ಯಾದಗಿರಿ | ಹಾಸ್ಟೆಲ್ ಕಾರ್ಮಿಕರ ಬಾಕಿ ವೇತನ ಪಾವತಿಗೆ ಆಗ್ರಹ

Date:

ಯಾದಗಿರಿ ಹಾಗೂ ಗುರುಮಠಕಲ್ ತಾಲೂಕಿನ ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಠ ವರ್ಗಗಳ ಕಲ್ಯಾಣ ಇಲಾಖೆ ಅಡಿಯಲ್ಲಿರುವ ವಸತಿ ನಿಲಯಗಳ ಸಿಬ್ಬಂದಿಗಳಿಗೆ ಬಾಕಿ ವೇತನ ಪಾವತಿಸಬೇಕು. ಅವರೆಲ್ಲರಿಗೂ ಇಎಸ್‌ಐ, ಪಿಎಫ್‌ ಸೌಲಭ್ಯ ಒದಗಿಸಬೇಕು ಎಂದು ಆಗ್ರಹಿಸಿ ಎಐಯುಟಿಯುಸಿ ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ವಸತಿನಿಲಯ ಕಾರ್ಮಿಕರ ಸಂಘ ಪ್ರತಿಭಟನೆ ನಡೆಸಿದೆ.

ಯಾದಗಿರಿಯಲ್ಲಿ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಇಲಾಖೆಯ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. “ಇಲಾಖೆಗಳ ಅಡಿಯಲ್ಲಿರುವ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರ ವಸತಿ ನಿಲಯಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಅಡಿಗೆ, ಅಡಿಗೆ ಸಹಾಯಕರು ಮತ್ತು ಕಾವಲುಗಾರರು ಸೇವೆ ಸಲ್ಲಿಸುತ್ತಿದ್ದಾರೆ. ಅವರೆಲ್ಲರಿಗೂ ಹಲವು ತಿಂಗಳುಗಳಿಂದ ವೇತನ ಪಾವತಿಸಿಲ್ಲ. ಬಾಕಿ ಇರುವ ಐದಾರು ತಿಂಗಳ ವೇತನವನ್ನು ಕೂಡಲೇ ಪಾವತಿ ಮಾಡಬೇಕು. ಇಎಸ್‌ಐ ಮತ್ತು ಇಪಿಎಫ್ ಸೌಲಭ್ಯಗಳನ್ನು ಒದಗಿಸಬೇಕು” ಎಂದು ಆಗ್ರಹಿಸಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿದ ಸಂಘಟನೆಯ ಕಾರ್ಯದರ್ಶಿ ರಾಮಲಿಂಗಪ್ಪ ಬಿ.ಎನ್, “ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಊಟ, ವಸತಿ ನಿಲಯ ಸ್ವಚ್ಛತೆ, ಸುರಕ್ಷತೆ ಸೇರಿದಂತೆ ಕಠಿಣ ಪರಿಶ್ರಮವಹಿಸಿ ಹಾಸ್ಟೆಲ್ ಕಾರ್ಮಿಕರು ಸೇವೆ ಸಲ್ಲಿಸುತ್ತಿದ್ದಾರೆ. ಅವರು ಸಲ್ಲಿಸಿದ ಸೇವೆಗೆ ತಕ್ಕ ವೇತನ ಪ್ರತಿ ತಿಂಗಳು ಸಿಗುತ್ತಿಲ್ಲ. ವರ್ಷಕ್ಕೆ ಒಂದು ಅಥವಾ ಎರಡು ಬಾರಿ ವೇತನ ಪಾವತಿ ಮಾಡುತ್ತಿರುವುದರಿಂದ ಕಾರ್ಮಿಕರು ಯಾವ ತಿಂಗಳ ವೇತನ ಪಾವತಿಯಾಗಿದೆ ಎಂಬುದೇ ಗೊತ್ತಾಗದೆ ಗೊಂದಲಕ್ಕೆ ಒಳಗಾಗಿದ್ದಾರೆ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಸಂಘಟನೆಯ ನಿರಂತರ ಪ್ರಯತ್ನದಿಂದಾಗಿ ಜಿಲ್ಲಾ ಪಂಚಾಯತ ಸಿಇಓ ಅವರ ನಿರ್ದೇಶನದಂತೆ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು, ಏಜೆನ್ಸಿ ಗುತ್ತಿಗೆದಾರರು ಮತ್ತು ನಮ್ಮ ಸಂಘದ ಪದಾಧಿಕಾರಗಳ ಜೊತೆ ಜಂಟಿ ಸಭೆ ನಡೆಸಿದ್ದರು. ಪ್ರತಿ ತಿಂಗಳು ವೇತನ ಪಾವತಿಮಾಡಿ, ಪಾವತಿಸಿದ ವೇತನ ಚೀಟಿಯನ್ನು ಕಾರ್ಮಿಕರಿಗೆ ನೀಡಬೇಕು, ಕಾರ್ಮಿಕರ ವೇತನದಲ್ಲಿ ಕಟಾಯಿಸಿದ ಇಪಿಎಫ್ ಮತ್ತು ಇಎಸ್‌ಐ ವಂತಿಗೆ ಹಣವನ್ನು ಕಾರ್ಮಿಕರ ನೋಂದಾಯಿತ ಇಪಿಎಫ್ ಮತ್ತು ಇಎಸ್‌ಐ ಖಾತೆಗಳಿಗೆ ಜಮಾ ಮಾಡಬೇಕು. ಜಮಾ ಮಾಡದೆ ಇರುವ ಮ್ಯಾನ್ ಪವರ್ / ಏಜೆನ್ಸಿಯವರ ಮೇಲೆ ಕಾನೂನು ರೀತ್ಯಾ ಕ್ರಮ ಕೈಗೊಳ್ಳಬೇಕು ಮತ್ತು ಹಲವು ವರ್ಷಗಳಿಂದ ಕಟ್ಟದೆ ಬಾಕಿ ಇರುವ ಇಪಿಎಫ್ ಮತ್ತು ಇಎಸ್‌ಐ ಮೊತ್ತವನ್ನು ಜಮಾ ಮಾಡಬೇಕು. ಕಾರ್ಮಿಕರಿಗೆ ನೇಮಕಾತಿ ಆದೇಶ ನೀಡುವುದು, ವಾರದ ರಜೆ ಹಾಗೂ ರಾಷ್ಟೀಯ ಹಬ್ಬಗಳ ರಜೆ, ದಿನದ 08 ಗಂಟೆ ಅವಧಿ ಕೆಲಸ ಹಾಗೂ ಹೆಚ್ಚುವರಿ ಕೆಲಸಕ್ಕೆ ಹೆಚ್ಚುವರಿ ವೇತನ(ಓಟಿ) ಪಾವತಿಸುವುದು ಸೇರಿದಂತೆ ಹಲವು ಶಾಸನಬದ್ಧ ಸೌಲಭ್ಯಗಳನ್ನು ಎಲ್ಲ ಕಾರ್ಮಿಕರಿಗೆ ಒದಗಿಸಬೇಕೆಂದು ಸಭೆಯಲ್ಲಿ ನಿರ್ಧರಿಸಲಾಗಿತ್ತು. ಆದರೆ, ಸಭೆಯ ತೀರ್ಮಾನಗಳನ್ನು ಅನುಷ್ಠಾನ ಮಾಡುವಲ್ಲಿ ಏಜೆನ್ಸಿಗಳು ವಿಫಲವಾಗಿವೆ” ಎಂದು ಅವರು ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಸಮ ಬಲ ಇದ್ದವರ ಜೊತೆ ಕುಸ್ತಿ ಆಡಬೇಕು, ಪ್ರತಿಪಕ್ಷಗಳು ಅದಕ್ಕೂ ಯೋಗ್ಯವಿಲ್ಲ: ಸಿಎಂ ಸಿದ್ದರಾಮಯ್ಯ

ಸಂಘದ ಜಿಲ್ಲಾಧ್ಯಕ್ಷ ಶರಣಪ್ಪ ಜಿ ತಿಳಿಗೇರಿಕರ್ ಮಾತನಾಡಿ, “ಪ್ರತಿ ತಿಂಗಳು ವೇತನ ಪಾವತಿ ಮಾಡಬೇಕು. ಇಲ್ಲದೆ ಹೋದರೆ ಕಾರ್ಮಿಕರು ಜೀವನ ಸಾಗಿಸುವುದೇ ಕಷ್ಟವಾಗುತ್ತಿದೆ. ಮಕ್ಕಳ ವಿದ್ಯಭ್ಯಾಸ, ಆನಾರೋಗ್ಯ ಸೇರಿದಂತೆ ದೈನಂದಿನ ಜೀವನ ಸಾಗಿಸಲು ಪರದಾಡುವ ಸ್ಥಿತಿಯಲ್ಲಿ ಕಾರ್ಮಿಕರಿದ್ದಾರೆ. ಆದ್ದರಿಂದ ಪ್ರತಿ ತಿಂಗಳು ವೇತನ ಪಾವತಿ ಮಾಡಿದರೆ ಕಾರ್ಮಿಕರಿಗೆ ಅನುಕೂಲವಾಗುತ್ತದೆ” ಎಂದರು.

ಮನವಿ ಪತ್ರವನ್ನು ಸ್ವೀಕರಿಸಿದ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯಧಿಕಾರಿ ಸರೋಜಾ, “ವೇತನ ಬಾಕಿ ಇರುವ ಕುರಿತು ಅಧಿಕಾರಿಗಳ ಜೊತೆ ಚರ್ಚಿಸಿ ಪಾವತಿಗೆ ಕ್ರಮ ಕೈಗೊಳ್ಳಲಾಗುವುದು. ಇನ್ನುಳಿದ ಬೇಡಿಕೆಗಳನ್ನು ಪರಿಶೀಲನೆ ಮಾಡಿ ಕಾನೂನು ರೀತಿ ಕ್ರಮಕೈಗೊಳ್ಳಲಾಗುವುದು” ಎಂದು ಭರವಸೆ ನೀಡಿದರು.

ಪ್ರತಿಭಟನೆಯಲ್ಲಿ ಜಗದೇವಿ ಶ್ರೀಗಿರಿ, ಶ್ರೀಕಾಂತ್ ಚಿಕ್ಕಮೇಟಿ, ಭೀಮಶಂಕರ್ ಗಜಾನಂದ, ಭಾಗಪ್ಪ, ಶ್ಯಾಮಪ್ಪ, ಸರಿತಾ, ಯಶೋದಾ, ಶ್ರೀದೇವಿ, ಶಭೀರಮ್ಮ, ಅಂಜಲಪ್ಪ, ಗಂಗಿಮಾಳಮ್ಮ, ಲಕ್ಷ್ಮೀ ಕಟ್ಟಿಮನಿ, ಮಮಾದೇವಿ, ಪುಷ್ಪಲತಾ, ಅಂಜಮ್ಮ, ನಾಗಮ್ಮ, ರೇಣುಕಾ, ಜಹಾಂಗಿರಬೇಗಂ, ಪರಿಮಳಾ, ಅರ್ಚನಾ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಪ್ಪಳ | ಜನಪರ ಚಳವಳಿಗಳ ಚೇತನವನ್ನು ನಾವು ಉಳಿಸಿಕೊಂಡಿಲ್ಲ : ಕೆ.ಫಣಿರಾಜ್

ದಶಕಗಳ ಹಿಂದೆ ನಡೆದಿರುವ ಜನಪರ ಚಳವಳಿಗಳ ಚೇತನವನ್ನು ನಾವು ಉಳಿಸಿಕೊಂಡಿಲ್ಲ. ಆದರೆ...

ರಾಯಚೂರು | ಕುರಿಗೆ ನೀರು ಕುಡಿಸಲು ನದಿಗೆ ತೆರಳಿದ್ದ ಬಾಲಕನ್ನು ಹೊತ್ತೊಯ್ದ ಮೊಸಳೆ

ಕೃಷ್ಣ ನದಿಯಲ್ಲಿ ಕುರಿಗಳಿಗೆ ನೀರು ಕುಡಿಸಲು ಹೋಗಿದ್ದ ವೇಳೆ ಬಾಲಕನ ಮೇಲೆ...

ಕೊಪ್ಪಳ | ಬಂಡವಾಳಶಾಹಿಗಳಿಂದ ಭೂಮಿ ಉಳಿಸಬೇಕಿದೆ: ರಾಕೇಶ್ ಟಿಕಾಯತ್

ಉದ್ಯಮಿಗಳಿಗೆ ರೈತರ ಜಮೀನು ಕಡಿಮೆ ದರದಲ್ಲಿ ಖರೀದಿಸಿ ಬಡಜನರ ಹೊಟ್ಟೆಗೆ ಬಟ್ಟೆ...

ಬೆಂಗಳೂರು | ಐಸಿಯುನಲ್ಲಿದ್ದ ರೋಗಿಗೆ ರಕ್ತ ಬರುವ ಹಾಗೆ ಥಳಿಸಿದ ಕೆ.ಸಿ.ಜನರಲ್ ಆಸ್ಪತ್ರೆ ಸಿಬ್ಬಂದಿ

ರಾಜ್ಯ ರಾಜಧಾನಿ ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆಯ ಐಸಿಯುನಲ್ಲಿದ್ದ ರೋಗಿಯೊಬ್ಬರಿಗೆ ಆಸ್ಪತ್ರೆ ಸಿಬ್ಬಂದಿ...