ಕರ್ನಾಟಕ ಪ್ರಕಾಶಕರ ಸಂಘದ ಪ್ರಶಸ್ತಿಗಳಿಗೆ ವೈ ಎ ದಂತಿ, ವಿಶಾಲಾಕ್ಷಿ ಶರ್ಮ ಆಯ್ಕೆ

Date:

  • ಪ್ರತಿಯೊಂದು ಪುಸ್ತಕ ಪ್ರಕಟವಾದಾಗಲೂ ಮರ ನೆಡುವ ‘ಭೂಮಿ ಬುಕ್ಸ್‌
  • 15,000 ರೂಪಾಯಿ ನಗದು ಮತ್ತು ಫಲಕವನ್ನು ಒಳಗೊಂಡ ಪ್ರಶಸ್ತಿಗಳು

ಕರ್ನಾಟಕ ಪ್ರಕಾಶಕರ ಸಂಘ ಪ್ರತಿ ವರ್ಷವೂ ಕೊಡುಮಾಡುವ ಎಂ ಗೋಪಾಲಕೃಷ್ಣ ಅಡಿಗ ಪುಸ್ತಕ ಪರಿಚಾರಕ ಪ್ರಶಸ್ತಿ ಮತ್ತು ನಂಜನಗೂಡು ತಿರುಮಲಾಂಬ ವಾರ್ಷಿಕ ಪ್ರಶಸ್ತಿಗೆ ವಿಜೇತರನ್ನು ಘೋಷಿಸಲಾಗಿದೆ.

ಈ ಕುರಿತು ಕರ್ನಾಟಕ ಪ್ರಕಾಶಕರ ಸಂಘದ ಜಂಟಿ ಕಾರ್ಯದರ್ಶಿ ಸೃಷ್ಟಿ ನಾಗೇಶ್ ಅವರು ಪತ್ರಿಕಾ ಪ್ರಕಟಣೆ ಹೊರಡಿಸಿ, ವಿಜೇತರನ್ನು ಹೆಸರಿಸಿದ್ದಾರೆ.

ಎಂ ಗೋಪಾಲಕೃಷ್ಣ ಅಡಿಗ ಪುಸ್ತಕ ಪರಿಚಾರಕ ಪ್ರಶಸ್ತಿಗೆ ಸಾಗರದ ವೈ ಎ ದಂತಿ (ರವೀಂದ್ರ ಪುಸ್ತಕಾಲಯ) ಆಯ್ಕೆ ಮಾಡಲಾಗಿದ್ದು, ಹಾಗೆಯೇ ನಂಜನಗೂಡು ತಿರುಮಲಾಂಬ ಪ್ರಶಸ್ತಿಗೆ ವಿಶಾಲಾಕ್ಷಿ ಶರ್ಮ (ಭೂಮಿ ಬುಕ್ಸ್) ಆಯ್ಕೆಯಾಗಿದ್ದಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಎರಡು ಪ್ರಶಸ್ತಿಗಳು ಸಹ ತಲಾ 15,000 ರೂಪಾಯಿ ನಗದು ಮತ್ತು ಫಲಕವನ್ನು ಒಳಗೊಂಡಿದೆ. ಇದೇ ತಿಂಗಳು 23ನೇ ತಾರೀಕಿಗೆ ಬೆಂಗಳೂರಿನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಈ ಸುದ್ದಿ ಓದಿದ್ದೀರಾ? ಚುನಾವಣೆ ವಿಶೇಷ | ರಮೇಶ್‌ ಜಾರಕಿಹೊಳಿ ವಿರುದ್ಧ ಬಂಡೆದ್ದ ಪಂಚಮಸಾಲಿ ಸಮುದಾಯ

ಪ್ರಶಸ್ತಿ ವಿಜೇತರ ಪರಿಚಯ

ವೈ ಎ ದಂತಿ : ಇವರು ಮೂಲತಃ ಬೆಳಗಾವಿ ಜಿಲ್ಲೆಯ ಅಥಣಿಯವರು. 1965ಲ್ಲಿ ಸಾಗರದಲ್ಲಿ ‘ರವೀಂದ್ರ ಪುಸ್ತಕಾಲಯ’ವನ್ನು ಆರಂಭಿಸಿದರು. ಸದಭಿರುಚಿಯ ಪುಸ್ತಕ ಪ್ರಕಟಣೆ, ವಿತರಣೆ, ಮಾರಾಟ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವುದರ ಮೂಲಕ ಕನ್ನಡದ ಸಾಂಸ್ಕೃತಿಕ ಚಹರೆಗಳನ್ನು ವಿಸ್ತರಿಸಿದರು.

ಶಿವರಾಮ ಕಾರಂತ, ಎಂ ಕೆ ಇಂದಿರಾ, ಹೊಸ್ತೋಟ ಮಂಜುನಾಥ ಭಾಗವತ, ಹಾ ಮಾ ನಾಯಕ, ನಾ. ಡಿಸೋಜ, ವೀಣಾ ಬನ್ನಂಜೆ ಮುಂತಾದ ಅನೇಕ ಹಿರಿ ಕಿರಿಯ ಲೇಖಕರ ಕೃತಿಗಳನ್ನು ಪ್ರಕಟಿಸಿದ ಹೆಮ್ಮೆ ರವೀಂದ್ರ ಪುಸ್ತಕಾಲಯದ್ದು. ಇವರ ಸೇವೆಯನ್ನು ಸಾಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಸೇರಿದಂತೆ ಹಲವು ಸಂಘ ಸಂಸ್ಥೆಗಳು ಗುರುತಿಸಿ ಗೌರವಿಸಿವೆ.

ಈಗ ಕರ್ನಾಟಕ ಪ್ರಕಾಶಕರ ಸಂಘವು 2023ನೆಯ ಸಾಲಿನ ಎಂ. ಗೋಪಾಲಕೃಷ್ಣ ಅಡಿಗ ಪುಸ್ತಕ ಪರಿಚಾರಕ ಪ್ರಶಸ್ತಿಯನ್ನು ನೀಡಿ ಗೌರವಿಸುತ್ತಿದೆ.

ವಿಶಾಲಾಕ್ಷಿ ಶರ್ಮ : ಇವರು 1953ರಂದು ಉತ್ತರ ಕನ್ನಡ ಜಿಲ್ಲೆಯ ಬಕ್ಕೆಮನೆಯಲ್ಲಿ ಜನಿಸಿದ್ದಾರೆ. ಎಸ್‌ಎಸ್‌ಎಲ್‌ಸಿವರೆಗೆ ವಿದ್ಯಾಭ್ಯಾಸ ಮಾಡಿದ್ದಾರೆ. ಓದು, ಕಾವ್ಯರಚನೆ, ಕೃಷಿ, ಅಡುಗೆ, ಹೊಲಿಗೆ ಮುಂತಾದವುಗಳಲ್ಲಿ ಆಸಕ್ತರಾದ ಇವರು ಭೂಮಿ ಬುಕ್ಸ್ ಎಂಬ ಪ್ರಕಾಶನ ಸಂಸ್ಥೆಯನ್ನು ಸ್ಥಾಪಿಸಿ ವಿಜ್ಞಾನ, ಸಮಾಜಶಾಸ್ತ್ರ, ಕೃಷಿ, ಅಭಿವೃದ್ಧಿ ಮೀಮಾಂಸೆ ಮುಂತಾದ ವಿಷಯಗಳಿಗೆ ಸಂಬಂಧಿಸಿದಂತೆ 4೦ಕ್ಕೂ ಹೆಚ್ಚು ಪುಸ್ತಕಗಳನ್ನು ಪ್ರಕಟಿಸಿದ್ದಾರೆ.

ಪ್ರತಿಯೊಂದು ಪುಸ್ತಕ ಪ್ರಕಟವಾದಾಗಲೂ ಒಂದೊಂದು ಮರ ನೆಟ್ಟು ಪರಿಸರ ಸಂರಕ್ಷಣೆಯ ಪ್ರತಿಜ್ಞೆಯನ್ನು ಕ್ರಿಯಾಶೀಲವಾಗಿ ಪಾಲಿಸುತ್ತಾ ಬಂದಿರುವ ವಿಶಿಷ್ಟ ಪ್ರಕಾಶನ ಸಂಸ್ಥೆ ಇದಾಗಿದೆ. ನಾಗೇಶ್ ಹೆಗಡೆ, ಕೊಳ್ಳೇಗಾಲ ಶರ್ಮ, ಅನಿತಾ ಪೈಲೂರ್, ಮಲ್ಲಿಕಾರ್ಜುನ ಹೊಸಪಾಳ್ಯ, ಆನಂದತೀರ್ಥ ಪ್ಯಾಟಿ, ಗುರುರಾಜ್ ದಾವಣಗೆರೆ, ಅಖಿಲೇಷ್ ಚಿಪ್ಪಳಿ, ಶರಣ ಬಸವೇಶವರ ಅಂಗಡಿ ಮುಂತಾದವರ ಕೃತಿಗಳನ್ನು ಪ್ರಕಟಿಸಿದ್ದಾರೆ.

ಈಗ ಕರ್ನಾಟಕ ಪ್ರಕಾಶಕರ ಸಂಘವು 2023ನೆಯ ಸಾಲಿನ ನಂಜನಗೂಡು ತಿರುಮಲಾಂಬ ಪ್ರಶಸ್ತಿಯನ್ನು ನೀಡಿ ಗೌರವಿಸುತ್ತಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏ.20ರಂದು ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟದ ವಿವರ ಇಲ್ಲಿದೆ

ರಾಜ್ಯದಲ್ಲಿ ವಾಡಿಕೆಯಂತೆ ಮಳೆಯಾಗದೆ. ಕರಾವಳಿ ಪ್ರದೇಶಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ,...

ಬೆಂಗಳೂರು ಗ್ರಾಮಾಂತರ | ಕಾಂಗ್ರೆಸ್‌ನ ಡಿ.ಕೆ. ಸುರೇಶ್ ಪರ ನಟ ದರ್ಶನ್ ಪ್ರಚಾರ

ಲೋಕಸಭಾ ಚುನಾವಣೆಯ ಹಿನ್ನೆಲೆ, ರಾಜ್ಯದಲ್ಲಿ ರಾಜಕೀಯ ಪಕ್ಷದ ಅಭ್ಯರ್ಥಿಗಳು ಪ್ರಚಾರ ಭರಾಟೆ...

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಹಿತಕ್ಕಾಗಿ ಸೌಮ್ಯ ರೆಡ್ಡಿಗೆ ಮತ ನೀಡಿ: ನಟ ಧ್ರುವ ಸರ್ಜಾ

ಲೋಕಸಭಾ ಚುನಾವಣೆ ಹಿನ್ನೆಲೆ, ಅಭ್ಯರ್ಥಿಗಳ ಪ್ರಚಾರದ ಭರಾಟೆ ಜೋರಾಗಿದೆ. ಬೆಂಗಳೂರು ದಕ್ಷಿಣ...

ಕಲಬುರಗಿ | ನೇಹಾಳ ಭೀಕರ ಕೊಲೆ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಲು ಎಸ್ಎಫ್ಐ ಆಗ್ರಹ

ಹುಬ್ಬಳ್ಳಿಯ ಬಿವಿಬಿ ಕಾಲೇಜ್ ಕ್ಯಾಂಪಸ್‌ನಲ್ಲಿ ನಡೆದ ವಿದ್ಯಾರ್ಥಿನಿ ನೇಹಾಳ ಭೀಕರ ಕೊಲೆ,...