ಯಾದಗಿರಿ | ಗ್ಯಾರಂಟಿ ಯೋಜನೆಗಳಿಗೆ ಎಸ್‌ಸಿ/ಎಸ್‌ಟಿ ಅನುದಾನ ಬಳಸದಂತೆ ಒತ್ತಾಯ

Date:

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅನುದಾನವನ್ನು ದುರ್ಬಳಕೆ ಮಾಡುತ್ತಿರುವ ಸರ್ಕಾರದ ನಡೆ ಖಂಡನೀಯ. ಯಾವುದೇ ಕಾರಣಕ್ಕೂ ಎಸ್‌ಸಿ.ಎಸ್‌ಟಿ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಬಾರದು ಎಂದು ಭೀಮ್ ಆರ್ಮಿ ಆಗ್ರಹಿಸಿದೆ.

- Advertisement -

ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಪ್ರತಿಭಟನೆ ನಡೆಸಿದ ಸಂಘಟನೆಯ ಕಾರ್ಯಕರ್ತರು ತಹಶೀಲ್ದಾರ್‌ಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. “ರಾಜ್ಯ ಕಾಂಗ್ರೆಸ್ ಸರ್ಕಾರ ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ಜನತೆಗೆ ನೀಡಿರುವ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಟಾನಗೊಳಿಸಲು ಎಸ್‌ಸಿ/ಎಸ್‌ಟಿ ಸಮುದಾಯದ ಅಭಿವ್ರದ್ದಿಗಾಗಿ ಮೀಸಲಿರುವ ಗಿರಿಜನ ಉಪಯೋಜನೆಯ ಎಸ್‌ಇಎಸ್‌ಪಿ/ಟಿಎಸ್‌ಪಿ ಅನುದಾನದಲ್ಲಿ 11,000 ಕೋಟಿ ಮೊತ್ತವನ್ನು ಬಳಸಿಕೊಳ್ಳಲು ಮುಂದಾಗಿರುವುದು ದುರಂತ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಕಳೆದ ತಿಂಗಳಲ್ಲಿ ಸರ್ಕಾರವೇ ಎಲ್ಲ ಸಚಿವರ ಸಭೆ ಕರೆದು ಎಸ್‌ಸಿ/ಎಸ್‌ಟಿ ಸಮುದಾಯದ ಅಭಿವ್ರದ್ದಿಗಾಗಿ ಮೀಸಲಿರುವ ಗಿರಿಜನ ಉಪಯೋಜನೆಯ ಎಸ್‌ಇಎಸ್‌ಪಿ/ಟಿಎಸ್‌ಪಿ ಅನುದಾನ ಕೇವಲ ದಲಿತ ಜನಾಂಗದ ಅಭಿವ್ರದ್ದಿಗೆ ಮಾತ್ರ ಮೀಸಲಾಗಬೇಕು. ಬೇರೆ ಯೋಜನೆಗಳಿಗೆ ಬಳಕೆಯಾಗಬಾರದೆಂದು 7ಡಿ ಕಾಯ್ದೆಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ. ಆದರೆ, ಆದೇಶ ಹೊರಡಿಸಿದ ತಿಂಗಳಲ್ಲಿಯೇ ತನ್ನದೇ ಆದೇಶವನ್ನು ಗಾಳಿಗೆ ತೂರಿ ದಲಿತರ ಹಣವನ್ನು ದುರುಪಯೋಗಕ್ಕೆ ಸರ್ಕಾರ ಮುಂದಾಗಿರುವುದು ಸರಿಯಲ್ಲ” ಎಂದು ಕಿಡಿಕಾರಿದ್ದಾರೆ.

“ಕಳೆದ 2018ರಲ್ಲಿಯೂ ಕೂಡಾ ಕಾಂಗ್ರೆಸ್ ರೈತರ ಸಾಲ ಮನ್ನಾ ಮಾಡಲು ಎಸ್‌ಇಎಸ್‌ಪಿ/ಟಿಎಸ್‌ಪಿ ಅನುದಾನದಲ್ಲಿ ಒಟ್ಟು 929.41 ಕೋಟಿ ರೂ. ಬಳಕೆ ಮಾಡಿಕೊಂಡಿದೆ. ಅದಲ್ಲದೇ, ಅದೇ 2018ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ರಾಜ್ಯಕೀಯ ಪರಸ್ಥಿತಿಗಳ ಬಗ್ಗೆ ಮಾಹಿತಿ ಕಲೆ ಹಾಕಲು ಪೂರಕ ಅಂದಾಜಿನಲ್ಲಿ 10 ಕೋಟಿ ಅನುದಾನವನ್ನು ಪೋಲೀಸ್ ಇಲಾಖೆಗೆ ವರ್ಗಾಯಿಸಿ ದಲಿತರ ಮೀಸಲು ಹಣವನ್ನ ದುರ್ಬಳಕೆ ಮಾಡಿಕೊಂಡಿದೆ. ಚುನಾವಣಾ ಕರ್ತವ್ಯಕ್ಕೆ ಪೋಲೀಸರನ್ನು ನಿಯೋಜಿಸುವದಕ್ಕಾಗಿ 10 ಕೋಟಿ ದಲಿತರ ಅನುದಾನವನ್ನು ದುರ್ಬಳಕೆ ಮಾಡಿಕೊಂಡು ದಲಿತರಿಗೆ ವಂಚಿಸಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಕೂಡಲೇ ರಾಜ್ಯ ಸರ್ಕಾರ ದಲಿತರ ಅನುದಾನವನ್ನು ಬೇರೆ ಯೋಜನೆಗಳಿಗೆ ಬಳಸುವದನ್ನು ನಿಲ್ಲಿಸಬೇಕು. ದಲಿತರ ಅಭಿವ್ರದ್ದಿಗೆ ಆಧ್ಯತೆ ನೀಡಬೇಕು. ಇಲ್ಲದೇ ಹೋದಲ್ಲಿ ಸರ್ಕಾರದ ವಿರುದ್ದ ರಾಜ್ಯದಾದ್ಯಂತ ಹೋರಾಟ ಮಾಡಲಾಗುವುದು” ಎಂದು ಎಚ್ಚರಿಕೆ ನೀಡಿದ್ದಾರೆ.

ಪ್ರತಿಭಟನೆಯಲ್ಲಿ ಸಂಘಟನೆಯ ತಾಲೂಕು ಅಧ್ಯಕ್ಷ ಶರಣ್ ಎಸ್ ಗೊಂದನವರ್, ವಿಧ್ಯಾರ್ಥಿ ಘಟಕ ಅಧ್ಯಕ್ಷರು ಮಂಜು ದೊರನಹಳ್ಳಿ, ರಮೇಶ್ ಕೊಂಬಿನ್, ಮೌಲಾಲಿ, ಬಾಬುಸಾಬ, ಬಾಬು ಹೋಟಪೇಟ, ಅಂಬು, ಚಂದ್ರು, ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...