ಯಾದಗಿರಿ | ರೈತರ ಖಾತೆಗಳಿಗೆ ಹಣ ಜಮಾ ವಿಳಂಬ; ಪ್ರತಿಭಟನೆ

Date:

Advertisements

2023-24ನೇ ಸಾಲಿನ ಬರ ಪೀಡಿತ ಜಿಲ್ಲಾ ಹಾಗೂ ತಾಲೂಕುಗಳು ಎಂದು ಘೋಷಿಸಿ ಸರ್ಕಾರ ಹಣ ಮಂಜೂರು ಮಾಡಿದರೂ, ರೈತರ ಖಾತೆಗಳಿಗೆ ಹಣ ಜಮಾ ಆಗದೆ ವಿಳಂಬವಾಗಿರುವುದು ಖಂಡಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ ನಡೆಸಿದೆ. ಯಾದಗಿರಿ ಜಿಲ್ಲೆಯ ಗುರುಮಿಟಕಲ್ ತಹಸೀಲ್ದಾರ್‌ಗೆ ಪ್ರತಿಭಟನಾಕಾರರು ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿದ ಸಂಘಟನೆಯ ತಾಲೂಕು ಅಧ್ಯಕ್ಷ ಲಾಲಪ್ಪ ತಲಾರಿ, “ಕರ್ನಾಟಕ ಸರ್ಕಾರ 2023-24ನೇ ಸಾಲಿನ ಬರಪಿಡಿತ ಜಿಲ್ಲೆ ಹಾಗೂ ತಾಲೂಕುಗಳೆಂದು ಘೋಷಿಸಿ ಹಣ ಬಿಡುಗಡೆಮಾಡಿದೆ. ಆದರೆ, ಈ ಹಣ ಮಂಜೂರಾಗಿ ತಿಂಗಳುಗಳು ಕಳೆದರೂ ಯಾದಗಿರಿ ಜಿಲ್ಲೆಯಾ ಗುರುಮಿಠಕಲ್ ತಾಲೂಕಿನ ರೈತರ ಖಾತೆಗಳಿಗೆ ಒಂದು ರೂಪಾಯಿ ಹಣ ಕೂಡಾ ಜಮಾ ಆಗಿಲ್ಲ ಮತ್ತು ಬೆಳೆದ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯೂಸಿಗದೆ ರೈತರು ಕಂಗಲಾಗಿದ್ದಾರೆ” ಎಂದು ಹೇಳಿದ್ದಾರೆ.

ಕೂಲಿ-ನಾಲಿ ಮಾಡಿಕೊಂಡು ಜೀವನಮಾಡಬೇಕೆಂದರೆ, ಕಲ್ಯಾಣ ಕರ್ನಾಟಕ ಗಡಿಭಾಗದ ಅತೀ ಹಿಂದುಳಿದ ಯಾದಗಿರಿ ಜಿಲ್ಲೆಯ ನೂತನವಾಗಿ ಘೋಷಣೆಯಾದ ಗುರಮಿಠಕಲ್ ತಾಲೂಕಿನಲ್ಲಿ ಯಾವುದೇ ಅಭೀವೃದ್ಧಿ ಕಾಮಗಾರಿಗಳು ನಡೆಯುತ್ತಿಲ್ಲ. ಇದರ ಪರಿಣಾಮವಾಗಿ ಈ ಭಾಗದ ರೈತರು ಏನುಮಾಡಬೇಕೆಂದು ದಿಕ್ಕುತೊಚದೆ ಕುಟುಂಬಸಹಿತ ಬೆಂಗಳೂರು, ಮುಂಬೈ ಹಾಗೂ ಹೈದ್ರಾಬಾದಿನಂತ ಮಹಾನಗರಗಳಿಗೆ ಕೆಲಸಕ್ಕಾಗಿ ಗುಳೆಹೊಗುತ್ತಿದ್ದಾರೆ ಎಂದು ತಿಳಿಸಿದರು.

Advertisements

ಇದರಿಂದ ರೈತರ ಮಕ್ಕಳ ಶಿಕ್ಷಣ ಕುಂಠಿತವಾಗುತ್ತಿದೆ. ಪ್ರಯುಕ್ತ ಸಂಬಂಧ ಪಟ್ಟ ಅಧಿಕಾರಿಗಳು ಈ ವಿಷಯವನ್ನು ಗಂಭಿರವಾಗಿ ಪರಿಗಣಿಸಿ ರೈತರ ಖಾತೆಗಳಿಗೆ ಸರ್ಕಾರದಿಂದ ಮಂಜೂರಾದ ಹಣವನು ಶೀಘ್ರವಾಗಿ ಜಮಾಮಾಡಿ ರೈತರನ್ನು ಗುಳೆಹೊಗುವ ಮನಸಿಕ ಮನಃಸ್ಥಿತಿಯಿಂದ ತಪ್ಪಿಸಬೇಕು ವಿಳಂಬ ಮಾಡಿದರೆ ಮುಂದಿನ ದಿನಗಳಲ್ಲಿ ರೈತರೊಂದಿಗೆ ಜಿಲ್ಲಾಧಿಕಾರಿಗಳ ಕಾರ್ಯಲಯ ಮುಂದು ಹೋರಾಟಮಾಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಈ ಸಂದರ್ಭದಲ್ಲಿ ಬಿ.ಎಸ್. ತಲಾರಿ, ಗುರುನಾಥ ಕುಂಬರ್, ಶ್ರೀಕಾಂತ್ ತಲಾರಿ, ಲಾಲಪ್ಪ ತಲಾರಿ ಇನ್ನಿತರರು ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಡಿಮ್ಹಾನ್ಸ್ ಸಂಸ್ಥೆಯ ಟೆಲಿ-ಮನಸ್ ವಿಭಾಗದ ಸಿಬ್ಬಂದಿಗಳಿಗೆ ತರಬೇತಿ ಕಾರ್ಯಾಗಾರ

ಬೆಂಗಳೂರು ನಿಮ್ಹಾನ್ಸ್ ಟೆಲಿ-ಮನಸ್ ಅಪೆಕ್ಸ್ ತಂಡದಿಂದ ಧಾರವಾಡ ಡಿಮ್ಹಾನ್ಸ್ ಸಂಸ್ಥೆಯ ಟೆಲಿ-ಮನಸ್...

ಕಲಬುರಗಿ | ಶಾಲಾ ಮೇಲ್ಚಾವಣಿ ಕುಸಿದು ಮೂವರು ವಿದ್ಯಾರ್ಥಿಗಳಿಗೆ ಗಾಯ; ಗ್ರಾಮಸ್ಥರಿಂದ ಪ್ರತಿಭಟನೆ

ಸೇಡಂ ತಾಲ್ಲೂಕಿನ ಮಲ್ಕಾಪಲ್ಲಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೇಲ್ಚಾವಣಿ...

ಗದಗ | ನಾಲ್ಕು ದಿನಗಳಿಂದ ರೈತರು ಪ್ರತಿಭಟನೆ, ಸ್ಪಂದಿಸದ ಆಡಳಿತ: ಜೆಡಿಎಸ್ ರಾಜ್ಯ ವಕ್ತಾರ ವೆಂಕನಗೌಡ ಗೋವಿಂದಗೌಡ್ರ ಕಿಡಿ

"ಬಗರ್‌ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಬೇಕು ಎಂದು ಒತ್ತಾಯಿಸಿ ರೈತರು ನಾಲ್ಕು ದಿನಗಳಿಂದ...

ಕೊಪ್ಪಳ | ಅಕ್ರಮ ಗಾಂಜಾ ಮಾರಾಟ : ಒಂದೇ ಕುಟುಂಬದ 3 ಸೇರಿ ನಾಲ್ವರ ಬಂಧನ

ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದವರ ಮೇಲೆ ದಾಳಿ ನಡೆಸಿ...

Download Eedina App Android / iOS

X