ಯಾದಗಿರಿ | ಸಿದ್ದಪ್ಪ ಮಾಸ್ತರ ಹೊಸಮನಿ ಪುಣ್ಯಸ್ಮರಣೆ ಅರ್ಥಪೂರ್ಣ ಆಚರಣೆ; ಶಾಲಾ ಮಕ್ಕಳಿಗೆ ಪ್ಲೇಟ್, ಗ್ಲಾಸ್ ವಿತರಣೆ

Date:

ಶಹಾಪುರ ತಾಲೂಕಿನ ಕನ್ಯಾಕೋಳೂರು ಗ್ರಾಮದ ಲುಂಬಿಣಿ ನಿವಾಸದಲ್ಲಿ ದಿವಂಗತ ಸಿದ್ದಪ್ಪ ಮಾಸ್ತರ ಹೊಸಮನಿ ಅವರ ದ್ವಿತೀಯ ವರ್ಷದ ಪುಣ್ಯಾನುಮೋದನೆ ಕಾರ್ಯಕ್ರಮವನ್ನು ಕುಟುಂಬದ ಸದಸ್ಯರು, ಬಂಧು-ಬಳಗ ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿ ಶುಕ್ರವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು.

- Advertisement -

ಪುಣ್ಯಸ್ಮರಣೆ ಅಂಗವಾಗಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಅಂಬೇಡ್ಕರ್ ನಗರದ ವಿದ್ಯಾರ್ಥಿಗಳಿಗೆ ಅಗತ್ಯವಾದ ಪ್ಲೇಟ್‌ಗಳು ಹಾಗೂ ಗ್ಲಾಸ್‌ಗಳನ್ನು ವಿತರಿಸುವ ಮೂಲಕ ಕಾರ್ಯಕ್ರಮವನ್ನು ಸಮಾಜಮುಖಿಯಾಗಿ ಹಾಗೂ ಅರ್ಥಪೂರ್ಣವಾಗಿ ನಡೆಸಲಾಯಿತು. ಸರ್ವೋದಯ ಟ್ರಸ್ಟ್‌ನ ಸಹಯೋಗದಲ್ಲಿ ನಡೆದ ಈ ಸೇವಾ ಕಾರ್ಯ ಶಾಲಾ ಮಕ್ಕಳಲ್ಲಿ ಸಂತಸ ಮೂಡಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ಕಾರ್ಯಕ್ರಮದಲ್ಲಿ ಮಾತನಾಡಿದ ಸರ್ವೋದಯ ಟ್ರಸ್ಟ್ ಕಾರ್ಯದರ್ಶಿ ಡಾ. ಶ್ರೀಕೃಷ್ಣ ಚಕ್ರವರ್ತಿ, ‘ಆತ್ಮೀಯರ ಸ್ಮರಣಾರ್ಥ ದಿನಗಳನ್ನು ಸಮಾಜೋಪಯೋಗಿ ಕಾರ್ಯಗಳಿಗೆ ಮೀಸಲಿಡುವುದು ಅತ್ಯಂತ ಶ್ಲಾಘನೀಯ ನಡೆ ಎಂದು ಹೇಳಿದರು. ಇಂತಹ ಕಾರ್ಯಕ್ರಮಗಳು ಮಕ್ಕಳಿಗೆ ಅಗತ್ಯ ನೆರವು ಒದಗಿಸುವುದರ ಜೊತೆಗೆ ಸಮಾಜದಲ್ಲಿ ಸೇವಾ ಮನೋಭಾವವನ್ನು ಬೆಳೆಸಲು ಪ್ರೇರಣೆಯಾಗುತ್ತವೆ’ ಎಂದು ಅಭಿಪ್ರಾಯಪಟ್ಟರು.

‘ಶಾಲೆಯ ಮುಖ್ಯಗುರು ಮಲ್ಲಿಕಾರ್ಜುನ ಸಜ್ಜನ್ ಮಾತನಾಡಿ, ಕುಟುಂಬದವರು ತಮ್ಮ ಆತ್ಮೀಯರ ನೆನಪನ್ನು ಸಮಾಜ ಸೇವೆಯ ಮೂಲಕ ಚಿರಸ್ಥಾಯಿಗೊಳಿಸುತ್ತಿರುವುದು ಮಾದರಿಯ ಕೆಲಸವಾಗಿದೆ ಎಂದು ಹೇಳಿದರು. ಮುಂದಿನ ದಿನಗಳಲ್ಲಿಯೂ ಇಂತಹ ಸೇವಾ ಕಾರ್ಯಗಳು ನಿರಂತರವಾಗಿ ನಡೆಯಲಿ ಹಾಗೂ ಸಮಾಜ ಸೇವೆಗೆ ಇನ್ನಷ್ಟು ಶಕ್ತಿ ಮತ್ತು ಪ್ರೋತ್ಸಾಹ ದೊರೆಯಲಿ’ ಎಂದು ಹಾರೈಸಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪ್ಲೇಟ್ ಹಾಗೂ ಗ್ಲಾಸ್‌ಗಳನ್ನು ವಿತರಿಸಿ, ಶಿಕ್ಷಣದ ಜೊತೆಗೆ ಮಕ್ಕಳ ಆರೋಗ್ಯ ಮತ್ತು ಸ್ವಚ್ಛತೆಯತ್ತ ಗಮನ ಹರಿಸುವ ಅಗತ್ಯವನ್ನು ಒತ್ತಿಹೇಳಲಾಯಿತು. ಮಕ್ಕಳು ಉತ್ಸಾಹದಿಂದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಂಭ್ರಮವನ್ನು ಹೆಚ್ಚಿಸಿದರು.

ಕಾರ್ಯಕ್ರಮದ ನಿರೂಪಣೆಯನ್ನು ಮೋಹನಕುಮಾರ್ ಹೊಸಮನಿ ನಿರ್ವಹಿಸಿದರು. ಸುಹಾಸಿನಿ ಹೊಸಮನಿ ಸ್ವಾಗತ ಕೋರಿದರೆ, ಚೆನ್ನಮ್ಮ ಭೂತಾಳಿ ವಂದಿಸಿದರು.

ಇದನ್ನು ಓದಿದ್ದೀರಾ? ಎಸ್‌ಐಆರ್ ವಿರುದ್ಧ ಸಂಘಟನೆಗಳ ಒಗ್ಗಟ್ಟು; ಯಾದಗಿರಿಯಲ್ಲಿ ಜನಜಾಗೃತಿ ಅಭಿಯಾನಕ್ಕೆ ಸಜ್ಜು

ಈ ಸಂದರ್ಭದಲ್ಲಿ ಸಹ ಶಿಕ್ಷಕಿ ಜ್ಯೋತಿ, ಶಾಲೆಯ ಸಿಬ್ಬಂದಿ ವರ್ಗ ಹಾಗೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.
ದಿವಂಗತ ಸಿದ್ದಪ್ಪ ಮಾಸ್ತರ ಹೊಸಮನಿ ಅವರ ಸ್ಮರಣಾರ್ಥ ನಡೆದ ಈ ಪುಣ್ಯಾನುಮೋದನೆ ಕಾರ್ಯಕ್ರಮವು ಕೇವಲ ಸ್ಮರಣಾ ಕಾರ್ಯಕ್ರಮವಾಗಿಯೇ ಉಳಿಯದೇ, ಸಮಾಜ ಸೇವೆಯ ಮೂಲಕ ಅರ್ಥಪೂರ್ಣ ಸಂದೇಶ ಸಾರಿದ ಕಾರ್ಯಕ್ರಮವಾಗಿ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ರಸ್ತೆ ಸಂಪೂರ್ಣ ಹದಗೆಟ್ಟು ಸಂಚಾರ ದುಸ್ತರ: ದುರಸ್ತಿಗೆ ದಲಿತ ಸೇನೆ ಆಗ್ರಹ

ಮಳಖೇಡದಿಂದ ಚಿತ್ತಾಪುರಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಸಂಪೂರ್ಣ ಹದಗೆಟ್ಟು ಸಂಚಾರಕ್ಕೆ...

ಕಲಬುರಗಿ ಜಿಲ್ಲೆಯ 4.77 ಲಕ್ಷ ಮತದಾರರು ಎಲ್ಲಿ ಹೋದರು? ಎಸ್‌ಐಆರ್ ವಿರುದ್ಧ ಸಿಪಿಐ ತೀವ್ರ ಆಕ್ರೋಶ

ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಬಳಿಕ ಲಕ್ಷಾಂತರ ಮತದಾರರ ಹೆಸರುಗಳು...

ಉಡುಪಿ | ಓವರ್‌ಪಾಸ್‌ ಉದ್ಘಾಟನೆಯಾದರೂ ಸರ್ವಿಸ್‌ ರಸ್ತೆಗೆ ಮುಕ್ತಿ ಸಿಕ್ಕಿಲ್ಲ; ಧೂಳಿನಿಂದ ವಾಹನ ಸವಾರರಿಗೆ ಸಂಕಷ್ಟ

ಉಡುಪಿ ನಗರದ ಕರಾವಳಿ ಜಂಕ್ಷನ್‌ನಿಂದ ಕಿನ್ನಿಮೂಲ್ಕಿವರೆಗಿನ ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲಗಳಲ್ಲಿರುವ ಸರ್ವಿಸ್‌...