ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಿಲ್ಲಾ ಆಸ್ಪತ್ರೆ ಉಡುಪಿ, ಜಿಲ್ಲಾ ಸರ್ವೇಕ್ಷಣಾ ಘಟಕ ಹಾಗೂ ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿ ಇವರ ಸಂಯುಕ್ತ ಆಶ್ರಯದಲ್ಲಿ ಫೆಬ್ರವರಿ 10 ರಂದು ಬೆಳಗ್ಗೆ 9 ಗಂಟೆಗೆ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಕ್ಯಾನ್ಸರ್ ಜಾಗೃತಿ ಮತ್ತು ಮಾಹಿತಿ ಕಾರ್ಯಕ್ರಮದ ಸಭಾ ಕಾರ್ಯಕ್ರಮ ಹಾಗೂ ಕ್ಯಾನ್ಸರ್ ತಜ್ಞರಿಂದ ಉಪನ್ಯಾಸವನ್ನು ಏರ್ಪಡಿಸಲಾಗಿದೆ ನಂತರ ಜಿಲ್ಲಾ ಆಸ್ಪತ್ರೆಯ ಆವರಣದಿಂದ ಬ್ರಹ್ಮಗಿರಿಯವರೆಗೂ ನಡೆಯುವ ಜಾಥಾ ಕಾರ್ಯಕ್ರಮಕ್ಕೆ ಗಾಳಿಯಲ್ಲಿ ಬಲೂನ್ ಹಾರಿಬಿಡುವುದರ ಮೂಲಕ ಚಾಲನೆ ನೀಡಲಾಗುವುದು ಎಂದು ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕರ ಕಚೇರಿ ಪ್ರಕಟಣೆ ತಿಳಿಸಿದೆ.
