ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕಭಿ ವಿಭಾಗ, ಸಾರ್ವಜನಿಕ ಆಸ್ಪತ್ರೆ ಸಹಯೋಗದಲ್ಲಿ ಶನಿವಾರ ವಿಶ್ವ ಮೂರ್ಛೆ ರೋಗ ದಿನಾಚರಣೆ ಅಂಗವಾಗಿ ದೊಡ್ಡಬಳ್ಳಾಪುರ ನಗರದಲ್ಲಿ ಜಾಗೃತಿ ಜಾಥಾವನ್ನು ಮೂಳೆರೋಗ ತಜ್ಞ ಡಾ.ಮಂಜುನಾಥ್ ಉದ್ಘಾಟಿಸಿದರು.
ಈ ವೇಳೆ ಮಾತನಾಡಿದ ಅವರು, ಮೂರ್ಛೆ ರೋಗದ ವ್ಯಕ್ತಿಯು ಸಾಮಾನ್ಯರಂತೆ ಜೀವನ ನಡೆಸಲು ಎಲ್ಲರ ಸಹಕಾರ ಅಗತ್ಯ ಎಂದು ಹೇಳಿದರು.

ದೊಡ್ಡಬಳ್ಳಾಪುರ ಸಾರ್ವಜನಿಕ ಆಸ್ಪತ್ರೆಯಿಂದ ಡಿ ಕ್ರಾಸ್ ವರೆಗೂ ಜಾಥಾ ನಡೆಸಲಾಯಿತು. ಜಾಥಾ ಮಾಡುವುದರ ಮೂಲಕ ಸಾರ್ವಜನಿಕರಲ್ಲಿ ಮೂರ್ಛೆ ರೋಗದ ಕುರಿತ ತಪ್ಪು ಕಲ್ಪನೆಯ ಕುರಿತು ಅರಿವು ಮೂಡಿಸಲಾಯಿತು.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಕುಷ್ಟರೋಗ ನಿರ್ಮೂಲನ ಅಧಿಕಾರಿ ಡಾ.ನಾಗರಾಜ್ ಜಾಥಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವಂತಹ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರವನ್ನು ವಿತರಿಸಿದರು.
ಸಾಮಾನ್ಯ ಜನರಿಗೆ ಮೂರ್ಛೆ ರೋಗದ ಬಗ್ಗೆ ಇರುವ ಮೂಢನಂಬಿಕೆಯನ್ನು ಹೋಗಲಾಡಿಸಲು ಸರಿಯಾದ ತಿಳುವಳಿಕೆ ನೀಡಲು ಇಂಡೋ ಗ್ಲೋಬಲ್ ನರ್ಸಿಂಗ್ ಕಾಲೇಜು ಮತ್ತು ಎಸ್ ವಿ ಇನ್ಸ್ಟಿಟ್ಯೂಷನ್ ಆಫ್ ನರ್ಸಿಂಗ್. ಹೆಸರುಗಟ್ಟ.
ನರ್ಸಿಂಗ್ ಸೂಪರ್ಡೆಂಟ್ ಶೈಲಜಾ ಕಾರ್ಯಕ್ರಮದ ಕುರಿತು ಹಾಗೂ ಮೂರ್ಛೆ ರೋಗದ ಕುರಿತು ಮಕ್ಕಳಲ್ಲಿ ಅರಿವು ಮೂಡಿಸಿದರು.
ಕಾರ್ಯಕ್ರಮದಲ್ಲಿ ಆಸ್ಪತ್ರೆಯ ಆಡಿಯೋಲಜಿಸ್ಟ್ ದಿನೇಶ್, ಆಸ್ಪತ್ರೆಯ ಆಫೀಸ್ ಸೂಪರಿಡೆಂಟ್ ನಾರಾಯಣ, ಕಭಿ ತಂಡ ಮತ್ತು ಆಸ್ಪತ್ರೆ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.