ಯಾದಗಿರಿ | ಕಡೇಚೂರು ಜಿಟಿಟಿಸಿಯಲ್ಲಿ ಡಿಪ್ಲೊಮಾ ಕೋರ್ಸ್‌ಗಳಿಗೆ ಪ್ರವೇಶಾತಿ ಆರಂಭ; ಅರ್ಜಿ ಆಹ್ವಾನ

Date:

ಕಡೇಚೂರು ಗ್ರಾಮದ ಹೊರವಲಯದಲ್ಲಿರುವ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ)ದಲ್ಲಿ 2026–27ನೇ ಶೈಕ್ಷಣಿಕ ಸಾಲಿನ ವಿವಿಧ ಡಿಪ್ಲೊಮಾ ಹಾಗೂ ತರಬೇತಿ ಕೋರ್ಸ್‌ಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕೇಂದ್ರದ ಪ್ರಾಂಶುಪಾಲ ಶಿವಕುಮಾರ ತಿಳಿಸಿದ್ದಾರೆ.

- Advertisement -

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಟಿಟಿಸಿ ಕೇಂದ್ರವು ಉದ್ಯೋಗಾಧಾರಿತ ಅಲ್ಪಾವಧಿ ಹಾಗೂ ದೀರ್ಘಾವಧಿ ತರಬೇತಿ ಕೋರ್ಸ್‌ಗಳನ್ನು ನಡೆಸುತ್ತಿದ್ದು, ಈ ಸಾಲಿನ ಪ್ರವೇಶಾತಿ ಪ್ರಕ್ರಿಯೆ ಆರಂಭವಾಗಿದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಕೇಂದ್ರದಲ್ಲಿ ಡಿಪ್ಲೊಮಾ ಇನ್ ಟೂಲ್ ಆ್ಯಂಡ್ ಡೈ ಮೇಕಿಂಗ್, ಡಿಪ್ಲೊಮಾ ಇನ್ ಮೆಕಾಟ್ರಾನಿಕ್ಸ್ ಹಾಗೂ ಡಿಪ್ಲೊಮಾ ಇನ್ ಪ್ರಿಸಿಷನ್ ಮ್ಯಾನುಫ್ಯಾಕ್ಚರಿಂಗ್ ಕೋರ್ಸ್‌ಗಳಿಗೆ ಪ್ರವೇಶಾತಿ ನಡೆಯುತ್ತಿದೆ. ಅಲ್ಲದೆ, ಟೂಲ್ ರೂಮ್ ಮೆಷಿನಿಸ್ಟ್ ಒಂದು ವರ್ಷದ ತರಬೇತಿ ಕೋರ್ಸ್‌ಗೂ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದು ಹೇಳಿದರು.

ಎಸ್‌ಎಸ್‌ಎಲ್‌ಸಿ ಉತ್ತೀರ್ಣ ವಿದ್ಯಾರ್ಥಿಗಳು ಪ್ರವೇಶಕ್ಕೆ ಅರ್ಹರಾಗಿದ್ದು, ವಿಜ್ಞಾನ ವಿಭಾಗದ ಪಿಯುಸಿ ಅಥವಾ ಐಟಿಐ ಉತ್ತೀರ್ಣ ಅಭ್ಯರ್ಥಿಗಳಿಗೆ ಡಿಪ್ಲೊಮಾ ಕೋರ್ಸ್‌ನ ಎರಡನೇ ವರ್ಷಕ್ಕೆ ನೇರ ಪ್ರವೇಶದ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಹೆಚ್ಚಿನ ಮಾಹಿತಿಗಾಗಿ 6362883923, 8050903204 ಹಾಗೂ 8106563928 ಸಂಖ್ಯೆಗಳನ್ನು ಸಂಪರ್ಕಿಸಬಹುದು ಎಂದು ಅವರು ಹೇಳಿದರು.

ಇದನ್ನು ಓದಿದ್ದೀರಾ? ಕಲಬುರಗಿ | ವೇಶ್ಯಾವಾಟಿಕೆ ಅಡ್ಡದ ಮೇಲೆ ಸಿಸಿಬಿ ದಾಳಿ; ದಂಧೆ ನಡೆಸುತ್ತಿದ್ದ ಮಹಿಳೆ ಸೆರೆ

ಪತ್ರಿಕಾಗೋಷ್ಠಿಯಲ್ಲಿ ಮನೀಶ್ ಕುಮಾರ್ ಹಾಗೂ ವೆಂಕಟ್ ರಾವ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...