ಯಾದಗಿರಿ | ಹಾಸ್ಟೆಲ್ ಹೊರಗುತ್ತಿಗೆ ನೌಕರರಿಗೆ ಬಾಕಿ ವೇತನ ಪಾವತಿಸಲು ಒತ್ತಾಯಿಸಿ ಪ್ರತಿಭಟನೆ

Date:

Advertisements

ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ ಹೊರಗುತ್ತಿಗೆ ನೌಕರರಿಗೆ ಬಾಕಿ ಇರುವ ವೇತನ ಪಾವತಿಸಲು ಒತ್ತಾಯಿಸಿ ಎಐಯುಟಿಯುಸಿ ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ವಸತಿನಿಲಯ ಕಾರ್ಮಿಕರ ಸಂಘ (ರಿ) ದಿಂದ ಯಾದಗಿರಿ ಜಿಲ್ಲಾ ಪಂಚಾಯತ್ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಪತ್ರ ಸಲ್ಲಿಸಲಾಯಿತು.

ಮನವಿ ಪತ್ರ ಸಲ್ಲಿಸಿ ಜಿಲ್ಲಾ ಕಾರ್ಯದರ್ಶಿ ರಾಮಲಿಂಗಪ್ಪ ಬಿ.ಎನ್ ಮಾತನಾಡಿ, “ಕಳೆದ ಸೆಪ್ಟೆಂಬರ್ ತಿಂಗಳ 30ನೇ ತಾರೀಖಿನಂದು ಸಂಘದಿಂದ ಪತ್ರ ಸಲ್ಲಿಸಿ ಬಾಕಿ ವೇತನ ಪಾವತಿ ಮಾಡಲು ಕೋರಿದ್ದರಿಂದ ಕಾಲೇಜ್ ಹಾಸ್ಟೆಲ್ ಕಾರ್ಮಿಕರಿಗೆ ಕೇವಲ 1 ತಿಂಗಳ ವೇತನ ಪಾವತಿ ಮಾಡಿದ್ದಾರೆ. ಇನ್ನುಳಿದ ಬಾಕಿ ವೇತನ ಪಾವತಿಸಲು ಪುನಃ ಕೋರಲಾಗಿದೆ. ಆದರೆ ವೇತನ ಪಾವತಿ ಮಾಡಲಿಲ್ಲ” ಎಂದು ಕಿಡಿಕಾರಿದರು.

“ಕಾರ್ಮಿಕರು ಮಹತ್ವದ ಸೇವೆ ಸಲ್ಲಿಸುತ್ತಾ ಬರುತ್ತಿದ್ದಾರೆ. ಪ್ರತಿ ತಿಂಗಳು 5ನೇ ತಾರೀಖಿನ ಒಳಗಾಗಿ ವೇತನ ಪಾವತಿಸುವಂತೆ ಇಲಾಖೆಯ ಆದೇಶವಿದ್ದರೂ ಸಮಯಕ್ಕೆ ಸರಿಯಾಗಿ ವೇತನ ಪಾವತಿಯಾಗುತ್ತಿಲ್ಲ. ಮೂರ್ನಾಲ್ಕು ತಿಂಗಳ ವೇತನ ಬಾಕಿ ಉಳಿಸಿಕೊಳ್ಳಲಾಗುತ್ತಿದೆ. ಕಾರ್ಮಿಕರು ದಿನ ನಿತ್ಯ ಹಾಸ್ಟೆಲ್ ಕೆಲಸಕ್ಕೆ ಹೋಗಿ ಬರಲು ಸಹ ಸಾಲದ ಮೊರೆ ಹೋಗುವ ಸ್ಥಿತಿ ನಿರ್ಮಾಣವಾಗಿದೆ. ಬೆಲೆ ಏರಿಕೆಯಂತಹ ಇಂತಹ ದಿನಗಳಲ್ಲಿ ದುಡಿದ ಹಣ ಕೈಗೆ ಸಿಗದೆ ಕಾರ್ಮಿಕರು ತಮ್ಮ ಜೀವನ ನಡೆಸಲು ಹೆಣಗಾಡುವಂತೆ ಆಗಿದೆ” ಎಂದು‌ ನೋವು ತೋಡಿಕೊಂಡರು.

Advertisements
1002066742

“ಸಕಾಲದಲ್ಲಿ ವೇತನ ಪಾವತಿಸಿ ಕಾರ್ಮಿಕರ ಸೇವೆಯನ್ನು ಗೌರವಿಸಬೇಕಾದ ಇಲಾಖೆ ತನ್ನ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸುತ್ತಿಲ್ಲ. ಮತ್ತೊಂದೆಡೆ ಕಾರ್ಮಿಕರಿಗೆ ಸಿಗಬೇಕಾದ ಶಾಸನಬದ್ಧ ಸೌಕರ್ಯಗಳು ಸಹ ಲಭಿಸುತ್ತಿಲ್ಲ. ಹಾಗಾಗಿ ಬಾಕಿ ವೇತನ ಕೂಡಲೇ ಪಾವತಿ ಮಾಡಿ ಮತ್ತು ಸೇವೆಯಿಂದ ನೋಟಿಸ್ ನೀಡದೆ ವಜಾ ಮಾಡಿರುವ ಕಾರ್ಮಿಕರನ್ನು ಪುನಃ ಸೇವೆಗೆ ನಿಯೋಜಿಸಿಕೊಳ್ಳಿ” ಎಂದು ಪಟ್ಟು ಹಿಡಿದು ಒತ್ತಾಯಿಸಲಾಯಿತು.

ಪ್ರತಿಭಟನಾ ಸ್ಥಳಕ್ಕೆ ಧಾವಿಸಿದ ಬಂದ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು, ಸಹಾಯಕ ನಿರ್ದೇಶಕರು ಆಗಮಿಸಿ ನಿರಂತರವಾಗಿ ಚರ್ಚಿಸಿ, ಆದಷ್ಟು ಶೀಘ್ರವಾಗಿ ವೇತನ ಪಾವತಿ ಮಾಡುವ ಭರವಸೆ ನೀಡಿದರು. ಇನ್ನುಳಿದ ಸಮಸ್ಯೆಗಳ ಕುರಿತು ಎರಡು ದಿನದಲ್ಲಿ ಸಭೆ ಕರೆದು ಚರ್ಚೆ ಮಾಡಿ ಸಮಸ್ಯೆಗಳನ್ನು ಪರಿಹರಿಸುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಸಂಘದ ಜಿಲ್ಲಾ ಅಧ್ಯಕ್ಷ ಶರಣಪ್ಪ ಜಿ ತೆಳಿಗೇರಿಕರ್, ಮುಖಂಡರಾದ ಭೀಮಾಶಂಕರ ನಾಯ್ಕಲ್, ಶ್ರೀಕಾಂತ್ ಚಿಕ್ಕಮೇಟಿ, ಗಜಾನಂದ, ಆನಂದಪ್ಪ, ನರಸಪ್ಪ, ಸಿದ್ದಪ್ಪ, ಜಗದೇವಿ, ಶ್ರೀದೇವಿ, ಮಮ್ಮಾದೇವಿ, ಆಶಮ್ಮ, ಲಕ್ಷ್ಮೀ ಸೇರಿದಂತೆ ಅನೇಕ ಹಾಸ್ಟೆಲ್ ಹೊರಗುತ್ತಿಗೆ ನೌಕರರು ಉಪಸ್ಥಿತರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X