ಯಾದಗಿರಿ | ಗುಂಡಿಗಳಿಗೆ ಕಾಂಕ್ರೀಟ್ ಸುರಿದು ರಸ್ತೆ ದುರಸ್ತಿಗೊಂಡಿದೆ‌ ಎಂದು ತಿಳಿಸಿದ ಅಧಿಕಾರಿಗಳು!

Date:

Advertisements

ನೆರೆಯ ರಾಜ್ಯ ತೆಲಂಗಾಣದ ಹೈದರಾಬಾದ್‌ಗೆ ಸಂಪರ್ಕ ಕಲ್ಪಿಸುವ ಯಾದಗಿರಿ ಜಿಲ್ಲೆಯ ದೋರನಹಳ್ಳಿಯ ರಾಜ್ಯ ಹೆದ್ದಾರಿಯ ಮುಖ್ಯ ರಸ್ತೆಯಲ್ಲಿ ದೊಡ್ಡ ದೊಡ್ಡ ರಸ್ತೆ ಗುಂಡಿಗಳು ಬಿದ್ದಿದೆ. ರಸ್ತೆ ಉದ್ದಕ್ಕೂ ತಗ್ಗು ಗುಂಡಿಗಳು ಬಿದ್ದಿರುವುದರಿಂದ ಪ್ರಯಾಣಿಕರು, ವಾಹನ ಸವಾರರು ಸಂಚಾರ ನಡೆಸುವುದಕ್ಕೆ ಜೀವಭಯ ಉಂಟಾಗಿದೆ.

ರಸ್ತೆ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಸಾಕಷ್ಟು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ, ಶಾಸಕ ಚನ್ನಾರೆಡ್ಡಿ ತುನ್ನೂರ ಪಾಟೀಲ, ಸಚಿವ ಶರಣ ಬಸಪ್ಪ ದರ್ಶನಾಪುರ ಜಿಲ್ಲೆಯವ ರಾಜ್ಯ ಹೆದ್ದಾರಿ ಕುರಿತು ಗಮನ ಹರಿಸುತ್ತಿಲ್ಲ. ಸುಮಾರು ವರ್ಷಗಳೆ‌ ಕಳೆದಿವೆ ರಸ್ತೆ ದುರಸ್ತಿ ಕಂಡಿಲ್ಲ ಎಂದು ದೋರನಹಳ್ಳಿಯ ಗ್ರಾಮಸ್ಥರು ದೂರಿದ್ದಾರೆ.

ಸಾಮಾಜಿಕ ಹೋರಾಟಗಾರ ಸುರೇಶ್ ರೆಡ್ಡಿ ಈ ದಿನ.ಕಾಮ್‌ ಜೊತೆಗೆ ಮಾತನಾಡಿ, “ದೊರನಹಳ್ಳಿ ಮುಖ್ಯ ರಸ್ತೆ ಹದಗೆಟ್ಟಿದೆ. ರಸ್ತೆಯುದ್ದಕ್ಕೂ ದೊಡ್ಡ ದೊಡ್ಡ ಗುಂಡಿಗಳು ಬಿದ್ದಿದ್ದು, ನನ್ನ ವಾಹನ ಕೂಡ ಅಪಘಾತಕ್ಕೀಡಾಗಿತ್ತು. ಸಾಕಷ್ಟು ಜನರು ಕಷ್ಟ ನಷ್ಟ ಅನುಭವಿಸಿದ್ದಾರೆ. ಈ ಹಿಂದೆ ರಸ್ತೆ ಸಮಸ್ಯೆ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಕೂಡ ಯಾವುದೇ ಪ್ರಯೋಜನವಾಗಿಲ್ಲ. ಅಧಿಕಾರಿಗಳು ದಿವ್ಯ ನಿರ್ಲಕ್ಷ ವಹಿಸುತ್ತಿದ್ದಾರೆ. ಶಾಸಕರು, ಸಚಿವರು ಮಲತಾಯಿ ಧೋರಣೆ ಮಾಡುತ್ತಿದ್ದಾರೆ. ಒಂದು ವೇಳೆ ದುರಸ್ತಿ ಮಾಡದೇ ಇದ್ದಲ್ಲಿ ಉಗ್ರವಾದ ಹೋರಾಟ ಹಮ್ಮಿಕೊಳ್ಳಲಾಗುವುದು” ಎಂದು ಎಚ್ಚರಿಕೆ ನೀಡಿದರು.

Advertisements
ರಸ್ತೆ1 2

ದೋರನಹಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚಂದ್ರಾವತಿ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಸಮಸ್ಯೆ ಕುರಿತು ಅಧಿಕಾರಿಗಳಿಗೆ ತಿಳಿಸಿ ದುರಸ್ತಿ ಮಾಡುವಂತೆ ನೋಡಿಕೊಳ್ಳುವೆ” ಎಂದು‌ ತಿಳಿಸಿದರು.

ಗ್ರಾಮ ಪಂಚಾಯತಿ ಅಭಿವೃದ್ಧಿ ‌ಅಧಿಕಾರಿ ದೇವರಾಜ್‌ ಮೌರ್ಯ ಈದಿನ.ಕಾಮ್ ಜೊತೆಗೆ ಮಾತನಾಡಿ, “ರಸ್ತೆ ದುರಸ್ತಿ ನಡೆಯುತ್ತಿದೆ. ಗುಂಡಿಗಳಿಗೆ ಕಾಂಕ್ರೀಟ್ ಹಾಕಿ ಮುಚ್ಚಲಾಗಿದೆ” ಎಂದು ತಿಳಿಸಿದರು. ಆದರೆ, ರಸ್ತೆಯನ್ನು ಗಮನಿಸಿದರೆ, ಅದು ದುರಸ್ತಿಯೋ ಅಥವಾ ಕಾಟಾಚಾರಕ್ಕೆ ಮಾಡಿದ ಕೆಲಸವೊ ಎಂಬಂತಿದೆ.

ರಸ್ತೆ 9

ಈ ಬಗ್ಗೆ ಲೋಕೋಪಯೋಗಿ ಇಲಾಖೆ ಅಧಿಕಾರಿ ಸುಗಾ ರೆಡ್ಡಿ ಮಾತನಾಡಿ, ರಸ್ತೆ ನಿರ್ಮಾಣ ಮಾಡಿ ಬಹಳ ವರ್ಷವಾಗಿರುವುದರಿಂದ ಈ ರಸ್ತೆ ಹೀಗಿರುವುದಕ್ಕೆ ಕಾರಣ. ಕ್ರಿಯಾ ಯೋಜನೆಯ ಬಳಿಕ ಬಜೆಟ್ ಇಲ್ಲ. ಹಾಗಾಗಿ ಯಾದಗಿರಿ ಶಾಸಕ ಚನ್ನಾರೆಡ್ಡಿ‌ ಪಾಟೀಲ್ ಅವರು ಕೆಕೆ‌ಆರ್‌ಡಿಬಿ‌ಯ ಅಡಿಯಲ್ಲಿ ಬೇಡಿಕೆ ಇಟ್ಟಿದ್ದಾರೆ. ಆದರೆ ಶಾಸಕರು ಯಾದಗಿರಿಯಲ್ಲಿಲ್ಲ. ಅವರು ಬಂದ ಬಳಿಕ ಕೆಕೆಆರ್‌ಡಿ‌ಬಿಯ ಆದೇಶ ಸಿಕ್ಕ ತಕ್ಷಣವೇ ರಸ್ತೆ ದುರಸ್ತಿ ಕಾಮಗಾರಿ ನಡೆಸಲಾಗುವುದು” ಎಂದು ತಿಳಿಸಿದರು.

ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ ಅವರು, ಯಾದಗಿರಿ ನಗರ ಠಾಣೆಯ ಪಿಎಸ್ಐ ಪರಶುರಾಮ ಆತ್ಮಹತ್ಯೆ ಪ್ರಕರಣದಲ್ಲಿ ಸಿಲುಕೊಂಡಿರುವುದರಿಂದ ತಲೆಮರೆಸಿಕೊಂಡು ಓಡಾಡುತ್ತಿದ್ದಾರೆ. ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸ ಸೇರಿದಂತೆ ಇನ್ನಿತರ ಕೆಲಸಗಳು ನೆನೆಗುದಿಗೆ ಬಿದ್ದಿದೆ. ಇದರಿಂದಾಗಿ ಯಾದಗಿರಿ ಜಿಲ್ಲೆಯ ಜನರು ನರಕಯಾತನೆ ಅನುಭವಿಸುತ್ತಿದ್ದಾರೆ.

ಇದನ್ನು ಓದಿದ್ದೀರಾ? ಬೆಂಗಳೂರು ವಿಭಜನೆಗೆ ಬಿಜೆಪಿ-ಜೆಡಿಎಸ್‌ ಬಿಡಲ್ಲ, ತಿದ್ದುಪಡಿಗೆ ಒಪ್ಪದಿದ್ದರೆ ಹೋರಾಟ: ಆರ್‌ ಅಶೋ‌ಕ್‌

ಅಧಿಕಾರಿಗಳು, ರಾಜ್ಯ ಹೆದ್ದಾರಿ ದೋರನಹಳ್ಳಿ ಮುಖ್ಯ ರಸ್ತೆ ದುರಸ್ತಿ ಮಾಡಿ‌, ಜನಸಾಮಾನ್ಯರಿಗೆ ಅನುಕೂಲ ಮಾಡಿಕೊಡುವರೇ? ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಬಸಪ್ಪ ದರ್ಶನಾಪುರ ಈ ಬಗ್ಗೆ ಕ್ರಮ ಕೈಗೊಳ್ಳುವರೇ ಎಂಬುದನ್ನು ಕಾದು ನೋಡಬೇಕಿದೆ.

ಗೀತಾ ಹೊಸಮನಿ
ಗೀತಾ ಹೊಸಮನಿ
+ posts

ಯಾದಗಿರಿ, ಕಲಬುರಗಿ ಜಿಲ್ಲಾ ಸಂಯೋಜಕರು, NCCಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಪದಕ(NRAI ಫೈರಿಂಗ್ ವಿಭಾಗ) ವಿಜೇತೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಗೀತಾ ಹೊಸಮನಿ
ಗೀತಾ ಹೊಸಮನಿ
ಯಾದಗಿರಿ, ಕಲಬುರಗಿ ಜಿಲ್ಲಾ ಸಂಯೋಜಕರು, NCCಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಪದಕ(NRAI ಫೈರಿಂಗ್ ವಿಭಾಗ) ವಿಜೇತೆ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X