ಜಮೀನಿನಲ್ಲಿ ಕೆಲಸ ಮಾಡುವ ವೇಳೆ ಸಹೋದರರಿಬ್ಬರಿಗೆ ಸಿಡಿಲು ಬಡಿದ ಪರಿಣಾಮ ತಮ್ಮ ಸ್ಥಳದಲ್ಲೇ ಸಾವನ್ನಪ್ಪಿದರೆ, ಗಂಭೀರ ಗಾಯಗೊಂಡ ಅಣ್ಣನನ್ನು ಆಸ್ಪತ್ರೆಗೆ ದಾಖಲಿಸಿದ ದಾರುಣ ಘಟನೆ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಮದಲಿಂಗನಾಳ ಗ್ರಾಮದಲ್ಲಿ ನಡೆದಿದೆ.
ಶುಕ್ರವಾರ ಜಮೀನಿನಲ್ಲಿ ಕೆಲಸ ಮಾಡುವಾಗ ಸಂಜೆ ಘಟನೆ ಜರುಗಿದ್ದು, ಘಟನೆಯಲ್ಲಿ ಪರಮಣ್ಣ(33) ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಸಹೋದರರಿಬ್ಬರು ಹಾಗೂ ಹೆಂಡತಿ ಮಕ್ಕಳು ಎಲ್ಲರೂ ಜಮೀನಿಗೆ ತೆರಳಿದರು. ಗುಡುಗು ಸಹಿತ ಮಳೆ ಬಂದ ಹಿನ್ನೆಲೆ ಮರದ ಕೆಳಗೆ ಕುಳಿತ ವೇಳೆ ಸಿಡಿಲು ಬಡಿದಿದೆ ಎನ್ನಲಾಗಿದೆ.
ವಿಷಯ ತಿಳಿದು ಕಾಂಗ್ರೆಸ್ ಮುಖಂಡ ರವಿಚಂದ್ರ ಆನಂದ ಅವರು ಆಗಮಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಕರೆ ಮಾಡಿ ಮಾಹಿತಿ ತಿಳಿಸಿದರು. ಸ್ಥಳಕ್ಕೆ ಆಗಮಿಸಿ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿಗಳು ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡರು.
ವರದಿ : ಸಿಟಿಜನ್ ಜರ್ನಲಿಸ್ಟ್ ಪರಶುರಾಮ