ಯಾದಗಿರಿ | ಕೊಡಲಿಯಿಂದ ಕೊಚ್ಚಿ ಇಬ್ಬರು ಮಕ್ಕಳನ್ನು ಕೊಲೆಗೈದ ತಂದೆ!

Date:

Advertisements

ಯಾದಗಿರಿ ತಾಲ್ಲೂಕಿನ ಹತ್ತಿಕುಣಿ ಸಮೀಪದ ದುಗನೂರ್ ಹಟ್ಟಿಯಲ್ಲಿ ಗುರುವಾರ ಬೆಳಿಗ್ಗೆ ಇಬ್ಬರು ಮಕ್ಕಳನ್ನು ತಂದೆಯೇ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಭೀಭತ್ಸ ಘಟನೆ ನಡೆದಿದೆ.

ಹಲ್ಲೆಯಿಂದಾಗಿ ಸಾನ್ವಿ (5) ಮತ್ತು ಭಾರ್ಗವ್ (3) ಮೃತಪಟ್ಟಿದ್ದಾರೆ. ಮತ್ತೊಬ್ಬ ಮಗ ಹೇಮಂತ್ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಕೊಲೆಗೈದ ಶರಣಪ್ಪ ಹಣಮಂತ ಪರಾರಿಯಾಗಿದ್ದಾನೆ ಎನ್ನಲಾಗಿದೆ.

ಶರಣಪ್ಪ ದಂಪತಿ ನಡುವೆ ಆಗಾಗ ಗಲಾಟೆ ಆಗುತ್ತಿತ್ತು. ಬುಧವಾರ ರಾತ್ರಿಯೂ ಜಗಳ ನಡೆದಿದ್ದು, ಕೋಪಗೊಂಡಿದ್ದ ಶರಣಪ್ಪ ಮಲಗಿದ್ದ ಮಕ್ಕಳ ಮೇಲೆ ಕೊಡಲಿಯಿಂದ ಹಲ್ಲೆ ಮಾಡಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಮಕ್ಕಳು ಮನೆಯಲ್ಲಿ ಸಾವನ್ನಪ್ಪಿದ್ದಾರೆ. ಮತ್ತೊಬ್ಬ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಹೇಳಿದ್ದಾರೆ. ಸ್ಥಳಕ್ಕೆ ಯಾದಗಿರಿ ಗ್ರಾಮೀಣ ಠಾಣೆಯ ಪಿಎಸ್‌ಐ ಹನುಮಂತ ಭಂಕಲಗಿ ಅವರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.

ತನ್ನ ಪತ್ನಿಯ ಶೀಲ ಶಂಕಿಸಿ ಆಗಾಗ್ಗೆ ಜಗಳ ತೆಗೆಯುತ್ತಿದ್ದ ಶರಣಪ್ಪ, ಮೂವರು ಮಕ್ಕಳು ತನ್ನವರಲ್ಲ ಎಂದು ವಾದಿಸುತ್ತಿದ್ದ. ಇದರಿಂದ ಬೇಸತ್ತ ಪತ್ನಿಯು ಒಂದೂವರೆ ವರ್ಷ ತವರು ಮನೆಯಲ್ಲಿ ಇದ್ದರು. 15 ದಿನಗಳ ಹಿಂದೆಯಷ್ಟೇ ಗಂಡನ ಮನೆಗೆ ಬಂದಿದ್ದರು. ಇಬ್ಬರು ಮಕ್ಕಳನ್ನು ಕೊಲೆ ಮಾಡಿ, ಬಳಿಕ ಸಮೀಪದ ಬೆಟ್ಟದಲ್ಲಿ ಅವಿತುಕೊಂಡಿದ್ದಾನೆ. ಆತನ ಪತ್ತೆಗೆ ಪೊಲೀಸ್ ತಂಡ ರಚಿಸಲಾಗಿದೆ ಎಂದು ತಿಳಿದು ಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

NCRB report-2023 | ಹಲವು ಅಪರಾಧ ಕೃತ್ಯಗಳಲ್ಲಿ ಕರ್ನಾಟಕಕ್ಕೆ ಕುಖ್ಯಾತಿ

ಭಾರತದ ವಿವಿಧ ರಾಜ್ಯಗಳಲ್ಲಿ 2023ರಲ್ಲಿ ನಾನಾ ರೀತಿಯಲ್ಲಿ ನಡೆದಿರುವ ದಾಖಲಿತ ಅಪರಾಧ...

ಸಮಾಜದ ಅಸಮಾನತೆ ಹೋಗಲಾಡಿಸಲು ಸಮೀಕ್ಷೆ ಅಗತ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಮಾಜದಲ್ಲಿ ಅಸಮಾನತೆಯಿದ್ದು, ಅದನ್ನು ಹೋಗಲಾಡಿಸಲು ಸಮೀಕ್ಷೆಯ ಅಂಕಿಅಂಶಗಳು ಅವಶ್ಯಕ. ಯಾವ ಜಾತಿಯ...

‘ಬುಕ್‌ ಆಫ್‌ ರೆಕಾರ್ಡ್‌’ | ಶಕ್ತಿ ಪ್ರದರ್ಶಿಸಿದ ‘ಶಕ್ತಿ ಯೋಜನೆ’!

ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿಗಳು ರಾಜ್ಯದ ಜನರನ್ನು ಸೋಂಬೇರಿಗಳ್ಳಾನ್ನಾಗಿ...

ಶಿವಮೊಗ್ಗ | ಪಾಲಿಕೆಗೆ 19 ಗ್ರಾಮಗಳ ಸೇರ್ಪಡೆಗೆ ಸಿದ್ಧತೆ

ಶಿವಮೊಗ್ಗ, ನಿರೀಕ್ಷೆಯಂತೆಯೇ ತುಮಕೂರು ಮತ್ತು ಶಿವಮೊಗ್ಗ ನಗರ ಪಾಲಿಕೆಗಳ ವ್ಯಾಪ್ತಿ ವಿಸ್ತರಣೆಗೆ...

Download Eedina App Android / iOS

X