ಯಾದಗಿರಿಯ ಯರಗೋಳ ಗ್ರಾಮದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಹಿರಿಯ ಉಪನ್ಯಾಸಕ ಬಿಸ್ಲಪ್ಪ ಕಟ್ಟಿಮನಿಯವರಿಗೆ ಬೀಳ್ಕೊಡುಗೆ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.
ಸಮಾರಂಭದಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ರುದ್ರಗೌಡ ಪೊಲೀಸ್ ಪಾಟೀಲ ಮಾತನಾಡಿ, “ವಿದ್ಯಾರ್ಥಿಗಳು ಉನ್ನತ ಸ್ಥಾನ ಪಡೆದರೆ ಅದೇ ಶಿಕ್ಷಕರಿಗೆ ಸನ್ಮಾನ” ಎಂದರು.
ಜಿಲ್ಲಾ ಪಂಚಾಯಿತಿ ಲೆಕ್ಕ ಪರಿಶೋಧನಾ ಅಧಿಕಾರಿ ವೆಂಕಟೇಶ ಬಿ.ಚಟ್ನಳ್ಳಿ ಮಾತನಾಡಿ, “ಶಿಕ್ಷಣದಿಂದ ಮಾತ್ರ ಸಾಮಾಜಿಕ ಸ್ಥಾನಮಾನ ಪಡೆಯಲು ಸಾಧ್ಯ” ಎಂದರು.

ಸನ್ಮಾನ ಸ್ವೀಕರಿಸಿದ ಸಮಾಜ ವಿಜ್ಞಾನ ಹಿರಿಯ ಉಪನ್ಯಾಸಕ ಬಿಸ್ಲಪ್ಪ ಕಟ್ಟಿಮನಿ ಮಾತನಾಡಿ, “ವಿದ್ಯಾರ್ಥಿ ಜೀವನದಲ್ಲಿ ಪಡೆಯುವ ಜ್ಞಾನವೇ ಭವಿಷ್ಯದ ದಾರಿದೀಪವಾಗುತ್ತದೆ” ಎಂದು ತಿಳಿಸಿದರು.
ಇದನ್ನು ಓದಿದ್ದೀರಾ? ಮುಡಾ ಪ್ರಕರಣ | ಸಿಎಂ ಸಿದ್ದರಾಮಯ್ಯ ಅರ್ಜಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್
ಪ್ರಾಂಶುಪಾಲ ರವೀಂದ್ರ ಗುತ್ತೇದಾರ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕರಾದ ಸಾಮುವೆಲ್ ಕನ್ನಡಿ, ಸಾಬಯ್ಯ ಕವಾಲ್ದಾರ್, ಪ್ರೌಢಶಾಲೆ ಮುಖ್ಯಶಿಕ್ಷಕ ಚಂದ್ರಪ್ಪ ಗುಂಜನೂರ, ಪತ್ರಕರ್ತ ವಿಶ್ವರಾಧ್ಯ ಎಸ್.ಹಂಗನಳ್ಳಿ, ಸಮುದಾಯ ಆರೋಗ್ಯ ಅಧಿಕಾರಿ ಐರಿನ್ ಕಣೇಕಲ್, ಕಾರ್ಯಕ್ರಮ ಸಂಯೋಜಕರಾದ ಮಲ್ಲಿಕಾರ್ಜುನ ಕೊಂಬೆನೋರ, ಮಲ್ಲಿಕಾರ್ಜುನ ಕುಂಬಾರಹಳ್ಳಿ ಉಪಸ್ಥಿತರಿದ್ದರು.
ಮಂಜುನಾಥ ಪ್ರಾಸ್ತಾವಿಕವಾಗಿ ಮಾತನಾಡಿದರು. ಗಂಗಮ್ಮ ಹಾಗೂ ಸಂಗಡಿಗರು ಪ್ರಾರ್ಥಿಸಿದರು. ಶೋಭಾ ಸ್ವಾಗತಿಸಿದರು. ರೇಣುಕಾ ಎಂ.ಕುಂಬಾರಹಳ್ಳಿ ನಿರೂಪಿಸಿದರು.
