ಹೆಗ್ಗಡದೇವನಕೊಟೆಯಲ್ಲಿ ವಿಶ್ವ ಏಡ್ಸ್ ದಿನಾಚರಣೆ

Date:

ಮೈಸೂರು ಜಿಲ್ಲೆ, ಹೆಗ್ಗಡದೇವನಕೋಟೆಯ ವಿಶ್ವ ಭಾರತಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ ಮತ್ತು ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ವತಿಯಿಂದ ವಿಶ್ವಭಾರತಿ ಪ್ರಥಮ ದರ್ಜೆ ಕಾಲೇಜು ಸಹಯೋಗದಲ್ಲಿ, ತಾಲ್ಲೂಕು ಮಟ್ಟದ ವಿಶ್ವ ಏಡ್ಸ್ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

- Advertisement -

ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಟಿ. ರವಿಕುಮಾರ್ ಮಾತನಾಡಿ, “1988 ರಿಂದ ಪ್ರತಿ ವರ್ಷ ಡಿಸೆಂಬರ್ 1 ರಂದು ವಿಶ್ವ ಏಡ್ಸ್ ದಿನವನ್ನು ಆಚರಿಸಲಾಗುತ್ತದೆ. ಇದು ಹೆಚ್ಐವಿ ಸೋಂಕಿನ ಹರಡುವಿಕೆಯಿಂದ ಉಂಟಾಗುವ ಏಡ್ಸ್ ಸಾಂಕ್ರಾಮಿಕ ರೋಗದ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಈ ಕಾಯಿಲೆಯಿಂದ ಸಾವನ್ನಪ್ಪಿದವರನ್ನು ಶೋಕಿಸಲು ಮೀಸಲಾಗಿರುವ ಅಂತರರಾಷ್ಟ್ರೀಯ ದಿನವಾಗಿದೆ”.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

“ಸ್ವಾಧೀನಪಡಿಸಿಕೊಂಡ ಇಮ್ಯುನೊ ಡಿಫಿಷಿಯನ್ಸಿ ಸಿಂಡ್ರೋಮ್ (AIDS) ಮಾನವ ಇಮ್ಯುನೊ ಡಿಫಿಷಿಯನ್ಸಿ ವೈರಸ್ (HIV) ನಿಂದ ಉಂಟಾಗುವ ಮಾರಣಾಂತಿಕ ಸ್ಥಿತಿಯಾಗಿದೆ. ಹೆಚ್ಐವಿ ವೈರಸ್ ರೋಗಿಯ ಪ್ರತಿರಕ್ಷಣಾ ವ್ಯವಸ್ಥೆಯ ಮೇಲೆ ದಾಳಿ ಮಾಡುತ್ತದೆ ಮತ್ತು ಇತರ ರೋಗಗಳಿಗೆ ಅದರ ಪ್ರತಿರೋಧವನ್ನು ಕಡಿಮೆ ಮಾಡುತ್ತದೆ. ಕೆಂಪು ರಿಬ್ಬನ್ ಎಚ್ಐವಿ-ಪಾಸಿಟಿವ್ ಜನರು ಮತ್ತು ಏಡ್ಸ್ ಪೀಡಿತರೊಂದಿಗೆ ಒಗ್ಗಟ್ಟಿನ ಜಾಗತಿಕ ಸಂಕೇತವಾಗಿದೆ”.

2020ರ ಹೊತ್ತಿಗೆ , ಏಡ್ಸ್ ವಿಶ್ವಾದ್ಯಂತ 27.2 ಮಿಲಿಯನ್ ಮತ್ತು 47.8 ಮಿಲಿಯನ್ ಜನರನ್ನು ಕೊಂದಿದೆ ಮತ್ತು ಅಂದಾಜು 37.7 ಮಿಲಿಯನ್ ಜನರು ಹೆಚ್ಐವಿಯೊಂದಿಗೆ ವಾಸಿಸುತ್ತಿದ್ದಾರೆ. ಇದು ದಾಖಲಾದ ಇತಿಹಾಸದಲ್ಲಿ ಅತ್ಯಂತ ಪ್ರಮುಖ ಜಾಗತಿಕ ಸಾರ್ವಜನಿಕ ಆರೋಗ್ಯ ಸಮಸ್ಯೆಗಳಲ್ಲಿ ಒಂದಾಗಿದೆ. ಪ್ರಪಂಚದ ಅನೇಕ ಪ್ರದೇಶಗಳಲ್ಲಿ ಆಂಟಿರೆಟ್ರೋವೈರಲ್ ಚಿಕಿತ್ಸೆಗೆ ಇತ್ತೀಚಿನ ಸುಧಾರಿತವಾಗಿ, 2004ರಲ್ಲಿ ಉತ್ತುಂಗದಲ್ಲಿದ್ದ ಏಡ್ಸ್ ಸಾಂಕ್ರಾಮಿಕ ರೋಗದಿಂದ ಸಾವಿನ ಪ್ರಮಾಣವು ಶೇ.64% ರಷ್ಟು ಕಡಿಮೆಯಾಗಿದೆ (2004 ರಲ್ಲಿ 1.9 ಮಿಲಿಯನ್, 2020ಕ್ಕೆ ಹೋಲಿಸಿದರೆ) ಎಂದು ಹೇಳಿದರು.

ಪ್ಯಾನೆಲ್ ವಕೀಲರಾದ ಪಣಿರಾಜು ಮಾತನಾಡಿ, ಎಚ್ಐವಿ ಸೋಂಕು ಹೇಗೆ ಹರಡುತ್ತದೆ ಮತ್ತು ನಾವು ಹೇಗೆ ಜಾಗರೂಕತೆ ವಹಿಸಬೇಕು ಎಂದು ತಿಳಿಸಿದರು. ವಕೀಲರಾದ ನಾಗಶ್ರೀ ಮಾತನಾಡಿ, ಎಚ್ಐವಿ ಏಡ್ಸ್ ರೋಗಿಯು ಅವರು ಪಡೆಯುವ ಹಕ್ಕುಗಳ ಬಗ್ಗೆ ತಿಳಿಸಿದರು. ಪ್ಯಾನೆಲ್ ವಕೀಲರಾದ ಅಭಿಕುಮಾರ್ ಮಾತನಾಡಿ ರೋಗಿಗಳು ಕಾಲಕಾಲಕ್ಕೆ ಔಷಧಿಗಳನ್ನು ತೆಗೆದುಕೊಳ್ಳಬೇಕು ಮತ್ತು ಮುಂಜಾಗ್ರತೆ ವಹಿಸಬೇಕು ಮತ್ತು ತಮ್ಮ ಆರೋಗ್ಯವನ್ನು ತಾವೇ ಕಾಪಾಡಿಕೊಳ್ಳಬೇಕು ಎಂದು ತಿಳಿಸಿದರು.

ವಕೀಲ ಸಂಘದ ಅಧ್ಯಕ್ಷರಾದ ಗಂಗರಾಜು ಮಾತನಾಡಿ, ಈಗಿನ ಯುವಕರು ಮೋಜು ಮಸ್ತಿಗಾಗಿ ಡ್ರಗ್ಸ್ ಮತ್ತು ಮಾದಕ ವಸ್ತುಗಳನ್ನು ಸೇವನೆ ಮಾಡಿ. ಆ ಸಮಯದಲ್ಲಿ ಅವರಿಗೆ ಗೊತ್ತಾಗದೆ ಹಾಗೆ ದೈಹಿಕ ಸಂಪರ್ಕಿಕವಾಗಿ ಈ ರೀತಿ ರೋಗಗಳಿಗೆ ತುತ್ತಾಗುತ್ತಾರೆ. ಆದ್ದರಿಂದ, ಮೋಜು ಮಸ್ತಿಯನ್ನು ಮಾಡಬಾರದು. ಎಲ್ಲಾ ವಿದ್ಯಾರ್ಥಿಗಳು ಓದಿನ ಕಡೆ ಹೆಚ್ಚು ಗಮನವನ್ನು ಹರಿಸಿ ಜೀವನದಲ್ಲಿ ಒಳ್ಳೆ ಉದ್ಯೋಗಕ್ಕೆ ಸೇರಿಕೊಳ್ಳಿ ಎಂದು ಕಿವಿ ಮಾತು ಹೇಳಿದರು.

ಈ ಸುದ್ದಿ ಓದಿದ್ದೀರಾ? ಸೋಮವಾರಪೇಟೆ | ಐಗೂರಿನಲ್ಲಿ ಫೆ.9ರಂದು ತಾಲ್ಲೂಕು ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ

ಕಾರ್ಯಕ್ರಮದಲ್ಲಿ ವಿಶ್ವಭಾರತಿ ಪ್ರಥಮ ದರ್ಜೆ ಕಾಲೇಜಿನ ಸಂಯೋಜಕ ಶಿವರಾಜು, ಪ್ರಾಂಶುಪಾಲ ಕಂದಸ್ವಾಮಿ, ಆರೋಗ್ಯ ಇಲಾಖೆ ಸಿಬ್ಬಂದಿಗಳಾದ ರವಿರಾಜ್ ಶರಣಪ್ಪ, ಅಶೋಕ್, ಅರಲಪ್ಪ, ಅಶೀಮ ಸುಲ್ತಾನ್, ರೇಖಾ, ವಿಶ್ವ ಭಾರತಿ ಪ್ರಥಮ ದರ್ಜೆ ಕಾಲೇಜಿನ ಎಲ್ಲಾ ಉಪನ್ಯಾಸಕರು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ |ಕಬ್ಬಿಗೆ ₹5,500 ಬೆಲೆ ನಿಗದಿಪಡಿಸಲು ಭಾರತೀಯ ಕಿಸಾನ ಸಂಘ ಆಗ್ರಹ

ಬರಗಾಲ, ಅಂತರ್ಜಲ ಕುಸಿತ, ಸುಡುಬಿಸಿಲು ಹಾಗೂ ಕೃಷಿ ವೆಚ್ಚ ಹೆಚ್ಚಳದಿಂದ ಸಂಕಷ್ಟದಲ್ಲಿರುವ...

ಮಂಗಳೂರು | ಕಾಂತಪುರಂ ಶೇಖ್ ಅಬೂಬಕರ್ ಅಹ್ಮದ್ ಅವರಿಗೆ ಯೆನೆಪೋಯ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್

ಪ್ರಸಿದ್ದ ಮುಸ್ಲಿಂ ಧಾರ್ಮಿಕ ಪಂಡಿತ, ಕಲ್ಲಿಕೋಟೆಯ ಮರ್ಕಝ್ ಸಂಸ್ಥೆಗಳ ರೂವಾರಿ ಮುಸ್ಲಿಂ...

ಬಾಗಲಕೋಟೆ | ಪೋಲಿಯೋ ಮುಕ್ತ ಸಮಾಜದ ಸಂಕಲ್ಪ: ಬಾಗಲಕೋಟೆಯಿಂದ ವಿಜಯಪುರದವರೆಗೆ 190 ಕಿ.ಮೀ ಜಾಗೃತಿ ರ್ಯಾಲಿ

ಪೋಲಿಯೋ ಮುಕ್ತ ಸಮಾಜ ನಿರ್ಮಾಣದ ಸಂಕಲ್ಪದೊಂದಿಗೆ ರೋಟರಿ ಕ್ಲಬ್ ಬಾಗಲಕೋಟೆ ವತಿಯಿಂದ...

ಉಡುಪಿ | ಅಗ್ರಿಗೋಲ್ಡ್ ಹಗರಣ: ದಾಖಲೆ ಪರಿಶೀಲನಾ ಕೇಂದ್ರದಲ್ಲಿ ಸಂತ್ರಸ್ತರ ಪರದಾಟ

ಬಹುಕೋಟಿ ರೂ.ಗಳ ಅಗ್ರಿಗೋಲ್ಡ್ ಹಗರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತರ ದಾಖಲೆ ಪರಿಶೀಲನೆ ಕಾರ್ಯ...