ಯಾದಗಿರಿ | 250 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆ ಪ್ರತಿಷ್ಠಾಪನೆಗೆ ಕರ್ನಾಟಕ ಭೀಮ್ ಸೇನೆ ಆಗ್ರಹ

Date:

ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ 250 ಅಡಿ ಎತ್ತರದ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕ‌ರ್ ಅವರ ಪ್ರತಿಮೆ ಪ್ರತಿಷ್ಠಾಪನೆ ಮಾಡಬೇಕೆಂದು ಒತ್ತಾಯಿಸಿ ಕರ್ನಾಟಕ ಭೀಮ್ ಸೇನೆ ಸಂಘಟನೆ ಆಗ್ರಹಿಸಿದೆ.

- Advertisement -

ಯಾದಗಿರಿ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಂಘಟನೆಯ ಜಿಲ್ಲಾಧ್ಯಕ್ಷ ರಮೇಶ ಕುಮಾರ್‌ ಗೌಡೋರ್‌, “ತೆಲಂಗಾಣ ರಾಜ್ಯದಲ್ಲಿ 125 ಅಡಿ ಎತ್ತರದ ಹಾಗೂ ಆಂಧ್ರಪ್ರದೇಶದಲ್ಲಿ 206 ಅಡಿ ಎತ್ತರದ ಸಂವಿಧಾನ ಶಿಲ್ಪಿ ಅಂಬೇಡ್ಕರವರ ಪ್ರತಿಮೆ ಅನಾವರಣ ಮಾಡಲಾಗಿದೆ. ಅದೇ ರೀತಿ ರಾಜ್ಯದಲ್ಲೂ ಬಾಬಾ ಸಾಹೇಬರ 250 ಅಡಿ ಪ್ರತಿಮೆಯನ್ನು ನಿರ್ಮಾಣ ಮಾಡಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

“ಈ ಹಿಂದೆ ಇದ್ದ ಸರ್ಕಾರದ ದುರಾಡಳಿತದಿಂದ ಬೇಸತ್ತು, ಎಲ್ಲ ಹಿಂದುಳಿದ ಸಮುದಾಯ ಒಂದಾಗಿ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಮಹತ್ವದ ಪಾತ್ರ ವಹಿಸಿವೆ. ಈ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಸಂಘಟನೆಯ ಮನವಿಯನ್ನು ಗಂಭೀರವಾಗಿ ಪರಿಗಣಿಸಬೇಕು. ಇಲ್ಲದಿದ್ದಲ್ಲಿ ಹಿಂದಿನ ಸರ್ಕಾರಕ್ಕೂ ಈಗಿನ ಸರ್ಕಾರದ ಕಾರ್ಯವೈಖರಿಗೂ ಏನೂ ವ್ಯತ್ಯಾಸವಿರುವುದಿಲ್ಲ. 2025-26ನೇ ಸಾಲಿನ ಬಜೆಟ್‌ನಲ್ಲಿ ಬಾಬಾ ಸಾಹೇಬರ ಪ್ರತಿಮೆ ನಿರ್ಮಾಣಕ್ಕೆ ಅನುದಾನ ಘೋಷಿಸಬೇಕೆಂದು” ಕರ್ನಾಟಕ ರಾಜ್ಯದ ಎಲ್ಲ ಕನ್ನಡಿಗರ ಹಾಗೂ ಹಿಂದುಳಿದ ಸಮುದಾಯದ ಪರವಾಗಿ ಭೀಮ್ ಸೇನೆ ಮನವಿ ಮಾಡಿತು.

ಈ ಸುದ್ದಿ ಓದಿದ್ದೀರಾ?: ಯಾದಗಿರಿ | ಬಹುಮತ ಇದ್ದರೂ ಬಿಜೆಪಿಗೆ ಸಿಗದ ಪುರಸಭೆ ಅಧಿಕಾರ; ಅಧ್ಯಕ್ಷ ಸ್ಥಾನ ಗೆದ್ದ ಕಾಂಗ್ರೆಸ್‌

ಈ ವೇಳೆ ಮಹೇಶ ಖಾನಾಪುರ, ಮರಲಿಂಗಪ್ಪ ಚಟ್ನಳ್ಳಿ, ವಾಸುದೇವ್, ರಾಜು ಚಟ್ನಳ್ಳಿ, ಮೌನೇಶ, ಸಾಬಣ್ಣ ಹೊಸಮನಿ, ಹೊನ್ನಪ್ಪ ಖಾನಾಪುರ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...

ಕೋಲಾರ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ವಜಾಕ್ಕೆ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿ...

ಬೆಂಗಳೂರು | ಆನೆ ದಾಳಿಗೆ ವಾಕಿಂಗ್ ತೆರಳಿದ್ದ ವ್ಯಕ್ತಿ ಬಲಿ

ಇಂದು ಮುಂಜಾನೆ ವಾಕಿಂಗ್ ತೆರಳಿದ್ದ ವ್ಯಕ್ತಿಯೊಬ್ಬರು ಆನೆ ದಾಳಿಗೆ ಮೃತಪಟ್ಟಿರುವ ಘಟನೆ...

ಮುಂಡಗೋಡ | ಮೊಬೈಲ್ ಅಂಗಡಿ ಕಳ್ಳತನ: ನಾಲ್ವರು ವಿದ್ಯಾರ್ಥಿಗಳ ಬಂಧನ

ಮೊಬೈಲ್ ಅಂಗಡಿಯ ಬೀಗ ಒಡೆದು ವಿವಿಧ ಎಲೆಕ್ಟ್ರಾನಿಕ್ ವಸ್ತುಗಳನ್ನು ಕಳವು ಮಾಡಿದ...