ಯಾದಗಿರಿ ಜಿಲ್ಲೆಯ ಶಹಾಪುರ ನಗರದ ಹಳೆ ಬಸ್ ನಿಲ್ದಾಣದ ಬಳಿಯ ವೃತ್ತದಲ್ಲಿ ಅಳವಡಿಸಲಾಗಿರುವ ಅಂಬೇಡ್ಕರ್ ನಾಮಫಲಕವನ್ನು ತೆರವುಗೊಳಿಸಲು ತಾಲೂಕು ಆಡಳಿತ ಮುಂದಾಗಿದೆ. ತಾಲೂಕು ಆಡಳಿತ ನಿರ್ಧಾರದ ವಿರುದ್ಧ ದಲಿತ ಸಂಘಟನೆಗಳ ಮುಖಂಡರು ಮೌನ ಪ್ರತಿಭಟನೆ ನಡೆಸಿದ್ದಾರೆ.
ಬಸ್ ನಿಲ್ದಾಣದ ಎದುರು ಪ್ರತಿಭಟನೆ ನಡೆಸಿರುವ ದಲಿತ ಮುಖಂಡರು, “ಅಂಬೇಡ್ಕರ್ ನಾಮಫಲಕವನ್ನು ಅಧಿಕೃತವಾಗಿ ನಿರ್ಮಿಸಲಾಗಿದೆ. ಅದನ್ನು ಯಾವುದೇ ಕಾರಣಕ್ಕೂ ತೆರವುಗೊಳಿಸಲು ಬಿಡುವುದಿಲ್ಲ” ಎಂದು ಹೇಳಿದ್ದಾರೆ.
“ಅಂಬೇಡ್ಕರ್ ನಾಮಪಲಕ್ಕೆ ಸೂಕ್ತ ರಕ್ಷಣೆ ನೀಡಬೇಕು” ಎಂದು ಆಗ್ರಹಿಸಿದ್ದಾರೆ.