ಯಾದಗಿರಿ | ಬ್ರಾಹ್ಮಣ್ಯವಾದಿ ಶಕ್ತಿಗಳು ಸಂವಿಧಾನ ವಿರೋಧಿ ಚಟುವಟಿಕೆ ನಡೆಸುತ್ತಿವೆ ; ಚಂದ್ರಕಾಂತ ಬಜೇರಿ

Date:

ದೇಶದಲ್ಲಿ ಕೋಮು ಗಲಭೆ ಸೃಷ್ಟಿಸಿ ಜನರನ್ನು ಧರ್ಮದ ಆಧಾರದ ಮೇಲೆ ವಿಭಜಿಸಿ ಬ್ರಾಹ್ಮಣ್ಯವಾದಿ ಆಡಳಿತವನ್ನು ಮುಂದುವರಿಸಲು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಕುತಂತ್ರ ನಡೆಸುತ್ತಿದೆ ಎಂದು ಆರೋಪಿಸಿ, ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‌ವಾದ ತಾಲೂಕು ಸಮಿತಿ ಶಹಾಪುರ ಘಟಕದ ವತಿಯಿಂದ ತಹಶಿಲ್ದಾರರ ಕಚೇರಿ ಎದುರುಗಡೆ ಸೋಮವಾರ ಪ್ರತಿಭಟನೆ ನಡೆಸಲಾಯಿತು.

- Advertisement -

ಪ್ರತಿಭಟನಾಕಾರರು ಧ್ವಜ, ಫಲಕಗಳನ್ನು ಹಿಡಿದು “ಸಂವಿಧಾನ ಉಳಿಸೋಣ”, “ಮನುವಾದಕ್ಕೆ ಮುಕ್ತಿ ಕೊಡೋಣ”, “ಅಂಬೇಡ್ಕರ್ ಚಿಂತನೆ ನಮ್ಮ ಹಾದಿ” ಎಂದು ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ನಂತರ ಶಹಾಪುರ್ ತಾಲೂಕು ದಂಡಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಮನವಿ ಸಲ್ಲಿಸಿ ದಸಂಸ ಅಂಬೇಡ್ಕರ್‌ವಾದ ತಾಲೂಕು ಸಂಚಾಲಕ ಚಂದ್ರಕಾಂತ ಬಜೇರಿ ಮಾತನಾಡಿ, ‘1950ರ ದಶಕದಲ್ಲಿಯೇ ಡಾ. ಬಾಬಾ ಸಾಹೇಬ ಅಂಬೇಡ್ಕರ್ ಅವರು ಆರ್‌ಎಸ್‌ಎಸ್ ಹಾಗೂ ವಿಶ್ವ ಹಿಂದೂ ಮಹಾಸಭೆಯಂತಹ ಸಂಘಟನೆಗಳ ಅಪಾಯಕಾರಿ ಮನೋಭಾವದ ಬಗ್ಗೆ ಎಚ್ಚರಿಕೆ ನೀಡಿದ್ದರು. ಅವರು ಸಂವಿಧಾನ ರಚಿಸಿದ ನಂತರ ಆರ್‌ಎಸ್‌ಎಸ್ ತನ್ನ ಪತ್ರಿಕೆಯಲ್ಲಿ ಸಂವಿಧಾನ ವಿರೋಧಿ ಲೇಖನಗಳನ್ನು ಪ್ರಕಟಿಸಿತ್ತು. ಇದು ಅವರ ಮನುವಾದಿ ಮನೋಭಾವವನ್ನು ಬಯಲಿಗೆಳೆಯುತ್ತದೆ,” ಎಂದು ಹೇಳಿದರು.

583297

ಅವರು ಮುಂದುವರಿಸಿ, “ಹಿಂದೂ ಮಹಿಳೆಯರಿಗೆ ಸಮಾನ ಹಕ್ಕು ನೀಡಲು ಬಾಬಾ ಸಾಹೇಬ ಹೋರಾಡುತ್ತಿದ್ದಾಗ, ಆರ್‌ಎಸ್‌ಎಸ್ ಹಿಂದೂ ಕೋಡ್ ಬಿಲ್ ಪ್ರತಿಯನ್ನು ಸುಟ್ಟು ವಿರೋಧಿಸಿತ್ತು. ಇತ್ತೀಚೆಗೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಜಸ್ಟಿಸ್ ಗವಾಯಿಯವರ ಮೇಲೆ ಶೂ ಎಸೆದ ಘಟನೆ ಕೂಡಾ ಅದೇ ಮನೋಭಾವದ ಪ್ರತಿಫಲವಾಗಿದೆ,” ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಜೀವ ಬೆದರಿಕೆ ಹಾಕಿದ ಘಟನೆಯನ್ನು ಖಂಡಿಸಿದ ಅವರು, ‘ಮನುವಾದಿ ಶಕ್ತಿಗಳು ಪ್ರಜಾಸತ್ತಾತ್ಮಕ ಧ್ವನಿಗಳನ್ನು ಕುಗ್ಗಿಸಲು ಯತ್ನಿಸುತ್ತಿವೆ. ಸಂವಿಧಾನದ ಮೌಲ್ಯಗಳ ವಿರುದ್ಧ ನಡೆಯುತ್ತಿರುವ ಇಂತಹ ಅಂಶಗಳ ವಿರುದ್ಧ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು,’ ಎಂದು ಒತ್ತಾಯಿಸಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಗುಲ್ಬರ್ಗಾ ವಿವಿಗೆ ಅಂಬೇಡ್ಕರ್ ಹೆಸರಿಡುವಂತೆ ದಸಂಸ ಆಗ್ರಹ

‘ಗುಲಬರ್ಗಾ ವಿಶ್ವವಿದ್ಯಾಲಯಕ್ಕೆ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಹೆಸರು ಇಡುವುದು, ಸಚಿವ ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ ಹಾಕಿದವರ ವಿರುದ್ಧ ಕಾನೂನು ಪ್ರಕಾರ ಜೀವಾವಧಿ ಶಿಕ್ಷೆ ವಿಧಿಸುವುದು, ಚಿತ್ತಾಪುರದಲ್ಲಿ ಅನುಮತಿ ಇಲ್ಲದೆ ಪಥಸಂಚಲನ ನಡೆಸಿದರೆ ಆರ್‌ಎಸ್‌ಎಸ್ ವಿರುದ್ಧ ಕ್ರಮ ಕೈಗೊಳ್ಳುವಂತೆ’ ಒತ್ತಾಯಿಸಿ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ನಾಗಣ್ಣ ಬಡಿಗೇರ, ಬಸವರಾಜ ಅಣಬಿ, ಪರಶುರಾಮ ಮಹಲ್‌ರೋಜಾ, ಶ್ರೀಶೈಲ್ ರಾಜಾಪೂರ, ನಾಗರಾಜ ಬೊಮ್ಮನಹಳ್ಳಿ, ಹಯ್ಯಾಳಪ್ಪ ದೇವಕರ್, ಅನೀಲ್ ಸಾಕ್ರೆ, ಮಾನಪ್ಪ ಮುದಕನವರ, ಮಹಾಂತೇಶ ಪೂಜಾರಿ, ಮರೆಪ್ಪ ಮಹಲ್‌ರೋಜಾ, ಶರಣು ಸಾಧು ಸಗರ, ಗದ್ದಿಗೆಪ್ಪ ಇಬ್ರಾಹಿಂಪೂರ, ಬಸವರಾಜ ಮುದ್ದನರ್, ಸುರೇಶ ಸಗರ ಸೇರಿದಂತೆ ಅನೇಕರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಅ.13ರಂದು ಯುವ ದಸರಾ ಉದ್ಘಾಟಿಸಲಿರುವ ನಟ ಪ್ರಭುದೇವ್‌

2026ರ ಯುವ ದಸರಾ ಕಾರ್ಯಕ್ರಮವನ್ನು ಅಕ್ಟೋಬರ್ 13ರಂದು ಖ್ಯಾತ ನೃತ್ಯ ನಿರ್ದೇಶಕ...

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...

ಕೋಲಾರ | ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಶಾಸಕರ ಆಪ್ತ ಸಹಾಯಕರಿಗೆ ಮನವಿ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ತಡೆಹಿಡಿದಿರುವ ಕನಿಷ್ಠ ವೇತನ ಜಾರಿಗೊಳಿಸುವುದು, ಗುತ್ತಿಗೆ...