ಮೈಸೂರು | ಸರಗೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ ವಿಶ್ವ ಸ್ತನ್ಯಪಾನ ಸಪ್ತಾಹ ‘

Date:

ಮೈಸೂರು ಜಿಲ್ಲೆ, ಸರಗೂರು ಸಮುದಾಯ ಆರೋಗ್ಯ ಕೇಂದ್ರ ವತಿಯಿಂದ ತಾಲ್ಲೂಕು ಆರೋಗ್ಯಾಧಿಕಾರಿಗಳ‌ ಕಚೇರಿ ಸಹಯೋಗದೊಂದಿಗೆ ‘ ವಿಶ್ವ ಸ್ತನ್ಯಪಾನ ಸಪ್ತಾಹ ‘ ಕಾರ್ಯ ಕ್ರಮವನ್ನು ಆಯೋಜಿಸಲಾಗಿತ್ತು.

- Advertisement -

ಮಕ್ಕಳ ತಜ್ಞರಾದ ಡಾ. ಜಯಮಾಲಾ ರವರು ಮಾತನಾಡಿ, ” ಮಗು ಜನಿಸಿದ ಅರ್ಧ ಗಂಟೆಯಿಂದ 1 ಗಂಟೆಯೊಳಗೆ ಮೊದಲ ಬಾರಿಗೆ ಎದೆಹಾಲುಣಿಸಬೇಕು. ಮೊದಲ 3 ದಿನ ಬರುವ ಗೀಬಿನ ಹಾಲನ್ನು (ಕೊಲೊಸ್ಟ್ರೋಮ್) ಮಗುವಿಗೆ ನೀಡಲೇಬೇಕು. ಮೊದಲು ಬರುವ ಹಳದಿ ವರ್ಣದ ಗಟ್ಟಿಹಾಲು ಮಗುವಿಗೆ ಮೊದಲ ಲಸಿಕೆ ಇದ್ದಂತೆ. ಕೊಲೊಸ್ಟ್ರೋಮ್‌ನಲ್ಲಿ ಪೌಷ್ಟಿಕಾಂಶ ಉತ್ಕೃಷ್ಟವಾಗಿದ್ದು, ರೋಗ ನಿರೋಧಕ ಶಕ್ತಿಯನ್ನು ಹೊಂದಿರುತ್ತದೆ. ಮುಂಬರುವ ದೀರ್ಘಕಾಲಿನ ಕಾಯಿಲೆಗಳನ್ನು ತಡೆಗಟ್ಟುತ್ತದೆ. ಮಗುವಿನ ಜಠರ ಸ್ವಚ್ಛವಾಗುತ್ತದೆ. 6 ತಿಂಗಳು ತುಂಬುವವರೆಗೂ ಕೇವಲ ಎದೆಹಾಲನ್ನೇ ಕೊಡಬೇಕು. “

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

” ವೈದ್ಯರು ತಿಳಿಸಿದ ಔಷಧಗಳನ್ನು ಹೊರತು ಪಡಿಸಿ ಎಂತಹ ಕಡುಬೇಸಿಗೆ ಇದ್ದರೂ ನೀರನ್ನು ಕುಡಿಸುವ ಅವಶ್ಯಕತೆ ಇರುವುದಿಲ್ಲ. ಎದೆಹಾಲನ್ನು ಹೊರತುಪಡಿಸಿ ಹರಳೆಣ್ಣೆ, ಜೇನುತುಪ್ಪ, ಸಕ್ಕರೆನೀರು, ಹಸುವಿನ ಹಾಲು, ಪೌಡರ್ ಹಾಲನ್ನು ಕೊಡಬಾರದು. 6 ತಿಂಗಳು ತುಂಬಿದ ನಂತರ ಎದೆಹಾಲಿನೊಂದಿಗೆ ಪೂರಕ–ಪೋಷಕ ಮೆದು ಆಹಾರ ಆರಂಭಿಸಬೇಕು. ಮಗುವಿಗೆ 2 ವರ್ಷ ತುಂಬವ ತನಕ ಎದೆಹಾಲನ್ನು ಮುಂದುರಿಸಬೇಕು. ಇದು ಮಗುವಿನ ಮೆದುಳು ಬೆಳವಣಿಗೆಗೂ ಅವಶ್ಯಕ ಹಾಗೂ ಮಗುವಿನ ಬುದ್ಧಿಮಟ್ಟವನ್ನು ಹೆಚ್ಚಿಸುತ್ತದೆ. “

” ಸೂಕ್ತ ರೀತಿಯಲ್ಲಿ ಎದೆಹಾಲುಣಿಸುವುದರಿಂದ ತಾಯಿ ಬೇಗ ಗರ್ಭ ಧರಿಸುವುದಿಲ್ಲ. ಇದು ನೈಸರ್ಗಿಕ ಕುಟುಂಬ ಯೋಜನೆ ಇದ್ದಂತೆ. 2 ವರ್ಷ ಸರಿಯಾಗಿ ಎದೆಹಾಲುಣಿಸಿದ ತಾಯಿಂದಿರಿಗೆ ಸ್ತನ ಕ್ಯಾನ್ಸರ್ ಹಾಗೂ ಗರ್ಭಕೋಶದ ಕ್ಯಾನ್ಸರ್ ಬರುವುದು ಅಪರೂಪ. ಸ್ತನ್ಯಪಾನ ಮಾಡಿಸುವ ತಾಯಿ–ಮಗುವಿನ ಬಾಂಧವ್ಯ ಸುಮಧುರವಾಗಿರುತ್ತದೆ. ಕುಟುಂಬದ ಆರ್ಥಿಕ ಹೊರೆಯನ್ನು ಕಡಿಮೆ ಮಾಡುತ್ತದೆ. ದೇಶದ ಆರ್ಥಿಕತೆಗೂ ಸಹಾಯಕವಾಗುತ್ತದೆ ” ಎಂದು ತಿಳಿಸಿದರು.

ತಾಲ್ಲೂಕು ಆರೋಗ್ಯಾಧಿಕಾರಿಗಳಾದ ಡಾ. ರವಿಕುಮಾರ್ ಮಾತನಾಡಿ ಮೊದಲ 3 ದಿನ ಬರುವ ಗೀಬಿನ ಹಾಲು ಕೆಟ್ಟ ಹಾಲಾಗಿದ್ದ ಕೊಡಬಾರದೆಂಬ ಮೂಢನಂಬಿಕೆ. ಮಗುವಿನ ಹೊಟ್ಟೆ ಸ್ವಚ್ಛವಾಗಲಿ ಎಂದು ಆರಂಭದ 3 ದಿನ ಹರಳೆಣ್ಣೆ ಚೀಪಿಸುವ ಪದ್ಧತಿ. ಕೇವಲ ಎದೆಹಾಲೇ 6 ತಿಂಗಳು ಸಾಕಾಗುವುದಿಲ್ಲ ಎಂಬ ಭಾವನೆ. ಕುಟುಂಬದಲ್ಲಿ ತಾಯಿಗೆ ಮಾನಸಿಕ ಬೆಂಬಲ ನೀಡುವವರ ಕೊರತೆ. ಕಾರ್ಯನಿರತ ಮಹಿಳೆಯರಿಗೆ ರಜೆಯ ಅನಾನುಕೂಲ. ಕೆಲಸದ ಸ್ಥಳದಲ್ಲಿ ಎದೆಹಾಲುಣಿಸುವ ಸೌಲಭ್ಯವಿಲ್ಲದಿರುವುದು.

ಎದೆಹಾಲುಣಿಸುವ ತಾಯಂದಿರಿಗೆ ಬರುವ ಸಂಶಯ ನಿವಾರಿಸಲು ಆಪ್ತಸಮಾಲೋಚನೆಯ ಕೊರತೆ. ಪೌಡರ್ ಹಾಲು, ಬಾಟಲಿ ಹಾಲಿಗೆ ಮಾರು ಹೋಗುವ ತಾಯಂದಿರು. ಸಿಸೇರಿಯನ್ ಆದ ತಾಯಂದಿರಿಗೆ, ಚೊಚ್ಚಲ ಅಪ್ರಾಪ್ತ ಬಾಣಂತಿಯರಿಗೆ, ಅವಳಿ–ಜವಳಿ ಮಕ್ಕಳಿದ್ದ, ಕಡಿಮೆ ತೂಕದ ಮಗುವಿರುವ ತಾಯಂದಿರಿಗೆ ಮಾಹಿತಿ ಕೊರತೆ. ಮಗುವಿಗೆ 2 ವರ್ಷ ತುಂಬುವ ಮೊದಲೇ ತಾಯಿ ಮತ್ತೆ ಗರ್ಭಿಣಿಯಾಗುವುದು. ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ ಎಂದು ಮಾಹಿತಿ ನೀಡಿದರು.

ಸ್ತನ್ಯಪಾನ ಸಂರಕ್ಷಿಸಲು ಕೈಗೊಳ್ಳಬೇಕಾದ ಕ್ರಮಗಳು

  • ಹೆರಿಗೆಗೂ ಮುನ್ನವೇ ‘ಕೊಲೊಸ್ಟ್ರೋಮ್’ ಬಗ್ಗೆ ತಾಯಿಗೆ ಮಾಹಿತಿ ಇರಬೇಕು.
  • ಹೆರಿಗೆಯ ನಂತರ ಆಸ್ಪತ್ರೆಯಿಂದ ಹೋಗುವ ಮುನ್ನವೇ ಯಶಸ್ವಿಯಾಗಿ ಎದೆಹಾಲುಣಿಸಬಲ್ಲೆ ಎಂಬ ಭರವಸೆ ತಾಯಿಗೆ ಬಂದಿರಬೇಕು.
  • ಎದೆಹಾಲುಣಿಸುವ ಅವಧಿಯಲ್ಲಿ ತಾಯಂದಿರಿಗೆ ಕುಟುಂಬದವರ ಸಹಕಾರ ಅತಿ ಮುಖ್ಯ.
  • ತಾಯಿಗೆ ಪೌಷ್ಟಿಕ ಆಹಾರ ನೀಡಿ, ಸಂತೋಷವಾಗಿರುವಂತೆ ನೋಡಿಕೊಳ್ಳಬೇಕು.
  • ಕಾರ್ಯನಿರತ ಮಹಿಳೆಯರಿಗೆ ಎದೆಹಾಲು ತೆಗೆಯುವ, ಸಂರಕ್ಷಿಸುವ ವಿಧಾನವನ್ನು ಕಲಿಸುವುದು, ಕೆಲಸದ ಸ್ಥಳದಲ್ಲಿಯೂ ಎದೆಹಾಲುಣಿಸಲು ಅನುಕೂಲ ಮಾಡಿಕೊಡುವುದು.
  • ಮಗು ತೀವ್ರ ನಿಗಾ ಘಟಕದಲ್ಲಿದ್ದರೆ ಎದೆಹಾಲನ್ನು ನೀಡುವ ವಿಧಾನ, ಕಡಿಮೆ ತೂಕದ ಮಗು ಜನಿಸಿದಾಗ ‘ಕಾಂಗರು ಮದರ್ ಕೇರ್’ ವಿಧಾನ ತೋರಿಸಿಕೊಡುವುದು.
  • ಪೌಡರ್ ಹಾಲು, ಬಾಟಲಿ ಹಾಲಿನ ಅಪಾಯದ ಬಗ್ಗೆ ತಾಯಂದಿರಲ್ಲಿ ಜಾಗೃತಿ ಮೂಡಿಸಬೇಕು.

ಸ್ತನ್ಯಪಾನಕ್ಕೆ ಆದ್ಯತೆ ನೀಡಿ, ಸುಸ್ಥಿರ ಬೆಂಬಲ ವ್ಯವಸ್ಥೆಗಳನ್ನು ರಚಿಸಿ ‘ ಸಪ್ತಾಹ–2025 ‘ ರ ಘೋಷಣೆಯಾಗಿದೆ. ಸ್ತನ್ಯಪಾನವನ್ನು ಸಂರಕ್ಷಿಸಿ, ಪೋತ್ಸಾಹಿಸಿ, ಮುಂದುವರಿಸಲು ಸರ್ಕಾರ, ಆರೋಗ್ಯ ಇಲಾಖೆ, ಸಂಘ–ಸಂಸ್ಥೆಗಳು, ಕುಟುಂಬದ ಸದಸ್ಯರೆಲ್ಲರೂ ಹೊಣೆ ಹೊರಬೇಕಾಗಿದೆ ಸ್ತನ್ಯಪಾನವನ್ನು ಸಂರಕ್ಷಿಸಲು ಸಂಘ–ಸಂಸ್ಥೆಗಳು ಮುಂದೆ ಬರಬೇಕು. ಕುಟುಂಬದ ಸದಸ್ಯರೆಲ್ಲರೂ ತಾಯಿಗೆ ಮಾನಸಿಕ ಬೆಂಬಲ ನೀಡಿ ಪೋತ್ಸಾಹಿಸಬೇಕು ಎಂದು ತಿಳಿಸಿದರು.

ಪಟ್ಟಣ ಪಂಚಾಯಿತಿ ಅಧ್ಯಕ್ಷೆ ರಾಧಿಕಾ ಶ್ರೀನಾಥ್ ಮಾತನಾಡಿ ಈ ಕಾರ್ಯಕ್ರಮವನ್ನು ಮಾಡುತ್ತಿರುವುದು ತುಂಬಾ ಸಂತೋಷಕರವಾದ ವಿಷಯ ತಾಯಿ ಎದೆ ಹಾಲು ಉಣಿಸುವುದರಿಂದ ತಾಯಿ ಮತ್ತು ಮಗುವಿನ ಬಾಂಧವ್ಯ ಬೆಳೆಯುತ್ತದೆ, ಮತ್ತೆ ಎಲ್ಲಾ ತಾಯಂದಿರು ಕಡ್ಡಾಯವಾಗಿ ಹಾಲನ್ನು ಉಣಿಸಬೇಕು ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಆಗಸ್ಟ್. 10 ರಂದು ಬ್ಯಾರಿ ಅಕಾಡೆಮಿ ಗೌರವ ಪ್ರಶಸ್ತಿ ಪ್ರಧಾನ; ಕುಟುಂಬ ಸಮ್ಮಿಲನ ಕಾರ್ಯಕ್ರಮ : ಉಮರ್ ಯು ಹೆಚ್

ಕಾರ್ಯಕ್ರಮದಲ್ಲಿ ಆಡಳಿತ ವೈಧ್ಯಾಧಿಕಾರಿ ಡಾ. ಪಾರ್ಥಸಾರಥಿ, ದಂತ ವೈದ್ಯೆ ಡಾ. ಪೂರ್ಣಿಮಾ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿಯ ಸಿಬ್ಬಂದಿ ವರ್ಗದವರಾದ ರವಿರಾಜ್ ಶರಣಪ್ಪ ರಮಣಿ, ಅರ್ಚನಾ, ಅಸೀಮಾ ಸುಲ್ತಾನ್ ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗದವರಾದ ಜಗದೀಶ್, ಮಹದೇವ್, ಹರೀಶ್, ಬಸಮ್ಮ, ಶಾಂತಿ, ಭಾಗ್ಯ, ಲಕ್ಷ್ಮಿ, ಮಾನಸ, ಮಂಜುಳಾ, ಶ್ವೇತಾ, ಸಹನಾ, ಶ್ವೇತಾ. ಎನ್. ವೈ, ಆಶಾ ಕಾರ್ಯಕರ್ತೆಯರು, ತಾಯಂದಿರು, ಸಾರ್ವಜನಿಕರು ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...