ಯಾದಗಿರಿ | ಹಾಸ್ಟೆಲ್, ವಸತಿ ಶಾಲಾ ಹೊರಗುತ್ತಿಗೆ ನೌಕರರಿಗೆ ಮಾಸಿಕ ₹36 ವೇತನಕ್ಕೆ ಆಗ್ರಹ

Date:

ಹಾಸ್ಟೆಲ್‌ಗಳಲ್ಲಿ ಕೆಲಸ ಮಾಡುತ್ತಿರುವ ಹೊರಗುತ್ತಿಗೆ ನೌಕರರಿಗೆ ಮಾಸಿಕ ₹36 ವೇತನ ಕೊಡುವಂತೆ ಆಗ್ರಹಿಸಿ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ಯಾದಗಿರಿ ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

- Advertisement -

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಲ್ಲಿ ಹೊರಗುತ್ತಿಗೆ ನೌಕರರು ಸುಮಾರು 15 ವರ್ಷಗಳಿಂದ ಕಡಿಮೆ ಸಂಬಳಕ್ಕೆ ದುಡಿಯುತ್ತಿದ್ದಾರೆ ಎಂದು ಪ್ರತಿಭಟನಕಾರರು ಹೇಳಿದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ...

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ ಪ್ರಭಾವ ಬೀರುತ್ತಿದ್ದ ಭೂಗತ ಲೋಕ, ಈಗ ಗುಂಡಿನ ದಾಳಿ ಮತ್ತು ಜೀವಬೆದರಿಕೆಗಳ ಮೂಲಕ ಮತ್ತೊಮ್ಮೆ ತನ್ನ ಅಸ್ತಿತ್ವ ಪ್ರದರ್ಶಿಸುತ್ತಿದೆ. ದಾವೂದ್...

ಲೋಕಸಭೆಯ ಬಲ 850ಕ್ಕೆ ಏರಿಕೆ: ಕಲಾಪದ ಸಮಯ ಹೆಚ್ಚಳವಿಲ್ಲದಿದ್ದರೆ...

ಲೋಕಸಭೆಯ ಸದಸ್ಯರ ಬಲವನ್ನು 550ರಿಂದ 850ಕ್ಕೆ ಹೆಚ್ಚಿಸುವ ‘ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ–2026’ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ. ಜನಸಂಖ್ಯೆಗೆ ಅನುಗುಣವಾಗಿ ಸೀಟುಗಳ ಹೆಚ್ಚಳ ಅನಿವಾರ್ಯವಾದರೂ, ಸಂಸತ್ತಿನ ವಾರ್ಷಿಕ ಕಲಾಪದ ದಿನಗಳು ಮತ್ತು...

ಸೌದಿ ಅರೇಬಿಯಾದ ಕಂಠನಾಳಕ್ಕೇ ಕೈಹಾಕಿರುವ ಯೆಮನ್!

ಸೌದಿ ಅರೇಬಿಯಾದ ಜೀವನಾಡಿಗೇ ಕೈಹಾಕಿರುವ ಯೆಮನ್‌ನ ಈ ಪ್ರತಿರೋಧವು ಕೇವಲ ಒಂದು ಯುದ್ಧದ ಕಥೆಯಲ್ಲ; ಇದು ಮಧ್ಯಪ್ರಾಚ್ಯದ ರಾಜಕೀಯ ಇತಿಹಾಸವನ್ನೇ ಮರುಬರೆಯಬಹುದಾದ ಸಂಘರ್ಷವಾಗಿದೆ. ಅಲ್ಲಿಯವರೆಗೆ, ಯೆಮನ್ ಕೇವಲ ಅರಬ್ ಜಗತ್ತಿಗಷ್ಟೇ ಅಲ್ಲ, ಇಡೀ...

ʼಹೊರ ಗುತ್ತಿಗೆ ನೌಕರ ರನ್ನು ಶೋಷಣೆಯಿಂದ ತಪ್ಪಿಸಲು ಇಲಾಖೆಯಿಂದ ನೇರವಾಗಿ ವೇತನ ಪಾವತಿಸಬೇಕು. ನಿವೃತ್ತಿವರೆಗೆ ಸೇವಾ ಭದ್ರತೆ ಕೊಡಬೇಕು. ಕಾರ್ಮಿಕ ಕಾನೂನು ಪ್ರಕಾರ ಕಡ್ಡಾಯವಾಗಿ ವಾರಕ್ಕೆ ಒಂದು ರಜೆ ನೀಡಬೇಕು. ಕೆಲಸದ ಸಮಯವನ್ನು ನಿಗದಿ ಮಾಡಬೇಕು. ಬೀದರ್ ಜಿಲ್ಲೆಯ ಮಾದರಿಯಲ್ಲಿ ಜಿಲ್ಲಾ ಕಾರ್ಮಿಕ ಸೇವೆಗಳ ವಿವಿಧೋದ್ದೇಶ ಸಹಕಾರ ಸಂಘ ಯಾದಗಿರಿಯಲ್ಲಿಯೂ ಮಾಡಬೇಕು. ಗುತ್ತಿಗೆದಾರರು ಸಂಬಳದ ಚೀಟಿ, ನೇಮಕಾತಿ ಆದೇಶ ಪತ್ರ, ಗುರುತಿನ ಚೀಟಿ, ಸೇವಾ ಪ್ರಮಾಣ ಪತ್ರ, ಇಎಸ್‌ಐ ಮತ್ತು ಪಿಎಫ್‌ ಹಣ ತುಂಬಿದ ರಶೀದಿ ಕೊಡಬೇಕುʼ ಎಂದು ಆಗ್ರಹಿಸಿದರು.

ʼಹಿಂದುಳಿದ ವರ್ಗ, ಸಮಾಜ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ಸಿಬ್ಬಂದಿ ಸಂಖ್ಯೆ ಕಡಿತ ಮಾಡಿರುವ ಆದೇಶವನ್ನು ರದ್ದು ಮಾಡಬೇಕು. 50 ವಿದ್ಯಾರ್ಥಿಗಳಿಗೆ 3 ಮೂವರು ಸಿಬ್ಬಂದಿಯಂತೆ ಈ ಹಿಂದಿನ ಪದ್ಧತಿ ಮುಂದುವರಿಸಬೇಕು. ಪ್ರತಿ ತಿಂಗಳು 5ನೇ ತಾರೀಖು ಸಂಬಳ ಕೊಡಬೇಕು. ಬಾಕಿ ಇರುವ ಸಂಬಳವನ್ನು ತಕ್ಷಣವೇ ಪಾವತಿ ಮಾಡಬೇಕು. 10 ವರ್ಷ ಸೇವೆ ಸಲ್ಲಿಸಿರುವ ಹೊರಗುತ್ತಿಗೆ ಸಿಬ್ಬಂದಿಯನ್ನು ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಅಧಿನಿಯಮದ ಅಡಿಯಲ್ಲಿ ತರಬೇಕುʼ ಎಂದು ಒತ್ತಾಯಿಸಿದರು.

ʼಬಿಸಿಎಂ ಇಲಾಖೆಯಲ್ಲಿ ಕೆಲಸ ಕಳೆದುಕೊಂಡಿರುವ ಹೊರಗುತ್ತಿಗೆ ಸಿಬ್ಬಂದಿಯನ್ನು ಮರು ನೇಮಕ ಮಾಡಿಕೊಳ್ಳಬೇಕು. ಹೊಸದಾಗಿ ಪ್ರಾರಂಭ ಮಾಡುವ ಹಾಸ್ಟೆಲ್‌ಗಳಿಗೆ ಕಡ್ಡಾಯವಾಗಿ ಕೆಲಸಕ್ಕೆ ತೆಗೆದುಕೊಳ್ಳಬೇಕು. ಅಡುಗೆಯವರು, ಅಡುಗೆ ಸಹಾಯಕರು, ಸ್ವಚ್ಛತಾಗಾರರಿಂದ ಶೌಚಾಲಯ ಸ್ವಚ್ಛತೆ ಮಾಡಿಸಬಾರದು. ವಸತಿ ನಿಲಯ ಮತ್ತು ಹಾಸ್ಟೆಲ್‌ಗಳಿಗೆ ಅಡುಗೆಗೆ ಬೇಕಾದ ಗುಣಮಟ್ಟದ ಆಹಾರ ಸಾಮಾಗ್ರಿಗಳನ್ನು ಸರಿಯಾದ ಪ್ರಮಾಣದಲ್ಲಿ ತಂದು ಕೊಡಬೇಕು. ನಿವೃತ್ತಿ ನಂತರ ಜೀವನ ನಿರ್ವಹಣೆಗೆ ₹10 ಲಕ್ಷ ಪರಿಹಾರ ಕೊಡಬೇಕುʼ ಎಂದು ಮನವಿ ಮಾಡಿದರು.

ಇದನ್ನೂ ಓದಿ : ಬೀದರ್‌ | ಡಿಜಿಟಲ್ ಗ್ರಂಥಾಲಯದಲ್ಲಿ ಓದಿ ವಿದೇಶದಲ್ಲಿ ನೌಕರಿ : ಹಳ್ಳಿ ಹುಡುಗನ ಸಾಧನೆಗೆ ಎಲ್ಲರೂ ದಿಲ್‌ ಖುಷ್!

ಪ್ರತಿಭಟನೆಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಹನುಮೇಗೌಡ, ರಾಜ್ಯ ಉಪಾಧ್ಯಕ್ಷ ಹುಲಗಪ್ಪ ಛಲವಾದಿ, ಜಿಲ್ಲಾ ಅಧ್ಯಕ್ಷ ದವಾಲ್‌ಸಾಬ್ ನದಾಫ್ ಸೇರಿದಂತೆ ಪ್ರಮುಖರಾದ ದುರ್ಗಮ್ಮ ಹಳ್ಳಿಸಗರ, ವಸಂತರಾಜ ಪೂಜಾರಿ, ಮಲ್ಲಿಕಾರ್ಜುನ ಯಕ್ಷಿಂತಿ, ಶಂಕರ ಕಡಗುಡ, ಅಯ್ಯಪ್ಪ ಅನಸೂರ, ಪ್ರಕಾಶ ಹಾಲ್ಯ, ಶರಣಬಸವ ಜಂಬಲದಿನ್ನಿ, ರಂಗಮ್ಮ ಕಟ್ಟಿಮನಿ, ಬಸಣ್ಣ ಕೆಂಭಾವಿ, ಲಲಿತಾ ಮುದನೂರ, ಶ್ರೀದೇವಿ ಹುಣಸಗಿ, ಶರಣಪ್ಪ ಗೋಗಿ, ಮಂಜುಳ ಮುಂಡಾನ, ಮಲ್ಲಮ್ಮ ಹೈಕೂರ, ಬಸವರಾಜ ಖ್ಯಾತನಾಳ, ಭೀಮರಡ್ಡಿ ಹಳಕಟ್ಟಿ, ರಮೇಶ ಬೇಡೆಬೆಂಬಳಿ, ಶಾರದಾ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ನನ್ನ ರಾಜಕೀಯ ಏಳಿಗೆಯಲ್ಲಿ ಮಾಜಿ ಸಚಿವ ಆರ್.ಎಲ್. ಜಾಲಪ್ಪ ಅವರ ಪಾತ್ರ ದೊಡ್ಡದು | ಸಿದ್ದರಾಮಯ್ಯ

ನಗರದ ಶ್ರೀದೇವರಾಜ ಅರಸು ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಕೇಂದ್ರ ಹಾಗೂ...

ಯಾದಗಿರಿ | ಸಮಾಜ ಪರಿವರ್ತನೆಗೆ ಸಂವಿಧಾನದ ಅರಿವು ಅಗತ್ಯ: ಭೀಮಣ್ಣ ಮೇಟಿ

ಸಂವಿಧಾನದ ಆಶಯಗಳನ್ನು ಅರಿತುಕೊಂಡು ಅವುಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳುವ ಯುವಜನರು ಸಮಾಜ ಸುಧಾರಣೆಯಲ್ಲಿ...

ಚಿಕ್ಕಮಗಳೂರು | ಭೀಕರ ಅಪಘಾತ: ಇಬ್ಬರಿಗೆ ಗಂಭೀರ 

ವಾಹನ ಅಪಘಾತ,ಜೆಸಿಬಿ ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು...