ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕರಡಕಲ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜಾತಿ ಕಾಲಂ ತಿದ್ದಿದ್ದ ಆರೋಪದಡಿ ಪ್ರಭಾರ ಮುಖ್ಯಶಿಕ್ಷಕ ಮನೋಹರ ಪತ್ತಾರ ಎಂಬುವವರನ್ನು ಅಮಾನತುಗೊಳಿಸಿ ಡಿಡಿಪಿಐ ಆದೇಶಿಸಿದ್ದಾರೆ.
ವಿದ್ಯಾರ್ಥಿನಿ ಪೋಷಕರಿಂದ ಹಣ ಪಡೆದ ಮನೋಹರ, ಜಾತಿ ಕಾಲಂಗೆ ವೈಟ್‌ನರ್ ಹಚ್ಚಿದ್ದು, ಮೂಲಜಾತಿ ಬದಲಿಗೆ ‘ತಳವಾರ’ ಎಂದು ಬರೆದಿದ್ದಾರೆಂದು ಅವರ ವಿರುದ್ಧ ದೂರು ದಾಖಲಾಗಿತ್ತು.
ಈ ಸುದ್ದಿ ಓದಿದ್ದೀರಾ? ಅಂಕೋಲಾ | ‘ಸಂವಿಧಾನ ರಕ್ಷಿಸಿ ಪ್ರಜಾಪ್ರಭುತ್ವ ಉಳಿಸಿ’ ಘೋಷಣೆಯೊಂದಿಗೆ ಮತಗಳ್ಳತನದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
ಈ ಕುರಿತು ಸುರಪುರ ಬಿಇಒ ಅವರ ವರದಿ ಆಧರಿಸಿ ಕ್ರಮ ವಹಿಸಲಾಗಿದೆ ಎಂದು ಡಿಡಿಪಿಐ ಚನ್ನಬಸಪ್ಪ ಮುಧೋಳ ತಿಳಿಸಿದ್ದಾರೆ.