ಯಾದಗಿರಿ | ಸೋನಮ್ ವಾಂಗ್ಚುಕ್ ಬಂಧನ ಖಂಡಿಸಿ ಕೆವಿಎಸ್ ಆಕ್ರೋಶ; ರಾಷ್ಟ್ರಪತಿ ಮಧ್ಯಪ್ರವೇಶಕ್ಕೆ ಆಗ್ರಹ

Date:

ಶಿಕ್ಷಣ ತಜ್ಞ ಹಾಗೂ ಪರಿಸರವಾದಿ ಸೋನಮ್ ವಾಂಗ್ಚುಕ್ ಅವರ ಬಂಧನ ಮತ್ತು ನೀಟ್ ಪರೀಕ್ಷಾ ಅಕ್ರಮವನ್ನು ವಿರೋಧಿಸಿ ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಹಾಗೂ ಟಿಯರ್ ಗ್ಯಾಸ್ ಪ್ರಯೋಗಿಸಿರುವುದನ್ನು ಖಂಡಿಸಿ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್) ವತಿಯಿಂದ ಮಂಗಳವಾರ ಶಹಾಪುರ ತಹಸೀಲ್ದಾರರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.

- Advertisement -

ಮನವಿ ಸಲ್ಲಿಸಿದ ಬಳಿಕ ಕರ್ನಾಟಕ ವಿದ್ಯಾರ್ಥಿ ಸಂಘ ತಾಲೂಕು ಮುಖಂಡ ಮರಲಿಂಗ ಸಾವೂರ್ ಮಾತನಾಡಿ, ‘ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಿಂದ ದೇಶಾದ್ಯಂತ ವಿದ್ಯಾರ್ಥಿಗಳಲ್ಲಿ ತೀವ್ರ ಆತಂಕ ಉಂಟಾಗಿದ್ದು, ಪರೀಕ್ಷಾ ಅಕ್ರಮಗಳಿಗೆ ಹೊಣೆಗಾರರ ವಿರುದ್ಧ ಕ್ರಮ ಕೈಗೊಳ್ಳುವುದು ಹಾಗೂ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸುವಂತೆ ವಿವಿಧೆಡೆ ಪ್ರತಿಭಟನೆಗಳು ನಡೆಯುತ್ತಿವೆ ಎಂದು ತಿಳಿಸಲಾಗಿದೆ. ಆದರೆ, ಪ್ರತಿಭಟನಾಕಾರರ ಬೇಡಿಕೆಗಳಿಗೆ ಸ್ಪಂದಿಸುವ ಬದಲು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸೋನಮ್ ವಾಂಗ್ಚುಕ್ ಅವರನ್ನು ಬಂಧಿಸಿರುವುದು ಮತ್ತು ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಹಾಗೂ ಟಿಯರ್ ಗ್ಯಾಸ್ ಪ್ರಯೋಗಿಸಿರುವುದು ಪ್ರಜಾಪ್ರಭುತ್ವ ವಿರೋಧಿ ಕ್ರಮವಾಗಿದೆ’ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

‘ರಾಷ್ಟ್ರಪತಿಗಳು ತಕ್ಷಣ ಮಧ್ಯಪ್ರವೇಶಿಸಿ ವಿದ್ಯಾರ್ಥಿಗಳ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಬೇಕು. ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಹಾಗೂ ಟಿಯರ್ ಗ್ಯಾಸ್ ಬಳಸಲು ಆದೇಶ ನೀಡಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ನೀಟ್ ಪರೀಕ್ಷಾ ಪದ್ಧತಿಯನ್ನು ರದ್ದುಗೊಳಿಸಬೇಕು. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು. ಸೋನಮ್ ವಾಂಗ್ಚುಕ್ ಅವರನ್ನು ತಕ್ಷಣ ಬಿಡುಗಡೆಗೊಳಿಸಬೇಕು. ನೀಟ್ ಅಕ್ರಮದಿಂದ ಮೃತಪಟ್ಟ ವಿದ್ಯಾರ್ಥಿಗಳ ಕುಟುಂಬಗಳಿಗೆ ತಲಾ ₹1 ಕೋಟಿ ಪರಿಹಾರ ನೀಡಬೇಕು’ ಎಂದು ಒತ್ತಾಯಿಸಿದರು..

ಇದನ್ನು ಓದಿದ್ದೀರಾ? ಕಲಬುರಗಿ | ನೀಟ್ ಅಕ್ರಮ, ವಿದ್ಯಾರ್ಥಿಗಳ ಮೇಲಿನ ಲಾಠಿ ಚಾರ್ಜ್ ಖಂಡಿಸಿ ರಾಷ್ಟ್ರಪತಿ ಮಧ್ಯಪ್ರವೇಶಕ್ಕೆ ಕೆವಿಎಸ್ ಆಗ್ರಹ

ಈ ಸಂದರ್ಭದಲ್ಲಿ ಲಕ್ಷಣ, ಮರಿಲಿಂಗ ಸಾವೂರ, ಶಿವು ಪೋತೆ ದೋರನಹಳ್ಳಿ, ಅಯ್ಯಪ್ಪ ಗೊಂದೆನೋರ್, ಬಸವರಾಜ್ ಚಿಪ್ಪಾರ್, ವಿಶ್ವ ಬೀರನೂರ್, ಬಸಪ್ಪ ಅನ್ವರ್, ಸಂತೋಷ ಗೋಗಿ ಸೇರಿದಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ ವರದಿ ಬಳಿಕ ಎಚ್ಚೆತ್ತ ಅಧಿಕಾರಿಗಳು

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ...

ಕೋಲಾರ | ಕಳಪೆ ಪಶು ಆಹಾರ ಪೂರೈಕೆ ಆರೋಪ: ಖಾಸಗಿ ಕಂಪನಿ ಪರವಾನಗಿ ರದ್ದತಿಗೆ ನಳಿನಿಗೌಡ ಆಗ್ರಹ

ಕಳಪೆ ಗುಣಮಟ್ಟದ ಪಶು ಆಹಾರ ಪೂರೈಸಿರುವ ಆರೋಪದ ಹಿನ್ನೆಲೆಯಲ್ಲಿ ಎಸ್.ಎಸ್. ಸೂಪರ್...

ಬಾಗಲಕೋಟೆ | ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣಕ್ಕೆ ಸಂಕಲ್ಪ; ಐದು ಲಕ್ಷ ಜನರಿಗೆ ಧಮ್ಮ ದೀಕ್ಷೆ

ಸಂವಿಧಾನ ಆಧಾರಿತ ಪ್ರಬುದ್ಧ ಹಾಗೂ ಸಮಾನತೆಯ ಭಾರತ ನಿರ್ಮಾಣ ಮಾಡುವ ಆಶಯದೊಂದಿಗೆ,...

ಕೋಲಾರ | ಎಸ್‌ಎನ್‌ಆರ್ ಆಸ್ಪತ್ರೆಯಲ್ಲಿ ಅವ್ಯವಸ್ಥೆ ಆರೋಪ: ಕದಸಂಸ ಪ್ರತಿಭಟನೆ

ನಗರದ ಎಸ್‌ಎನ್‌ಆರ್ ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳಿಗೆ ಅಗತ್ಯ ಸೌಲಭ್ಯಗಳು ಸಮರ್ಪಕವಾಗಿ ದೊರೆಯುತ್ತಿಲ್ಲ...