ಹಿನ್ನಡೆ ಹಣೆಪಟ್ಟಿಯಿಂದ ಹೊರಬಂದ ಯಾದಗಿರಿ; ಎಸ್‌ಎಸ್‌ಎಲ್‌ಸಿಯಲ್ಲಿ 33ನೇ ಸ್ಥಾನ

Date:

ರಾಜ್ಯದಲ್ಲಿ ಶೈಕ್ಷಣಿಕವಾಗಿ ಹಿಂದುಳಿದಿದೆ, ಕೊನೆಯ ಸ್ಥಾನದಲ್ಲಿದೆ ಎನ್ನುವ ಹಣೆ ಪಟ್ಟಿ ಅಳಿಸಿ ಹಾಕಿ ಈ ಬಾರಿ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಯಾದಗಿರಿ ಎರಡು ಹೆಜ್ಜೆ ಮುಂದಕ್ಕೆ ಸಾಗಿದೆ.

- Advertisement -

2024-25ನೇ ಶಾಲಿನ ಪಿಯುಸಿ ಫಲಿತಾಂಶದಲ್ಲಿ ರಾಜ್ಯದಲ್ಲಿಯೇ ಕೊನೆಯ ಸ್ಥಾನ ಪಡೆದುಕೊಂಡಿದ್ದ ಯಾದಗಿರಿ ಇದೀಗ 2025ರ ಮೇ 2ರಂದು ಪ್ರಕಟವಾದ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಕೊನೆಯ ಸ್ಥಾನದಿಂದ ಎರಡು ಹೆಜ್ಜೆ ಮುಂದಕ್ಕೆ ಜಿಗಿದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಜಿಲ್ಲೆಯ ನೀಷ್ಟಾ ಚನ್ನರಾಜು ಹಾಗೂ ವರುಣ ದರಬಾರಿ 625ಕ್ಕೆ 622 ಅಂಕ ಪಡೆದು ಜಿಲ್ಲೆಗೆ ಪ್ರಥಮ ರಾಜ್ಯಕ್ಕೆ ನಾಲ್ಕನೆ ಸ್ಥಾನ ಪಡೆದುಕೊಂಡು ಜಿಲ್ಲೆಯ ಕೀರ್ತಿ ಹೆಚ್ಚಿಸಿದ್ದಾರೆ.

ಈ ಬಾರಿ ಜಿಲ್ಲೆಯಲ್ಲಿ 7,214 ವಿದ್ಯಾರ್ಥಿಗಳು ಹಾಗೂ 7,822 ವಿದ್ಯಾರ್ಥಿನಿಯರು ಸೇರಿ ಒಟ್ಟು 15,036 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಈ ಪೈಕಿ 3,138 ವಿದ್ಯಾರ್ಥಿಗಳು ಹಾಗೂ 4,621 ವಿದ್ಯಾರ್ಥಿನಿಯರು ಸೇರಿ ಒಟ್ಟು 7,759 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಈ ಮೂಲಕ ಜಿಲ್ಲೆಗೆ ಶೇ.51.60 ಫಲಿತಾಂಶ ಲಭಿಸಿದೆ. ಅದರಲ್ಲಿ ವಿದ್ಯಾರ್ಥಿಗಳು 43.50%, ವಿದ್ಯಾರ್ಥಿನಿಯರು 59.08% ಪಡೆದು ಎಂದಿನಂತೆ ಹೆಣ್ಣು ಮಕ್ಕಳೇ ಮೇಲುಗೈ ಸಾಧಿಸಿದ್ದಾರೆ.

ಜಿಲ್ಲೆಯಲ್ಲಿ ಪರೀಕ್ಷೆ ಬರೆದ ಒಟ್ಟು 10,539 ಸರ್ಕಾರಿ ವಿದ್ಯಾರ್ಥಿಗಳ ಪೈಕಿ 5132 ವಿದ್ಯಾರ್ಥಿಗಳು ಪಾಸಾಗಿದ್ದಾರೆ (48.70%). 1,099 ಅನುದಾನಿತ ಶಾಲೆ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 428 ಮಂದಿ ಪಾಸಾಗಿದ್ದಾರೆ(38.94). ಅನುದಾನ ರಹಿದ ಶಾಲೆಯ ಒಟ್ಟು 3,398 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಅದರಲ್ಲಿ 2,199 ವಿದ್ಯಾರ್ಥಿಗಳು ಪಾಸಾಗಿದ್ದು, ಶೇ.64.71 ಫಲಿತಾಂಶ ದೊರಕಿದೆ. ಹಾಗಾಗಿ ಒಟ್ಟು ಜಿಲ್ಲೆಗೆ 51.60% ಫಲಿತಾಂಶ ಲಭಿಸಿದೆ.

ಗ್ರಾಮೀಣ ಭಾಗದ ಫಲಿತಾಂಶ ಮಾಹಿತಿ:
5036 ವಿದ್ಯಾರ್ಥಿಗಳು ಹಾಗೂ 5309 ವಿದ್ಯಾರ್ಥಿನಿಯರು ಸೇರಿ ಒಟ್ಟು ‌10,345 ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಈ ಪೈಕಿ 2125 ವಿದ್ಯಾರ್ಥಿಗಳು, 3060 ವಿದ್ಯಾರ್ಥಿನಿಯರು ಸೇರಿ ಒಟ್ಟು 5,185 ವಿದ್ಯಾರ್ಥಿಗಳು ಪಾಸಾಗಿದ್ದು, ಶೇ. ಗ್ರಾಮೀಣ ಪ್ರದೇಶದಲ್ಲಿ ಪಾಸಾದ ವಿದ್ಯಾರ್ಥಿಗಳು ಸಂಖ್ಯೆ ಶೇ. 42.20% ಗಂಡು ಮಕ್ಕಳು, ಶೇ.57.64% ಹೆಣ್ಣು ಮಕ್ಕಳು ಪಾಸಾಗಿದ್ದು, ಗ್ರಾಮೀಣ ಪ್ರದೇಶದಲ್ಲಿ ಒಟ್ಟು ಶೇ 50.12 ಫಲಿತಾಂಶ ದೊರಕಿದೆ.

ಇದನ್ನೂ ಓದಿ: ಯಾದಗಿರಿ | ‘ಲುಂಬಿನಿ ವನ’ ಉದ್ಯಾನವನಕ್ಕಿಲ್ಲ ನಿರ್ವಹಣೆ ಭಾಗ್ಯ; ಆಡಳಿತದ ವಿರುದ್ಧ ಜನರ ಆಕ್ರೋಶ

ನಗರ ಪ್ರದೇಶದ ಫಲಿತಾಂಶ ಮಾಹಿತಿ:
ಇನ್ನು ನಗರ ಪ್ರದೇಶದಲ್ಲಿ 2,178 ವಿದ್ಯಾರ್ಥಿಗಳು, 2513 ವಿದ್ಯಾರ್ಥಿನಿಯರು ಸೇರಿ ಒಟ್ಟು 4691 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಈಪೈಕಿ 1,013 ವಿದ್ಯಾರ್ಥಿಗಳು, 1,561 ವಿದ್ಯಾರ್ಥಿನಿಯರು ಸೇರಿ ನಗರ ಪ್ರದೇಶದಲ್ಲಿ ಪಾಸಾದವರ ಒಟ್ಟು ಸಂಖ್ಯೆ 2,574 ಇದೆ. ಇದರಿಂದ ಶೇ. 46.51 ಫಲಿತಾಂಶ ಬಂದಿದೆ.

ಉಳಿದಂತೆ ಮಾತೃಭಾಷೆ ಕನ್ನಡದಲ್ಲಿ 11207, ದ್ವಿತೀಯ ಭಾಷೆ ಇಂಗ್ಲಿಷ್‌ನಲ್ಲಿ 9,502, ತೃತೀಯ ಭಾಷೆ ಹಿಂದಿಯಲ್ಲಿ 10219, ಗಣಿತದಲ್ಲಿ 9,368, ವಿಜ್ಞಾನ ವಿಷಯದಲ್ಲಿ 10397, ಸಮಾಜ ವಿಜ್ಞಾನ ವಿಷಯದಲ್ಲಿ 1,0397 ಮಂದಿ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.

ಒಟ್ಟು 6 ಖಾಸಗಿ ಶಾಲೆಗಳು ಶೇ.100 ರಷ್ಟು ಫಲಿತಾಂಶ ಪಡೆದಿವೆ. ಜಿಲ್ಲೆಯ ಶಹಾಪೂರ ತಾಲೂಕಿನ ಒಂದು ಅನುದಾನರಹಿತ ಶಾಲೆ, ಸುರಪುರ ತಾಲೂಕಿನ ಒಂದು ಅನುದಾನರಹಿತ ಶಾಲೆ ಸೇರಿದಂತೆ ಎರಡು ಅನುದಾನರಹಿತ ಶಾಲೆಗಳು ಶೂನ್ಯ ಫಲಿತಾಂಶ ಪಡೆದುಕೊಂಡು ಕಳಪೆ ಪ್ರದರ್ಶನ ತೋರಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...