ಯಾದಗಿರಿ | ಪಿಡಿಒ ಮೇಲೆ ಖಾರದ ಪುಡಿ ಎರಚಿ, ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ!

Date:

ಗ್ರಾಮಸಭೆಗೆ ತೆರಳುತ್ತಿದ್ದ ಪಿಡಿಒ ಮೇಲೆ ಗ್ರಾಮ ಪಂಚಾಯಿತಿ ಸದಸ್ಯೆ ಹಾಗೂ ಅವರ ತಮ್ಮನೊಬ್ಬ ಸೇರಿಕೊಂಡು ಕಣ್ಣಿಗೆ ಖಾರದ ಪುಡಿ ಎರಚಿ, ಚಪ್ಪಲಿಯಿಂದ ಹೊಡೆದಿದ್ದಾರೆ ಎಂದು ಶನಿವಾರ‌ (ಮೇ 3) ತಾಲ್ಲೂಕಿನ ದೋರನಹಳ್ಳಿ ಗ್ರಾಮದಲ್ಲಿ ಆರೋಪಿಸಲಾಗಿದೆ.

- Advertisement -

ದೋರನಹಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ದೇವರಾಜ ರಂಗಪ್ಪ ಚಲವಾದಿ ಹಲ್ಲೆಗೆ ಒಳಗಾದವರು. ಗ್ರಾಮ ಪಂಚಾಯಿತಿ ಸದಸ್ಯೆ ತಾಯಮ್ಮ ಶ್ರೀಕಾಂತ ತೆಗನೂರ ಹಾಗೂ ಆಕೆಯ ತಮ್ಮ ಮಂಜುನಾಥ ಬಸಪ್ಪ ಅನ್ವರ ಹಲ್ಲೆ ಮಾಡಿದವರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ದೋರನಹಳ್ಳಿ ಗ್ರಾಮದಲ್ಲಿ ಗ್ರಾಮಸಭೆ ಇರುವ ಕಾರಣ ಶನಿವಾರ ಪಿಡಿಒ ಹಾಗೂ ಪಂಪ್‌ ಅಪರೇಟರ್ ಭೀಮರಾಯ ಕಂಬಾರ ಅವರೊಂದಿಗೆ ಸ್ಕೂಟಿಯಲ್ಲಿ ತೆರಳುತ್ತಿದ್ದರು. ಅದೇ ಸಮಯಕ್ಕೆ ಸದಸ್ಯೆ ತಾಯಮ್ಮ ಹಾಗೂ ಮಂಜುನಾಥ ಬಂದಿದ್ದಾರೆ. ಗ್ರಾಮಸಭೆ ಬಗ್ಗೆ ನಮಗೆ ಯಾಕೆ ಮಾಹಿತಿ ನೀಡಿಲ್ಲ ಎಂದು ಸದಸ್ಯೆ ತಾಯಮ್ಮ ಅವರು ಪಿಡಿಒ ಕಣ್ಣಿಗೆ ಖಾರದ ಪುಡಿ ಎರಚಿ, ಚಪ್ಪಲಿ ತೆಗೆದುಕೊಂಡು ಮುಖಕ್ಕೆ ಬೆನ್ನಿಗೆ ಹೊಡೆದು ಗಾಯಗೊಳಿಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆಂದು ಆರೋಪಿಸಿ ಪಿಡಿಒ ಇಬ್ಬರ ವಿರುದ್ಧ ಶಹಾಪುರ ಠಾಣೆಯಲ್ಲಿ ಶನಿವಾರ ದೂರು ದಾಖಲಿಸಿದ್ದಾರೆ.

ಪ್ರತಿದೂರು ದಾಖಲು:

ವಾರ್ಡ್‌ ಸಭೆ ಮಾಡದೇ, ಊರಲ್ಲಿ ಡಂಗೂರ ಸಾರಿ ಹೇಳದೇ ಊರ ಹೊರಗಡೆಯ ದೇವಸ್ಥಾನ ಬಳಿ ಗ್ರಾಮಸಭೆ ಏಕೆ ಮಾಡುತ್ತೀರಿ ಎಂದು ಕೇಳಿದಕ್ಕೆ ಪಿಡಿಒ ದೇವರಾಜ ಹಾಗೂ ಇತರ ಏಳು ಜನ ಸೇರಿಕೊಂಡು ತಮಗೆ ಅವಾಚ್ಯ ಶಬ್ದಗಳಿಂದ ಬೈದು, ಜಾತಿನಿಂದನೆ ಹಾಗೂ ಅಪಮಾನ ಮಾಡಿದ್ದಾರೆ ಎಂದು ಗ್ರಾಮ ಪಂಚಾಯಿತಿ ಸದಸ್ಯೆ ತಾಯಮ್ಮ ತೆಗನೂರ, ಮಂಜುನಾಥ ಬಸಪ್ಪ ಅನ್ವರ್‌ ಅವರು ಶಹಾಪುರ ಠಾಣೆಯಲ್ಲಿ ಪ್ರತಿದೂರು ನೀಡಿದ್ದಾರೆ.

ಅಧ್ಯಕ್ಷೆ ಚಂದ್ರಾವತಿ ದೊರೆ, ಉಪಾಧ್ಯಕ್ಷ ಈರಣ್ಣ ಕಸನ್, ಆರಿಫ್ ಮಠ, ಮಹಾಂತಗೌಡ ನಂದಿಕೋಲ, ವಿಜಯಕುಮಾರ ಮಲಗೊಂಡ, ಮಂಜುನಾಥ ದೊರೆ ಹಾಗೂ ಸಿದ್ದಣ್ಣ ದೇಸಾಯಿ ವಿರುದ್ಧವೂ ದೂರು ದಾಖಲಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕಲ್ಯಾಣ ಕರ್ನಾಟಕದಲ್ಲಿ 21,381 ಶಿಕ್ಷಕರ ಹುದ್ದೆ ಖಾಲಿ : ಎಸ್ಸೆಸ್ಸೆಲ್ಸಿ ಫಲಿತಾಂಶ ಕುಸಿತಕ್ಕೆ ಕಾರಣಗಳೇನು?

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....