ಕೊಡಗು | ‘ಶ್ರೀಮತಿ ವಿಜಯಾ ವಿಷ್ಣುಭಟ್ ದತ್ತಿ ಪ್ರಶಸ್ತಿ’ ಸ್ವೀಕರಿಸಿದ ಲೇಖಕಿ ಪ್ರತಿಮಾ ಹರೀಶ್ ರೈ

Date:

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ನೀಡಲಾಗುವ ಪ್ರತಿಷ್ಠಿತ ‘ಶ್ರೀಮತಿ ವಿಜಯಾ ವಿಷ್ಣುಭಟ್ ದತ್ತಿ ಪ್ರಶಸ್ತಿ’ಯನ್ನು ಮಡಿಕೇರಿ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಉಪನ್ಯಾಸಕಿ ಹಾಗೂ ಲೇಖಕಿ ಪ್ರತಿಮಾ ಹರೀಶ್ ರೈ ಅವರಿಗೆ ಪ್ರದಾನಿಸಲಾಯಿತು.

- Advertisement -

‘ಮನೆ ಮನಗಳಲ್ಲಿ ಕನ್ನಡಕ್ಕಿರಲಿ ಆದ್ಯತೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಮೇಜರ್ ಡಾ. ರಾಘವ ಅವರು, ಇತ್ತೀಚಿನ ದಿನಗಳಲ್ಲಿ ಯುವ ಸಮೂಹ ಕನ್ನಡ ಭಾಷೆಯತ್ತ ತೋರುತ್ತಿರುವ ನಿರ್ಲಕ್ಷ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಪೋಷಕರು ತಮ್ಮ ಮನೆಗಳಲ್ಲಿ ಇಂಗ್ಲೀಷ್ ವ್ಯಾಮೋಹವನ್ನು ತೊರೆದು ಕನ್ನಡದಲ್ಲೇ ಸಂವಹನ ನಡೆಸಿದಾಗ ಮಾತ್ರ ಭಾಷೆಯ ಬೆಳವಣಿಗೆ ಸಾಧ್ಯವೆಂದು ಅವರು ಅಭಿಪ್ರಾಯಪಟ್ಟರು. ಮನೆ ಮನಗಳಲ್ಲಿ ಕನ್ನಡದ ಬಳಕೆ ಹೆಚ್ಚಾಗಬೇಕು ಎಂದು ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಮಾನವನ ಹೆಸರು ಶಾಶ್ವತವಾಗಿರಬೇಕಾದರೆ ಜನ ಓದುವಂತಹ ಕೃತಿಗಳನ್ನು ರಚಿಸಬೇಕು ಅಥವಾ ಸಮಾಜ ಒಪ್ಪುವ ಕಾರ್ಯಗಳನ್ನು ಮಾಡಬೇಕು ಎಂದು ತಿಳಿಸಿದ ಅವರು, ಸಾಹಿತ್ಯ ಸೃಷ್ಟಿಯತ್ತ ಪ್ರತಿಯೊಬ್ಬರೂ ಆಸಕ್ತಿ ಬೆಳೆಸಿಕೊಳ್ಳಬೇಕೆಂದು ಹೇಳಿದರು.

ಇದೇ ವೇಳೆ ನಡೆದ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ವಚನ ಸಾಹಿತ್ಯದ ಮಹತ್ವ ಕುರಿತು ಮಾತನಾಡಿದ ಜಿಲ್ಲಾ ಕಸಾಪ ನಿರ್ದೇಶಕರು ಹಾಗೂ ಶಿಕ್ಷಕರಾದ ಮೇ.ನಾ. ವೆಂಕಟನಾಯಕ್, 12ನೇ ಶತಮಾನದ ಶರಣರ ವಚನಗಳನ್ನು ಪ್ರತಿದಿನ ಕಲಿಯುವ ಮೂಲಕ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬಹುದು ಎಂದು ಹೇಳಿದರು. ಬಸವಣ್ಣ, ಅಲ್ಲಮಪ್ರಭು, ಅಕ್ಕಮಹಾದೇವಿ, ಅಂಬಿಗರ ಚೌಡಯ್ಯ ಸೇರಿದಂತೆ ಶರಣರ ಚಿಂತನೆಗಳು ಇಂದಿಗೂ ಪ್ರಸ್ತುತವಾಗಿದ್ದು, ಸಮಾನತೆ ಮತ್ತು ಕಾಯಕ ತತ್ತ್ವದ ಮೂಲಕ ಉತ್ತಮ ಸಮಾಜ ನಿರ್ಮಾಣ ಸಾಧ್ಯವೆಂದು ವಿವರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕಸಾಪ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ಅವರು ಮಾತನಾಡಿ, 1915ರಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಸ್ಥಾಪಿಸಿದ ಕನ್ನಡ ಸಾಹಿತ್ಯ ಪರಿಷತ್ತು 110 ವರ್ಷಗಳನ್ನು ಪೂರೈಸಿರುವುದಾಗಿ ತಿಳಿಸಿದರು. ರಾಜ್ಯಾದ್ಯಂತ 3 ಸಾವಿರಕ್ಕೂ ಹೆಚ್ಚು ದತ್ತಿ ಕಾರ್ಯಕ್ರಮಗಳು ನಡೆಯುತ್ತಿದ್ದು, ಕೊಡಗು ಜಿಲ್ಲೆಯಲ್ಲಿ ಮಾತ್ರವೇ 40ಕ್ಕೂ ಅಧಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು. ವಿಜಯ ವಿಷ್ಣು ಭಟ್ ಅವರ ಸ್ಮರಣಾರ್ಥ ಈ ದತ್ತಿ ಪ್ರಶಸ್ತಿ ನೀಡಲಾಗುತ್ತಿದ್ದು, ಕಳೆದ ವರ್ಷ ಲೇಖಕಿ ಸ್ಮಿತಾ ಅಮೃತರಾಜ್ ಅವರಿಗೆ ಪ್ರಶಸ್ತಿ ನೀಡಲಾಗಿತ್ತು. ಈ ಬಾರಿ ಪ್ರತಿಮಾ ಹರೀಶ್ ರೈ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗಿದೆ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ?ಮೈಸೂರು | ಗ್ರೀನ್ ಬರ್ಡ್ಸ್ ಠೇವಣಿದಾರರಿಗೆ ಹಣ ನೀಡಲು ವಿಳಂಬ: ಉಗ್ರ ಪ್ರತಿಭಟನೆ ಎಚ್ಚರಿಕೆ

ಕಾರ್ಯಕ್ರಮದಲ್ಲಿ ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್, ದತ್ತಿ ದಾನಿಗಳಾದ ಜಲಜಾ ಶೇಖರ್ ಹಾಗೂ ಜೆ.ಸಿ. ಶೇಖರ್, ಮೈಸೂರಿನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಪ್ರತಿಭಾ ಡಿ.ಎಸ್., ಕೊಡಗು ಜಿಲ್ಲಾ ಮಹಿಳಾ ಬರಹಗಾರರ ಸಂಘದ ಅಧ್ಯಕ್ಷೆ ಪುದಿಯನೆರಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ನೀಡಲಾಗುವ ಪ್ರತಿಷ್ಠಿತ ‘ಶ್ರೀಮತಿ ವಿಜಯಾ ವಿಷ್ಣುಭಟ್ ದತ್ತಿ ಪ್ರಶಸ್ತಿ’ಯನ್ನು ಮಡಿಕೇರಿ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಉಪನ್ಯಾಸಕಿ ಹಾಗೂ ಲೇಖಕಿ ಪ್ರತಿಮಾ ಹರೀಶ್ ರೈ ಅವರಿಗೆ ಪ್ರದಾನಿಸಲಾಯಿತುವನ ರೇವತಿ ರಮೇಶ್, ಕಾಲೇಜು ವಿದ್ಯಾರ್ಥಿನಿಯರಾದ ಸ್ವಪ್ನ, ಚೋಂದಮ್ಮ, ಶಿಲ್ಪ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...