂದರು.

ಶಾಸಕ ಹಾಗೂ ಎಂಸಿಎ ಅಧ್ಯಕ್ಷ ಸತೀಶ್ ಸೈಲ್ ಮಾತನಾಡಿ, ಜಿಲ್ಲೆಯಲ್ಲಿ ಹಲವು ಸವಾಲುಗಳನ್ನು ಎದುರಿಸಿ ಕರ್ತವ್ಯ ನಿರ್ವಹಿಸಿದ ಕೆ. ಲಕ್ಷ್ಮೀಪ್ರಿಯಾ ಅವರು ದಿಟ್ಟ ಮಹಿಳೆ. ತಮ್ಮ ಕಾರ್ಯವೈಖರಿಯಿಂದ ಜಿಲ್ಲೆಯಲ್ಲಿ ಹಲವು ನೆನಪಿನಲ್ಲಿ ಉಳಿಯುವ ಕೆಲಸಗಳನ್ನು ಮಾಡಿದ್ದಾರೆ. ಮುಂದಿನ ದಿನಗಳಲ್ಲಿಯೂ ಅವರು ಉತ್ತಮ ಸಾರ್ವಜನಿಕ ಸೇವೆ ಸಲ್ಲಿಸಲಿ ಎಂದು ಹಾರೈಸಿದರು.

ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಮಾತನಾಡಿ, ಕೆ. ಲಕ್ಷ್ಮೀಪ್ರಿಯಾ ಅವರು ಮುಂದಾಲೋಚನೆಯೊಂದಿಗೆ ಕೆಲಸ ನಿರ್ವಹಿಸುತ್ತಿದ್ದರು. ಸಮಯದ ಪರಿವೆಯಿಲ್ಲದೆ ಕರ್ತವ್ಯಕ್ಕೆ ಆದ್ಯತೆ ನೀಡುತ್ತಿದ್ದರು. ಶಿರೂರು ಮತ್ತು ಕಾಳಿ ಸೇತುವೆ ದುರಂತದ ಸಂದರ್ಭದ ನಿರ್ವಹಣೆ, ಕೇಣಿ ಬಂದರು ಹಾಗೂ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಕುರಿತ ಸಾರ್ವಜನಿಕ ಅಹವಾಲು ಸಭೆಗಳು, ಕಡತಗಳ ತ್ವರಿತ ವಿಲೇವಾರಿ, ಬಗರ್ ಹುಕುಂ ಅಡಿಯಲ್ಲಿ ರಾಜ್ಯದಲ್ಲೇ ಮೊದಲ ಬಾರಿಗೆ ಹಕ್ಕುಪತ್ರ ವಿತರಣೆ, ಕಂದಾಯ ಸಿಬ್ಬಂದಿಗೆ ಪದೋನ್ನತಿ ಹಾಗೂ ಎಂಟು ವರ್ಷಗಳ ಬಳಿಕ ಕರಾವಳಿ ಉತ್ಸವ ಆಯೋಜನೆ ಸೇರಿದಂತೆ ಹಲವು ಪ್ರಮುಖ ಕಾರ್ಯಗಳು ಅವರ ನೇತೃತ್ವದಲ್ಲಿ ನಡೆದಿರುವುದನ್ನು ಸ್ಮರಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್., ಉಪ ವಿಭಾಗಾಧಿಕಾರಿ ರಮ್ಯಾ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಎಂ.ಎಸ್. ಅಲ್ಲಾಬಕಷ್ ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. ನಿರ್ಗಮಿತ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಹಾಗೂ ನೂತನ ಜಿಲ್ಲಾಧಿಕಾರಿ ಬೋಯರ್ ಹರ್ಷಲ್ ನಾರಾಯಣ ರಾವ್ ಅವರನ್ನು ಅಧಿಕಾರಿಗಳು ಅಭಿನಂದಿಸಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ: ಕೊತ್ತೂರು ಮಂಜುನಾಥ್

ಮುಂಬರುವ ಜನವರಿಯಿಂದಲೇ ಬಿಸಿಲಿನ ತೀವ್ರತೆ ಹೆಚ್ಚಾಗಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ...

ಬಾಗೇಪಲ್ಲಿ | ಅಕ್ಷರದಾಸೋಹ ಯೋಜನೆಯಡಿ ಆಗುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿ ಶಾಲಾ ಶಿಕ್ಷಕರ ಸಂಘದ ವತಿಯಿಂದ ಮನವಿ

ಅಕ್ಷರದಾಸೋಹ ಯೋಜನೆಯಡಿ ಆಗುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ...

ಗದಗ | ವೀರವನಿತೆ ಒನಕೆ ಓಬವ್ವ ಜಯಂತಿ ಆಚರಣೆ

ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ...

ಗದಗ | ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆಗೆ ಸಂಕಲ್ಪ: ಡಿಡಿಪಿಐ ಕೆ.ಡಿ. ಬಡಿಗೇರ

"2026-27ನೇ ಸಾಲಿನ SSLC ಪರೀಕ್ಷೆಯಲ್ಲಿ ಗದಗ ಜಿಲ್ಲೆಯ ಫಲಿತಾಂಶವನ್ನು ಗಣನೀಯವಾಗಿ ಸುಧಾರಿಸುವುದರ...