ಹೆಗ್ಗಡಪುರ ಗ್ರಾಮದಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ

Date:

ಮೈಸೂರು ಜಿಲ್ಲೆ, ಹೆಗ್ಗಡದೇವನಕೋಟೆ ತಾಲ್ಲೂಕು, ಹೆಗ್ಗಡಪುರ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ತಾಲ್ಲೂಕು ಮಟ್ಟದ ವಿಶ್ವ ತಂಬಾಕು ರಹಿತ ದಿನಾಚರಣೆ ಕಾರ್ಯಕ್ರಮ ನಡೆಯಿತು.

- Advertisement -

ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಟಿ. ರವಿಕುಮಾರ್ ಮಾತನಾಡಿ, ಪ್ರತಿ ವರ್ಷದಂತೆ ಈ ವರ್ಷವೂ ಸಹ ಹೆಗ್ಗಡಪುರ ಗ್ರಾಮದ ದಲ್ಲಿ ತಾಲ್ಲೂಕು ಮಟ್ಟದ ವಿಶ್ವ ತಂಬಾಕು ರಹಿತ ದಿನಾಚರಣೆ ಕಾರ್ಯಕ್ರಮವನ್ನು ನಡೆಸುತ್ತಿದ್ದೇವೆ. ವಿಶ್ವ ತಂಬಾಕು ರಹಿತ ದಿನವಾದ ಇಂದು ಎಲ್ಲರೂ ಪ್ರತಿಜ್ಞಾವಿಧಿ ಸ್ವೀಕರಿಸಿ, ನಾನು ನನ್ನ ಜೀವನದಲ್ಲಿ ಎಂದೆಂದಿಗೂ ಯಾವುದೇ ರೀತಿಯಾದ ತಂಬಾಕು ಉತ್ಪನ್ನಗಳನ್ನು ಸೇವಿಸುವುದಿಲ್ಲ. ನನ್ನ ಕುಟುಂಬ, ಸದಸ್ಯರಾಗಲಿ, ಸ್ನೇಹಿತರಾಗಲಿ, ನನ್ನ ಸಹಪಾಠಿಗಳಾಗಲಿ ಯಾವುದೇ ರೀತಿಯ ತಂಬಾಕು ಉತ್ಪನ್ನಗಳನ್ನು ಸೇವಿಸಿದಂತೆ ಪ್ರೇರೇಪಿಸುವುದಿಲ್ಲ. ಅದೇ ರೀತಿ ನನ್ನ ಮನೆ, ಶಾಲೆ, ಕಚೇರಿ ಒಟ್ಟಾರೆ ನಮ್ಮ ಪರಿಸರವನ್ನು ತಂಬಾಕು ಉತ್ಪನ್ನಗಳಿಂದ ಕಲುಷಿತಗೊಳ್ಳದಂತೆ ರಕ್ಷಿಸುತ್ತೇನೆ. ಹಾಗೆಯೇ, ತಂಬಾಕು ಹಾಗೂ ನಿಕೋಟಿನ್ ಉದ್ಯಮಗಳ ಆಕರ್ಷಕ ಉತ್ಪನ್ನಗಳ ಹಿಂದಿರುವ ಸರಳ ಉದ್ದೇಶಗಳ ಅರಿವು ನಮಗಿದೆ. ಹಾಗಾಗಿ, ಇವುಗಳ ಹಸ್ತಕ್ಷೇಪಕ್ಕೆ ನಾನು ಬಲಿಯಾಗುವುದಿಲ್ಲ. ತಂಬಾಕು ಮುಕ್ತ ಸಮಾಜವನ್ನು ಕಟ್ಟಲು ನಾವೆಲ್ಲರೂ ಇಂದಿನಿಂದಲೇ ಪಣತೊಡೋಣ ಎಂದು ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಕರ್ನಾಟಕದಲ್ಲಿ ಸುಮಾರು 1.5 ಲಕ್ಷ ಕ್ಯಾನ್ಸರ್ ರೋಗಿಗಳಿದ್ದು, ಪ್ರತಿವರ್ಷ 35 ಸಾವಿರ ಹೊಸ ಕ್ಯಾನ್ಸರ್ ರೋಗಿಗಳು ಸೇರ್ಪಡೆಯಾಗುತ್ತಿದ್ದಾರೆ. ಇದರಲ್ಲಿ ಶೇ.50ರಷ್ಟು ಗಂಡಸರು, ಶೇ.25 ರಷ್ಟು ಮಹಿಳೆಯರು ತಂಬಾಕು ಸೇವನೆಯ ದುಷ್ಪರಿಣಾಮದಿಂದ ಉಂಟಾದ ಕ್ಯಾನ್ಸರ್ ರೋಗದಿಂದ ನರಳುತ್ತಿದ್ದಾರೆ. ಭಾರತದಲ್ಲಿ ಪ್ರತಿದಿನ ತಂಬಾಕಿನ ಸೇವನೆಯ ದುಷ್ಪರಿಣಾಮದಿಂದಾಗಿ 200 ಜನರು ಸಾವನ್ನಪ್ಪುತ್ತಿದ್ದಾರೆ. ಹಾಗೂ 25 ಜನರು ಹೃದಯ ಬೇನೆಗೆ ತುತ್ತಾಗುತ್ತಿದ್ದಾರೆ ಎಂದು ಹೇಳಿದರು.

ಧೂಮಪಾನದಿಂದಾಗುವ ಪ್ರಮುಖ ದುಷ್ಪರಿಣಾಮಗಳು:

  • ಧ್ವನಿ ಪೆಟ್ಟಿಗೆ ಕ್ಯಾನ್ಸರ್.
  • ಬಾಯಿಯ ಕ್ಯಾನ್ಸರ್.
  • ಅನ್ನನಾಳದ ಕ್ಯಾನ್ಸರ್.
  • ಶ್ವಾಸಕೋಶದ ತೊಂದರೆ ಹಾಗೂ ಕ್ಯಾನ್ಸರ್ ಉಂಟಾಗುವುದು.
  • ಮೂತ್ರಕೋಶ ಮತ್ತು ಮೂತ್ರ ಚೀಲಕ್ಯಾನ್ಸರ್.
  • ಜಠರದಲ್ಲಿ ಉಣ್ಣಾಗುವುದು.
  • ಹೃದ್ರೋಗಗಳಿಗೆ ಕಾರಣವಾಗಬಹುದು.
  • ಹೆಂಗಸರ ಮುಟ್ಟಿನಲ್ಲಿ ಏರುಪೇರಾಗುವುದು.
  • ಮೈ ಇಳಿಯಬಹುದು.
  • ಕಡಿಮೆ ತೂಕದ ಮಗು ಜನನ.
  • ರಕ್ತದೊತ್ತಡ ಹೆಚ್ಚುವುದು.
  • ದೃಷ್ಟಿ ದೋಷ ತಲೆದೂರಬಹುದು.
  • ಲೈಂಗಿಕ ಆಸಕ್ತಿ ಕುಂದಬಹುದು.

ತಂಬಾಕು ತ್ಯಜಿಸುವುದರಿಂದ ಆಗುವ ಪ್ರಯೋಜನಗಳು:

  • ರಕ್ತದೊತ್ತಡ ಮತ್ತು ಹೃದಯ ಬಡಿತ ಸಾಮಾನ್ಯ ಹಂತಕ್ಕೆ ಬರುತ್ತದೆ.
  • ದೇಹದಲ್ಲಿ ಕಾರ್ಬನ್ ಮೊನಾಕ್ಸೈಡ್ ಪ್ರಮಾಣ ಕಡಿಮೆಯಾಗುತ್ತದೆ.
  • ಹೃದಯಾಘಾತ ಕಡಿಮೆಯಾಗುತ್ತದೆ.
  • ಬಾಯಿ ಅಲ್ಸರ್ ಕಡಿಮೆಯಾಗುತ್ತದೆ.
  • ಹಣದ ಉಳಿತಾಯ ಆಗುತ್ತದೆ.

ತಂಬಾಕು ಆಕ್ಟ್ 2003ರ ಸೆಕ್ಷನ್ 4 ರಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿದೆ. ಸೆಕ್ಷನ್-5 ತಂಬಾಕು ಕುರಿತು ಜಾಹೀರಾತು, ಪ್ರಚಾರ ಮತ್ತು ಪ್ರಚೋಧನಕಾರಿ ನಿಷೇಧ. ಸೆಕ್ಷನ್- 6ಎ 18 ವರ್ಷದ ಒಳಗಿನವರಿಗೆ ತಂಬಾಕು ಉತ್ಪನ್ನಗಳ ಮಾರಾಟ ನಿಷೇಧ. ಸೆಕ್ಷನ್-6ಬಿ ಶಾಲೆ, ಕಾಲೇಜುಗಳ ನೂರು ಗಜ ದೂರದ ಅಂತರದೊಳಗೆ ತಂಬಾಕು ಉತ್ಪನ್ನಗಳ ಮಾರಾಟವನ್ನು ನಿಷೇಧಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ರೈತ ವಿರೋಧಿ ಕೃಷಿ ಕಾಯ್ದೆ ವಿರುದ್ಧ ಹೋರಾಟಕ್ಕೆ ಸಜ್ಜಾಗಬೇಕಿದೆ: ಶಾಸಕ ದರ್ಶನ್ ಪುಟ್ಟಣ್ಣಯ್ಯ

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ರವಿ, ಕುಮಾರ್, ಮಂಜುನಾಯ್ಕ, ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗದವರಾದ ಶರಣಪ್ಪ ರಾಮಣಿ, ರವಿರಾಜ್, ಅಸೀಮಾ ಸುಲ್ತಾನ್, ರೇಖಾ, ನಾಗಮ್ಮ, ರಾಜು, ಶಿಕ್ಷಕರಾದ ಸೋಮಶೇಖರ್, ಮಾಜಿ ತಾಲ್ಲೂಕು ಪಂಚಾಯತಿ ಸದಸ್ಯೆ ಪುಟ್ಟಲ್ಲಮ್ಮ, ಊರಿನ ಮುಖಂಡರಾದ ದೇವ, ಸುಂದರ್, ದೇವನಾಯ್ಕ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸಾರ್ವಜನಿಕರು ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಆಹಾರ ಕಲಬೆರಕೆಗೆ ಕಡಿವಾಣ, ಕ್ಯಾನ್ಸರ್ ಔಷಧ ದರ ಇಳಿಕೆಗೆ ಯತ್ನ: ಸಚಿವ ಖಾದರ್‌ಗೆ ಹೋಟೆಲ್ ಸಂಘದ ಶಹಬ್ಬಾಸ್!

ರಾಜ್ಯದಲ್ಲಿ ಆಹಾರ ಸುರಕ್ಷತೆ, ಹೋಟೆಲ್‌ಗಳ ಸ್ವಚ್ಛತೆ ಹಾಗೂ ಕ್ಯಾನ್ಸರ್ ಔಷಧಗಳ ಬೆಲೆ...

ಬಾಗಲಕೋಟೆ |ಕಬ್ಬಿಗೆ ₹5,500 ಬೆಲೆ ನಿಗದಿಪಡಿಸಲು ಭಾರತೀಯ ಕಿಸಾನ ಸಂಘ ಆಗ್ರಹ

ಬರಗಾಲ, ಅಂತರ್ಜಲ ಕುಸಿತ, ಸುಡುಬಿಸಿಲು ಹಾಗೂ ಕೃಷಿ ವೆಚ್ಚ ಹೆಚ್ಚಳದಿಂದ ಸಂಕಷ್ಟದಲ್ಲಿರುವ...

ಮಂಗಳೂರು | ಕಾಂತಪುರಂ ಶೇಖ್ ಅಬೂಬಕರ್ ಅಹ್ಮದ್ ಅವರಿಗೆ ಯೆನೆಪೋಯ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್

ಪ್ರಸಿದ್ದ ಮುಸ್ಲಿಂ ಧಾರ್ಮಿಕ ಪಂಡಿತ, ಕಲ್ಲಿಕೋಟೆಯ ಮರ್ಕಝ್ ಸಂಸ್ಥೆಗಳ ರೂವಾರಿ ಮುಸ್ಲಿಂ...

ಬಾಗಲಕೋಟೆ | ಪೋಲಿಯೋ ಮುಕ್ತ ಸಮಾಜದ ಸಂಕಲ್ಪ: ಬಾಗಲಕೋಟೆಯಿಂದ ವಿಜಯಪುರದವರೆಗೆ 190 ಕಿ.ಮೀ ಜಾಗೃತಿ ರ್ಯಾಲಿ

ಪೋಲಿಯೋ ಮುಕ್ತ ಸಮಾಜ ನಿರ್ಮಾಣದ ಸಂಕಲ್ಪದೊಂದಿಗೆ ರೋಟರಿ ಕ್ಲಬ್ ಬಾಗಲಕೋಟೆ ವತಿಯಿಂದ...