ಯಾದಗಿರಿ | ಕೆಂಭಾವಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Date:

Advertisements

ಯಾದಗಿರಿ ಜಿಲ್ಲೆ ಶಹಾಪುರ ತಾಲೂಕು ಕೆಂಭಾವಿಯಲ್ಲಿ ಗ್ರಾಮದ ಜನರು ಡಾ. ಬಿ ಆರ್‌ ಅಂಬೇಡ್ಕರ್‌ ಜಯಂತಿ ಅಚರಿಸಿದ್ದಾರೆ.

ಈ ವೇಳೆ ಮುಖಂಡ ಬಸನಗೌಡ ಹೊಸಮನಿ ಮಾತನಾಡಿ, “ಬಾಬಾ ಸಾಹೇಬ್‌ ಅಂಬೇಡ್ಕರ್ ನೀಡಿದ ಸಂವಿಧಾನದಿಂದಾಗಿ ಅದರ ತಳಹದಿ ಮೇಲೆ 75 ವರ್ಷಗಳವರೆಗೆ ಯಾವುದೇ ರಾಷ್ಟ್ರಗಳು ಇಷ್ಟು ಒಳ್ಳೆಯ ಪ್ರಜಾಪ್ರಭುತ್ವ ವ್ಯವಸ್ಥೆ ನೀಡಲಿಲ್ಲ. ಅದಕ್ಕೆ ಮೂಲಕಾರಣ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್” ಎಂದು ಹೇಳಿದರು.

ಯಾಳಗಿ ಗ್ರಾಮದಲ್ಲಿಯೂ ಅಂಬೇಡ್ಕರ್‌ ಜಯಂತಿ ಆಚರಿಸಲಾಗಿದ್ದು, ದಲಿತ ಯುವ ಮುಖಂಡ ರಾಜು ನಾಗರೆಡ್ಡಿ ಮಾತನಾಡಿ, “ವ್ಯವಸ್ಥಿತ ಸಂವಿಧಾನವನ್ನು ದೇಶಕ್ಕೆ ನೀಡಿದ ಮಹಾನ್ ನಾಯಕ ಅಂಬೇಡ್ಕರ್. ಅವರ ಬದುಕು, ಆದರ್ಶ, ತತ್ವಗಳು ಗಂಭೀರ ಚಿಂತನೆಗಳು ನಾವು ಜೀವನದಲ್ಲಿ ಅಳವಡಿಸಿಕೊಳ್ಳಬೇಕು” ಎಂದು ಸಲಹೆ ನೀಡಿದರು.

Advertisements

ಈ ಸುದ್ದಿ ಓದಿದ್ದೀರಾ? ಚುನಾವಣೆ 2023 | ಕಿತ್ತೂರು ಕರ್ನಾಟಕ: ಬಿಜೆಪಿ ಅಭ್ಯರ್ಥಿಗಳಿಗೆ ಬಿಸಿ ತಟ್ಟಲಿರುವ ಬಂಡಾಯ

ಈ ಸಂಧರ್ಭದಲ್ಲಿ ಗುರುಬಸಯ್ಯ, ಶಿವಶರಣ ನಾಗರೆಡ್ಡಿ, ಮಹದೇವಪ್ಪ ಜಲಪುರ, ಶ್ರೀಶೈಲ್ ಮಹಾಮನಿ, ಅಬ್ದುಲ್ ಸಿಪಾಯಿ, ಮಲಿಕ್ ಚೌದರಿ, ಸಾಹೇಬಣ್ಣ ತಳವಾರ ಹಾಗೂ ಇತರರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X