ಯಾದಗಿರಿ | ಮಧ್ಯಾಹ್ನದ ಬಿಸಿಯೂಟ ಸೇವಿಸಿ 100ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Date:

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದ ಸರ್ಕಾರಿ ಉರ್ದು ಶಾಲೆ, ಸರ್ಕಾರಿ ಪ್ರೌಢಶಾಲೆ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಅಂಬೇಡ್ಕರ್‌ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಮಹಾಂತೇಶ್ವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 100ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡಿರುವ ಆತಂಕಕಾರಿ ಘಟನೆ ಶುಕ್ರವಾರ ನಡೆದಿದೆ.

- Advertisement -

ಶಾಲೆಗಳಿಗೆ ಮಧ್ಯಾಹ್ನದ ಬಿಸಿಯೂಟಕ್ಕಾಗಿ ಅನ್ನ-ಸಾರು ಮಾಡಲಾಗಿತ್ತು. ಆ ಆಹಾರವನ್ನು ಸೇವಿಸಿದ ಬಳಿಕ ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ಕೆಲವರಿಗೆ ವಾಂತಿಯಾಗಿದ್ದು, ಕೆಲವರಿಗೆ ಹೊಟ್ಟೆ ನೋವು, ತಲೆ ಸುತ್ತು ಕಾಣಿಸಿಕೊಂಡಿದೆ. ಅಸ್ವಸ್ಥ ಮಕ್ಕಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಆಸ್ಪತ್ರೆಗೆ ಯಾದಗಿರಿ ಶಾಸಕ ಚೆನ್ನಾರೆಡ್ಡಿ ಪಾಟೀಲ್‌ ತುನ್ನೂರು, ಜಿಲ್ಲಾಧಿಕಾರಿ ಡಾ. ಸುಶೀಲಾ, ಜಿಲ್ಲಾ ಪಂಚಾಯತಿ ಸಿಇಒ ಗರೀಮಾ ಪನ್ವಾರ್ ಹಾಗೂ ಎಸ್‌ಪಿ ಸಂಗೀತಾ ಸೇರಿದಂತೆ ಅಧಿಕಾರಿಗಳು ಭೇಟಿ ನೀಡಿದ್ದು, ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ. ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಿದ್ದಾರೆ.

ಊಟದಲ್ಲಿ ಬಳೆ ಚೂರು: ಮಧ್ಯಾಹ್ನ ಊಟ ಮಾಡುವಾಗ ಕೆಲ ಮಕ್ಕಳ ಊಟದಲ್ಲಿ ಗಾಜಿನ ಬಳೆಗಳ ಚೂರುಗಳು ಬಂದಿವೆ ಎಂದು ಬಿಸಿಯೂಟ ಸೇವಿಸಿದ ಮಕ್ಕಳು ದೂರಿದ್ದಾರೆ. ಶಾಲೆಗಳಿಗೆ ಬಿಸಿಯೂಟ ಪೂರೈಸುತ್ತಿದ್ದ ಏಜೆನ್ಸಿ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಗ್ರಾಮೀಣ ಪ್ರದೇಶದಲ್ಲಿ ಬಡ ಕೂಲಿ ಕಾರ್ಮಿಕರ ಮಕ್ಕಳು ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದಾರೆ. ಗುಣಮಟ್ಟವಲ್ಲದ ಅಡುಗೆ ತಯಾರಿಸಿ ಮಕ್ಕಳ ಜೀವದ ಜೊತೆ ಆಟವಾಡುತ್ತಿರುವ ಖಾಸಗಿ ಏನ್‌ಜಿಒ ವಿರುದ್ದ ಕ್ರಮ ಕೈಗೊಂಡು. ನಮ್ಮ ಮಕ್ಕಳು ಓದುತ್ತಿರುವ ಶಾಲೆಗಳಲ್ಲಿಯೇ ಬಿಸಿಊಟ ತಯಾರಿಸಬೇಕು” ಎಂದು ಪೋಷಕರು ಒತ್ತಾಯಿಸಿದ್ದಾರೆ.

“ಶಾಲೆಗಳಿಗೆ ಬಿಸಿಯೂಟ ಪೂರೈಕಿಸುವ ಏಜೆನ್ಸಿಯು ಜಿಲ್ಲಾ ಸಚಿವ ಶರಣ ಬಸಪ್ಪಗೌಡ ದರ್ಶನಾಪು‌ರ್ ಅವರ ಸಂಬಂಧಿಯದ್ದಾಗಿದ್ದು, ಅಧಿಕಾರಿಗಳು ಕ್ರಮ ಕೈಗೊಳ್ಳುವ ಬಗ್ಗೆ ಅನುಮಾನ ಇದೆ. ಪ್ರಾಮಾಣಿಕ ಅಧಿಕಾರಿಯಿಂದ ತನಿಖೆ ನಡೆಸಬೇಕು” ಎಂದು ಸರ್.ಎಂ.ವಿಶ್ವೇಶ್ವರಯ್ಯ ಕಟ್ಟಡ ಕಾರ್ಮಿಕ ಸಂಘಟನೆಯ ಅಧ್ಯಕ್ಷ ಪ್ರದೀಪ್ ಆಗ್ರಹಿಸಿದ್ದಾರೆ.

ಮಕ್ಕಳ ಆಯೋಗ್ಯ ವಿಚಾರಿಸಿ, ಮಾಧ್ಯಮಗಳೊಂದಿಗೆ ಮಾತನಾಡಿದ ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರು, “ದೇವರ ದಯದಿಂದ ಯಾವುದೇ ರೀತಿಯ ಹೆಚ್ಚಿನ ಅನಾಹುತ ಆಗಿಲ್ಲ. ಮಕ್ಕಳ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಘಟನೆ ವಿರುದ್ಧ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ತಪ್ಪಿತಸ್ಥರನ್ನು ರಕ್ಷಿಸುವ ಪ್ರಶ್ನೆ ಬರುವುದಿಲ್ಲ” ಎಂದು ಅವರು ಸ್ಪಷ್ಟಪಡಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್‌ನಲ್ಲಿ ಮಹಿಳಾ ಕಾರ್ಮಿಕರ ಸಾವು: ಸಮಗ್ರ ತನಿಖೆಗೆ ಸಿಐಟಿಯು ಒತ್ತಾಯ

ನರಸಾಪುರ ಕೈಗಾರಿಕಾ ಪ್ರದೇಶದ ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯಲ್ಲಿ ಮಹಿಳಾ ಕಾರ್ಮಿಕರ ಸಾವಿನ...

ಮಹಿಳೆಯರ ಸ್ವಾವಲಂಬನೆಗೆ ಬಿ.ಎಸ್ ಡಬ್ಲ್ಯೂ ಹೊಲಿಗೆ ತರಬೇತಿ ಶಿಬಿರ ಪೂರಕ: ರಾಮಕೃಷ್ಣ

"ಮಹಿಳೆಯರು ಕೌಶಲ್ಯಾಧಾರಿತ ತರಬೇತಿಯನ್ನು ಪಡೆದು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಉಚಿತ ಹೊಲಿಗೆ ತರಬೇತಿ...

ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಅ.17ರಂದು ಬ್ರಹ್ಮಾವರದಲ್ಲಿ ಬೃಹತ್ ಹಕ್ಕೊತ್ತಾಯ ಸಭೆ

ಉಡುಪಿ ಜಿಲ್ಲೆಯಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸಬೇಕೆಂಬ ಕರಾವಳಿ ಭಾಗದ ಜನರ ಬಹುದಿನಗಳ...

ವಿಜಯಪುರ | SIR ರದ್ದತಿಗೆ ಆಗ್ರಹಿಸಿ CPIMನಿಂದ ಮೇಣದಬತ್ತಿ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ...