ಯಾದಗಿರಿ | ಅಕಾಲಿಕ ಮಳೆಯಿಂದ ಅಪಾರ ಬೆಳೆ ಹಾನಿ; ಸಂಕಷ್ಟಕ್ಕೆ ಸಿಲುಕಿದ ರೈತರು

Date:

  • ಆಲಿಕಲ್ಲು ಸಹಿತ ಧಾರಾಕಾರ ಮಳೆಗೆ ತತ್ತರಿಸಿದ ರೈತ
  • ಸೂಕ್ತ ಪರಿಹಾರ ನೀಡುವಂತೆ ರೈತ ಮುಖಂಡರ ಆಗ್ರಹ

ಯಾದಗಿರಿ ಜಿಲ್ಲೆಯ ವಡಿಗೇರಾ ತಾಲೂಕಿನ ತಡಿಬಿಡಿ, ಟೋಕಾಪೂರ್ ಹಾಗೂ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಭಾನುವಾರ ಸುರಿದ ಬಿರುಗಾಳಿ ಸಹಿತ ಆಲಿಕಲ್ಲು ಮಳೆಗೆ ರೈತರು ಬೆಳೆದಿರುವ ಅಪಾರ ಪ್ರಮಾಣದ ಬೆಳೆ ನಾಶವಾಗಿದೆ. ಅಕಾಲಿಕ ಮೆಳೆಯಿಮದ ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ.

ಬೆಳೆ ಹಾನಿಯಾಗಿರುವ ಸ್ಥಳಕ್ಕೆ ಹೋಬಳಿ ಮಟ್ಟದ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಾಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಸ್ಥಳಕ್ಕೆ ಬಾರದೆ ಇರುವುದರಿಂದ ಸಿಟ್ಟಾದ ಗ್ರಾಮಸ್ಥರು ಮತ್ತು ಸಾಮಾಜಿಕ ಹೋರಾಟಗಾರ ಉಮೇಶ್ ಕೆ ಮುದ್ನಾಳ, ಬಂದಿದ್ದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. “ಮೇಲ್ಲಾಧಿಕಾರಿಗಳು ಎಲ್ಲಿದ್ದಾರೆ, ಎಸಿ ರೂಮಿನಲ್ಲಿ ಕುಳಿತುಕೊಂಡು ಸಮಯ ಹಾಳು ಮಾಡುತ್ತಿದ್ದಾರಾ” ಎಂದು ಕಿಡಿಕಾರಿದ್ದಾರೆ.

“ತಾಲೂಕಿನಲ್ಲಿ ಸುರಿದ ಅಕಾಲಿಕ ಮಳೆಗೆ ರೈತರು ಬೆಳೆದ ಟೊಮೆಟೊ, ಹುಲ್ಲಗಡ್ಡಿ, ಸಜ್ಜಿ, ನೀರಜೋಳ ಸೇರಿದಂತೆ ವಿವಿಧ ಬೆಳೆಗಳು ನೆಲ್ಲಕಚ್ಚಿ ಹೋಗಿ ರೈತರ ಕಂಗಾಲಾಗಿದ್ದಾರೆ. ಅಕಾಲಿಕ ಮಳೆಯಿಂದಾಗಿ ಜನ ಮತ್ತು ಜಾನುವಾರುಗಳಿಗೆ ಹಾನಿ ಸಂಭವಿಸಿದೆ” ಎಂದು ಉಮೇಶ್‌ ಮುದ್ನಾಳ ಬೇಸರ ವ್ಯಕ್ತಪಡಿಸಿದರು.

“ಜಿಲ್ಲಾಡಳಿತವು ಕೂಡಲೇ ರೈತರಲ್ಲಿ ಜಾಗೃತಿ ಮೂಡಿಸುಲು ಮುಂದಾಗಬೇಕು. ಜಿಲ್ಲಾಧಿಕಾರಿಗಳು ಮತ್ತು ಉಸ್ತುವಾರಿ ಸಚಿವರು ತಕ್ಷಣ ಅಧಿಕಾರಿಗಳ ಸಭೆ ಕರೆದು ಸಂಪೂರ್ಣ ವರದಿ ತರಿಸಿಕೊಂಡು ರೈತರು ಕಚೇರಿಗೆ ಅಲೆಯದಂತೆ ನೋಡಿಕೊಳ್ಳಬೇಕು. ಯಾವುದೇ ರೀತಿಯ ನಯಾ ಪೈಸೆ ತೆಗೆದುಕೊಳ್ಳದೆ ಅವರಿಗೆ ಸೂಕ್ತವಾಗಿ ಪರಿಹಾರ ನೀಡಬೇಕು” ಎಂದು ಒತ್ತಾಯಿಸಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಕಲಬುರಗಿಯಲ್ಲಿ ರಾಜ್ಯ ಮಟ್ಟದ ವಿದ್ಯಾರ್ಥಿನಿಯರ ಸಮಾವೇಶ

ಶಿಕ್ಷಣದ ಹಕ್ಕಿಗಾಗಿ, ಖಾಸಗೀಕರಣ ವಿರೋಧಿಸಿ ವಿದ್ಯಾರ್ಥಿನಿಯರಿಗೆ ಸಮಾನ ಗುಣಮಟ್ಟದ ಶಿಕ್ಷಣ ಹಾಗೂ...

ರಾಯಚೂರು | ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ದೇವದಾಸಿ ಮಹಿಳೆಯರ ಧರಣಿ

ದೇವದಾಸಿ ಮಹಿಳೆಯರಿಗೆ ಬಾಕಿಯಿರುವ ಪಿಂಚಣಿ ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ...

ಬೆಳಗಾವಿ | ಅಧಿವೇಶನದಲ್ಲಿ ಭಾಗವಹಿಸುವವರಿಗೆ ಮೂಲಸೌಕರ್ಯ ಒದಗಿಸಲು ಜಿಲ್ಲಾಧಿಕಾರಿ ಸೂಚನೆ

ಡಿ.4ರಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ಆರಂಭವಾಗಲಿರುವ ಚಳಿಗಾಲ ಅಧಿವೇಶನದಲ್ಲಿ ಭಾಗವಹಿಸುವವರಿಗೆ ವಸತಿ,...

ಚಿಕ್ಕಮಗಳೂರು | ಠಾಣೆಯಲ್ಲಿ ಕೂಡಿಹಾಕಿ ಯುವ ವಕೀಲನಿಗೆ ಥಳಿತ; ಪಿಎಸ್‌ಐ ಸೇರಿ 6 ಮಂದಿ ಅಮಾನತು

ದ್ವಿಚಕ್ರ ವಾಹನದಲ್ಲಿ ಹೆಲ್ಮೆಟ್ ಧರಿಸದೆ ಬಂದ ಯುವ ವಕೀಲನೋರ್ವನನ್ನು ಠಾಣೆಯಲ್ಲಿ ಕೂಡಿಹಾಕಿ...