ಚನ್ನರಾಯಪಟ್ಟಣ ರೈತ ಹೋರಾಟ ಬೆಂಬಲಿಸಿ ಸಿಎಂ ಸಿದ್ದರಾಮಯ್ಯಗೆ ಬಹಿರಂಗ ಪತ್ರ ಬರೆದ ಸಾಹಿತಿಗಳು

Date:

Advertisements

ಚನ್ನರಾಯಪಟ್ಟಣ ಭೂಸ್ವಾಧೀನ ವಿರುದ್ಧ ರೈತರು ನಡೆಸುತ್ತಿರುವ ಹೋರಾಟಕ್ಕೆ ರಾಜ್ಯದ ಹಿರಿಯ ಸಾಹಿತಿಗಳು, ಚಿಂತಕರು, ವಿಜ್ಞಾನಿಗಳು, ಸ್ವಾಮೀಜಿಗಳು, ಚಿತ್ರನಟರು ಮತ್ತು ಹೋರಾಟಗಾರರು ಬೆಂಬಲ ವ್ಯಕ್ತಪಡಿಸಿದ್ದಾರೆ. ರೈತರಿಂದ ಭೂಮಿಯನ್ನು ಕಿತ್ತುಕೊಳ್ಳಬಾರದು ಎಂದು ಬಹಿರಂಗ ಪತ್ರ ಬರೆದಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯಪ್ಪಟ್ಟಣದ ರೈತರು ಕಳೆದ 1000 ದಿನಗಳಿಗಿಂತಲೂ ಹೆಚ್ಚು ಕಾಲದಿಂದ ತಮ್ಮ ಭೂಮಿಯನ್ನು ಉಳಿಸಲು ಹೋರಾಟವನ್ನು ಹೋರಾಟ ನಡೆಸುತ್ತಿದ್ದಾರೆ.

ಇದನ್ನು ಓದಿದ್ದೀರಾ? Ground Report | ದೆಹಲಿ ರೈತ ಚಳವಳಿ ಮಾದರಿಯಲ್ಲಿ ‘ಚನ್ನರಾಯಪಟ್ಟಣ ಭೂ ಹೋರಾಟ’; ಸರ್ಕಾರಕ್ಕೆ ಜಗ್ಗದ ದಿಟ್ಟ ಜನತೆ

Advertisements

“ತುರ್ತು ವಿಚಾರವೊಂದನ್ನು ತಮ್ಮ ಗಮನಕ್ಕೆ ತರಲು ಈ ಬಹಿರಂಗ ಪತ್ರ ಬರೆಯುತ್ತಿದ್ದೇವೆ. ಚನ್ನರಾಯಪಟ್ಟಣದ ವಿಚಾರ ರೈತರು ಹಾಗೂ ಸರ್ಕಾರದ ನಡುವೆ, ಜನಪರ ಸಂಘಟನೆಗಳು ಹಾಗೂ ಸರ್ಕಾರದ ನಡುವೆ ಸಂಘರ್ಷದ ವಿಚಾರವಾಗಿ ಪರಿವರ್ತನೆಯಾಗುತ್ತಿರುವುದನ್ನು ಕಂಡು ನಾವು ಕಳವಳಗೊಂಡಿದ್ದೇವೆ. ಸರ್ಕಾರ ಏಕೆ ಈ ರೀತಿ ಹಟ ಹಿಡಿದಿದೆ ಎಂಬುದು ನಮಗೆ ಅರ್ಥವಾಗದಾಗಿದೆ” ಎಂದು ಪತ್ರದಲ್ಲಿ ಬರೆಯಲಾಗಿದೆ.

“ಅಭಿವೃದ್ದಿ ಯೋಜನೆಗಳಿಗೆ ಭೂಮಿ ಬೇಕಾಗುತ್ತದೆ ಎಂಬುದನ್ನು ನಾವೂ ಒಪ್ಪುತ್ತೇವೆ. ಆದರೆ ಅದಕ್ಕೊಂದು ರೀತಿನೀತಿ ಇರಬೇಕಲ್ಲವೇ? ಚನ್ನರಾಯಪಟ್ಟಣದ ಭೂಮಿ ಫಲವತ್ತಾದ ಕೃಷಿ ಭೂಮಿಯಾಗಿದೆ, ಸಾವಿರಾರು ಜನ ಅದನ್ನು ನಂಬಿ ಬದುಕುತ್ತಿದ್ದಾರೆ. ಎಲ್ಲದಕ್ಕಿಂತ ಹೆಚ್ಚಾಗಿ ಅವರು ಈ ಭೂಮಿಯನ್ನು ಕಂಪನಿಗಳಿಗೆ ಕೊಡಲು ತಮಗೆ ಒಪ್ಪಿಗೆ ಇಲ್ಲ ಎಂದು ಸ್ಪಷ್ಟವಾಗಿ ಸರ್ಕಾರದ ಗಮನಕ್ಕೆ ತಂದಿದ್ದಾರೆ. ಕಳೆದ ಎರಡು ವರ್ಷಗಳಿಂದ ಸತತ ಹೋರಾಟ ನಡೆಸಿದ್ದಾರೆ. ರೈತರ ಕೂಗನ್ನು ಕೇಳಿಸಿಕೊಳ್ಳದೆ ಬಿಜೆಪಿ ಸರ್ಕಾರ ಈ ಭೂ ಸ್ವಾಧೀನ ಪ್ರಕ್ರಿಯೆಯನ್ನು ಪ್ರಾರಂಭಿಸಿತ್ತು. ಆಗ ನಿಮ್ಮ ಪಕ್ಷವೂ ಇದನ್ನು ವಿರೋಧಿಸಿತ್ತು. ನೀವೇ ಖುದ್ದು ಹೋರಾಟ ಸ್ಥಳಕ್ಕೆ ಭೇಟಿ ನೀಡಿ ಬೆಂಬಲ ನೀಡಿದ್ದಿರಿ. ಈಗ ಏಕೆ ಆ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಲೇಬೇಕು ಎಂದು ನಿಮ್ಮ ಸರ್ಕಾರ ಪಟ್ಟು ಹಿಡಿದಿದೆ ಅರ್ಥವಾಗುತ್ತಿಲ್ಲ” ಎಂದು ಚಿಂತಕರು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಚನ್ನರಾಯಪಟ್ಟಣ | 15ನೇ ಹಣಕಾಸು ಅನುದಾನ ಬಿಡುಗಡೆ; ಆನೆಕೆರೆ ಗ್ರಾ.ಪಂ. ಪಿಡಿಒ ಶೇ.10ರಷ್ಟು ಲಂಚಕ್ಕೆ ಬೇಡಿಕೆ

“ರೈತರಿಗೀಗ ಅಂತಿಮ ಅಧಿಸೂಚನೆ ಹೋಗಿದೆ. ರೈತರು ಆತಂಕಿತರಾಗಿದ್ದಾರೆ. ಅವರ ಬೆಂಬಲಕ್ಕೆ ಕರ್ನಾಟಕದ ಸಮಸ್ತ ಸಂಘಟನೆಗಳೂ ನಿಂತಿವೆ. ಜೂನ್‌ 25ಕ್ಕೆ ದೇವನ ಹಳ್ಳಿ ಚಲೋಗೆ ಕರೆ ನೀಡಿವೆ. ಸರ್ಕಾರ ರೈತಪರ ನಿಲುವು ತೆಗೆದುಕೊಳ್ಳುವ ತನಕ ದೇವನಹಳ್ಳಿಯಿಂದ ವಾಪಾಸ್‌ ಬರುವುದಿಲ್ಲ ಎಂದು ಹೇಳುತ್ತಿದ್ದಾರೆ. ಈ ಸಂಘರ್ಷ ರೈತರಿಗಾಗಲೀ, ಸರ್ಕಾರಕ್ಕಾಗಲೀ, ರಾಜ್ಯಕ್ಕಾಗಲೀ ಒಳಿತನ್ನು ಮಾಡುವುದಿಲ್ಲ. ನೀವು ಜನರ ಭಾವನೆಗಳನ್ನು ಅರ್ಥಮಾಡಿಕೊಳ್ಳಬಲ್ಲವರು. ದಯವಿಟ್ಟು ಕೂಡಲೇ ಮಧ್ಯಪ್ರವೇಶ ಮಾಡಬೇಕು. ಈ ಸಮಸ್ಯೆಯನ್ನು ಬಗೆಹರಿಸಿ ರಾಜ್ಯಕ್ಕೆ ಉತ್ತಮ ಸಂದೇಶ ನೀಡಬೇಕು” ಎಂದು ಲೇಖಕರು, ಚಿಂತಕರು ಮನವಿ ಮಾಡಿದ್ದಾರೆ.

ಹಿರಿಯ ಸಾಹಿತಿಗಳಾದ ಡಾ.ಬರಗೂರು ರಾಮಚಂದ್ರಪ್ಪ, ಡಾ.ಕೆ ಮರುಳಸಿದ್ದಪ್ಪ, ಬಾನು ಮುಷ್ತಾಕ್, ಎಸ್.ಜಿ.ಸಿದ್ದರಾಮಯ್ಯ, ಬಂಜಗೆರೆ ಜಯಪ್ರಕಾಶ್, ಡಾ.ಇಂದೂಧರ ಹೊನ್ನಾಪುರ, ಡಾ.ಎಚ್.ಎಲ್ ಪುಷ್ಪ, ಡಾ.ವಿಜಯಮ್ಮ, ಡಾ.ಜಾಣಗೆರೆ ವೆಂಕಟರಾಮಯ್ಯ, ಎಲ್ ಎನ್ ಮುಕುಂದರಾಜ್, ಡಾ.ಎನ್ ಗಾಯತ್ರಿ, ಡಾ.ಕೆ.ನೀಲಾ, ಕೆ.‍ಷರೀಫಾ, ಚಿತ್ರನಟರಾದ ಪ್ರಕಾಶ್ ರಾಜ್, ಬಿ. ಸುರೇಶ್, ವಿಜ್ಞಾನಿಗಳಾದ ಪ್ರೊ. ಪ್ರಜ್ವಲ್ ಶಾಸ್ತ್ರಿ, ಡಾ. ಸವ್ಯಸಾಚಿ ಚಟರ್ಜಿ, ಡಾ.ವಾಣಿ ಚಟರ್ಜಿ ಮತ್ತು ಸಾಣೇಹಳ್ಳಿ ಮಠದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಸೇರಿದಂತೆ ಹಲವರು ಈ ಪತ್ರಕ್ಕೆ ಸಹಿ ಹಾಕಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

Download Eedina App Android / iOS

X