ಭಾಲ್ಕಿ | ಸೆಪ್ಟೆಂಬರ್ ಅಂತ್ಯದೊಳಗೆ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬರೆಸಿ

Date:

ಬೀದರ್‌ ಜಿಲ್ಲೆಯ ಭಾಲ್ಕಿ ಪಟ್ಟಣದ ಎಲ್ಲ ಅಂಗಡಿ ಮುಗ್ಗಟ್ಟು ನಾಮಫಲಕಗಳ ಮೇಲೆ ಸೆಪ್ಟೆಂಬರ್ ಅಂತ್ಯದೊಳಗೆ ಶೇ.60ರಷ್ಟು ದಪ್ಪ ಅಕ್ಷರದಲ್ಲಿ ಕನ್ನಡ ಭಾಷೆಯಲ್ಲಿ ಬರೆಸಬೇಕು ಇಲ್ಲದಿದ್ದರೆ ಪುರಸಭೆ ಕಚೇರಿಗೆ ಮುತ್ತಿಗೆ ಹಾಕಬೇಕಾಗುತ್ತದೆ ಎಂದು ಜಿಲ್ಲಾ ನಮ್ಮ ಕರ್ನಾಟಕ ಸೇನೆಯ ಪದಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

- Advertisement -

ಈ ಕುರಿತು ಭಾಲ್ಕಿ ಪುರಸಭೆ ಕಚೇರಿಯಲ್ಲಿ ಜಿಲ್ಲಾ ನಮ್ಮ ಕರ್ನಾಟಕ ಸೇನೆಯ ಅಧ್ಯಕ್ಷ ಗಣೇಶ ಪಾಟೀಲ್ ನೇತೃತ್ವದಲ್ಲಿ ಮುಖ್ಯಾಧಿಕಾರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

ʼಎಲ್ಲ ನಾಮಫಲಕಗಳ ಮೇಲೆ ಶೇ.60ರಷ್ಟು ಕನ್ನಡ ಭಾಷೆ ಬರೆಸುವ ಸಂಬಂಧ ಕಳೆದ ಫೆಬ್ರವರಿ ತಿಂಗಳಲ್ಲಿ ತಹಸೀಲ್ದಾರ್ ಅಧ್ಯಕ್ಷತೆಯಲ್ಲಿ ಪುರಸಭೆ ಕಚೇರಿಯಲ್ಲಿ ಸಭೆ ನಡೆದಿತ್ತು. ಆ ಸಭೆಯಲ್ಲಿ ಕೆಲ ವ್ಯಾಪಾರಸ್ಥರು ನಾಮಫಲಕ ಬದಲಾವಣೆಗೆ ಕೆಲ ದಿನಗಳ ಸಮಯವಕಾಶ ಕೋರಿದ್ದರು.  ಆದರೆ ಸಭೆ ನಡೆದು ಸುಮಾರು ಏಳು ತಿಂಗಳು ಕಳೆದರೂ ಕೂಡ ನಿರೀಕ್ಷಿತ ಮಟ್ಟದಲ್ಲಿ ನಾಮಫಲಕಗಳ ಮೇಲೆ ಕನ್ನಡ ಭಾಷೆ ಬಳಕೆ ಆಗಿಲ್ಲʼ ಎಂದು ಅಸಮಧಾನ ವ್ಯಕ್ತಪಡಿಸಿದರು.

ʼಅಧಿಕಾರಿಗಳು ಇನ್ನಾದರೂ ಎಚ್ಚೆತ್ತುಕೊಂಡು ಮುಂದಿನ 15 ದಿನದೊಳಗೆಕನ್ನಡಯೇತರ ನಾಮಫಲಕ ಬದಲಾವಣೆಗೆ ಸೂಚಿಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆʼ ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಹಿಂದೂ ರಾಷ್ಟ್ರದ ಉದ್ದೇಶ ಸಾಕಾರಗೊಳಿಸಲು ಸ್ಥಳೀಯ ಸಂಸ್ಕೃತಿ ನಾಶ ಮಾಡಲು ಹೊರಟಿದ್ದಾರೆ: ಎ ನಾರಾಯಣ

ಈ ಸಂದರ್ಭದಲ್ಲಿ ನಮ್ಮ ಕರ್ನಾಟಕ ಸೇನೆಯ ಪ್ರಮುಖರಾದ ಬಸವರಾಜ ಕಾರಬಾರಿ, ಸುದೀಪ ತೂಗಾವೆ, ಜಗದೀಶ ಪಾಟೀಲ್, ರಾಜರತನ ಗಡಿಪಾಟೀಲ್, ನಿಸಾರ ಪಾಶಾ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ ಆಶ್ರಮ’

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...

ಹಾವೇರಿ | ಮುನಿಶ್ವರ ಎಚ್ ಚೂರಿ ಅವರ ನಿವೃತ್ತಿ ಬದುಕು ಹಸನಾಗಲಿ : ಉಡಚಪ್ಪ ಮಾಳಗಿ

"ತಮ್ಮ ವೃತ್ತಿ ಹಾಗೂ ಪ್ರವೃತ್ತಿಯಲ್ಲಿ ಪ್ರಮಾಣಿಕತೆಯನ್ನು ರೂಡಿಸಿಕೊಂಡು, ಯಶಸ್ವಿಯಾಗಿ ನಿವೃತ್ತಿಯಾದ ಮುನಿಶ್ವರ...

ಕಾರವಾರ, ಕುಮಟಾ, ದಾಂಡೇಲಿ ಪೊಲೀಸ್‌ ಅಧಿಕಾರಿಗಳ ವರ್ಗಾವಣೆ

ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಹಲವು ಅಧಿಕಾರಿಗಳ ವರ್ಗಾವಣೆ ಹಾಗೂ...

ಗದಗ | ಆನಂದಕಂದರ ಸಾಹಿತ್ಯವು ಸಾರ್ವಕಾಲಿಕ ಮೌಲ್ಯ ಹೊಂದಿದೆ: ಡಾ. ಅರ್ಜುನ ಗೊಳಸಂಗಿ

ಕನ್ನಡ ನಾಡು-ನುಡಿ, ಸಂಸ್ಕೃತಿ ಮತ್ತು ಜನಪದ ಸೊಗಡನ್ನು ಅಕ್ಷರ ರೂಪಕ್ಕಿಳಿಸಿದ ಆನಂದಕಂದರ...