ಯಾದಗಿರಿ | ಸಿಜೆಐ ಬಿ.ಆರ್.ಗವಾಯಿ ಮೇಲೆ ಶೂ ಎಸೆದ ವಕೀಲನ ವಿರುದ್ಧ ಕ್ರಮಕ್ಕೆ ಎಂಆರ್‌ಎಚ್ಎಸ್ ಆಗ್ರಹ

Date:

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಕೋರ್ಟ್ ಹಾಲ್‌ನಲ್ಲಿ ವಕೀಲ ರಾಕೇಶ್ ಕಿಶೋರ್ ಶೂ ಎಸೆದ ಘಟನೆ ಖಂಡನೀಯ, ತಕ್ಷಣ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಮಾದಿಗ ಮೀಸಲಾತಿ ಹೋರಾಟ ಸಮಿತಿ ವಡಗೇರಾ ತಾಲ್ಲೂಕು ತಹಶೀಲ್ದಾರ್ ಮೂಲಕ ರಾಷ್ಟ್ರಪತಿ ರವರಿಗೆ ಮನವಿ ಸಲ್ಲಿಸಿದರು.

- Advertisement -

ರಾಕೇಶ್ ಕಿಶೋರ್ ಮತ್ತು ಭಾಸ್ಕರ್ ರಾವ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ ಬಂಧಿಸುವಂತೆ, ಹಾಗೂ ವಕೀಲ ರಾಕೇಶ್ ಕಿಶೋರ್ ಅವರನ್ನು ಬಾರ್ ಕೌನ್ಸಿಲ್‌ನಿಂದ ಶಾಶ್ವತ ಅಮಾನತ್ತು ಮಾಡಬೇಕು ಎಂದು ಒತ್ತಾಯಿಸಲಾಗಿದೆ. ಈ ಅವಮಾನ ಬರಿ ಗವಾಯಿ ಅವರಿಗೆ ಮಾತ್ರವಾಗಿಲ್ಲ, ಬದಲಾಗಿ ಇಡೀ ನ್ಯಾಯಾಂಗ ವ್ಯವಸ್ಥೆಗೆ ಮತ್ತು ಡಾ. ಬಿ ಆರ್ ಅಂಬೇಡ್ಕರ್ ಅವರು ಬರೆದ ಸಂವಿಧಾನಕ್ಕೆ ಅವಮಾನವಾಗಿದೆ’ ಎಂದು ಸಮಿತಿಯು ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಉತ್ತರ ಕನ್ನಡದಲ್ಲಿ ಮೃತ್ಯುಕೂಪವಾಗಿರುವ NH-66: RSS ವರ್ತಕರ ಆಟ...

ಉತ್ತರ ಕನ್ನಡದ ಭಟ್ಕಳದಿಂದ ಕಾರವಾರದ ತನಕದ ಸುಮಾರು 160 ಕಿಮೀ ಚತುಷ್ಪಥ ಕಾಮಗಾರಿ ಬರೋಬ್ಬರಿ 12 ವರ್ಷದಿಂದ ತೆವಳುತ್ತಿದೆ. 65 ಮೀಟರ್ ಅಗಲದ ಹೈವೇ 45 ಮೀ.ಗೆ ಕುಗ್ಗಿದೆ. ಸಂಚಾರ ಇಕ್ಕಟ್ಟಾಗಿ 27...

ಬಿಡಿಗಾಸು ಬರ ಪರಿಹಾರ! ಹಿಂಗಾರು ಬಿತ್ತನೆಗೆ ಸಾಲದ ಮೊರೆ...

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟ ಅನುಭವಿಸಿರುವ ಬೆಳಗಾವಿಯ ರೈತರು ಇದೀಗ ಹಿಂಗಾರು ಬಿತ್ತನೆಯ ಸಿದ್ಧತೆಯಲ್ಲಿದ್ದಾರೆ. ಆದರೆ ಕೈಯಲ್ಲಿ ಹಣವಿಲ್ಲದ ಕಾರಣ ಬಿತ್ತನೆಗೆ ಅಗತ್ಯವಾದ ಬೀಜ, ಗೊಬ್ಬರ, ಔಷಧಿ ಸೇರಿದಂತೆ ಕೃಷಿ ಪರಿಕರಗಳನ್ನು...

ಭಾರತಕ್ಕೆ ಬರದ ಬುಲೆಟ್ ಟ್ರೈನ್: ತಡವಾಗುತ್ತಿರುವುದು ಮೋದಿಯಿಂದಲೋ, ಜಪಾನ್‌ನವರಿಂದಲೋ?

ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಈ ಮಾರ್ಗವು ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಯೋಜನೆಯ ಭಾಗವಾಗಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಅದಾಗಿ ಹತ್ತು ವರ್ಷವಾದರೂ ಸುದ್ದಿಯೇ ಇಲ್ಲ. ಬುಲೆಟ್ ಟ್ರೈನ್...

ಇದನ್ನೂ ಓದಿ: ಯಾದಗಿರಿ | ರೈತರಿಗೆ ಅನ್ಯಾಯವಾಗದಂತೆ ಬೆಳೆ ಹಾನಿ ಸಮೀಕ್ಷೆ ನಡೆಸಲಾಗುವುದು: ಜಿ.ಕುಮಾರ ನಾಯಕ

ಎಂಆರ್‌ಎಚ್ಎಸ್ ಸಮಿತಿಯ ಕಾರ್ಯದರ್ಶಿ ಮಲ್ಲು ಹಲಗಿ ಮಾತನಾಡಿ, “ದಲಿತರು ಉನ್ನತ ಹುದ್ದೆಗಳಲ್ಲಿ ಇದ್ದರೆ ಜಾತಿ ವಿರೋಧಿಗಳಿಗೆ ಸಹಿಸಲಾಗುತ್ತಿಲ್ಲ. ಕೆಲವರು ಪ್ರಚೋದನಾತ್ಮಕ ಹೇಳಿಕೆಗಳನ್ನು ನೀಡುತ್ತಲೇ ದಲಿತರ ಮೇಲೆ ನಿರಂತರ ದೌರ್ಜನ್ಯ, ದಬ್ಬಾಳಿಕೆ ನಡೆಸುತ್ತಿದ್ದಾರೆ. ಇಂಥ ಭಯದ ವಾತಾವರಣದಲ್ಲಿ ಜೀವನ ನಡೆಸಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರ ಇಂಥ ಘಟನೆಗಳು ಮರುಕಳಿಸಿದಂತೆ ತಕ್ಷಣ ಕಠಿಣ ಕ್ರಮ ಕೈಗೊಳ್ಳಬೇಕೆಂದುʼ ಹೇಳಿದರು.

ಈ ಸಂದರ್ಭದಲ್ಲಿ ವಡಗೇರ ತಾಲೂಕು ಯುವ ಘಟಕದ ಅಧ್ಯಕ್ಷ ಹಣಮಂತ ಒಡ್ಕರ್, ಪ್ರಧಾನ ಕಾರ್ಯದರ್ಶಿ ಶಿವಶರಣಪ್ಪ ಗೋನಾಲ, ಸಿದ್ದಪ್ಪ ಬೀರನಕಲ್, ಮಹೇಶ್ ಹುಲಿ, ಹುಲಗಪ್ಪ ಹಿರಿಮೆಟಿ ಸೇರಿದಂತೆ ಹಲವಾರು ಮುಖಂಡರು ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

​ಚಿಂತಾಮಣಿ | ಅನಾಥನೆಂದು ಹೇಳಿ ಟಿಕೆಟ್ ಪಡೆದು ಗೆದ್ದರು, ಅಭಿವೃದ್ಧಿಗೆ ಕೊಡುಗೆಯೇ ಇಲ್ಲ:ಪ್ರದೀಪ್ ಈಶ್ವರ್ ವಿರುದ್ಧ ಹರಿದಾಯ್ದ ಜಿ.ಎಲ್. ಶಂಕರ್

ಚಿಂತಾಮಣಿ ನಗರದ ಕಾರ್ಯನಿರತ ಪತ್ರಕರ್ತರ ಸಂಘದ ಭವನದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್...

ಕೋಲಾರ | ಅರಣ್ಯ ಇಲಾಖೆ ವಿರುದ್ಧ ರೈತರ ಆಕ್ರೋಶರೈತರ ಹಕ್ಕುಗಳ ಅರಿವಿನಿಂದ ಅರಣ್ಯ ಅಧಿಕಾರಿಗಳಿಗೆ ನಡುಕ: ಆರ್. ಶ್ರೀನಿವಾಸನ್

ರೈತರು ನಿದ್ದೆ ಮಾಡುವ ಸಂದರ್ಭವನ್ನು ಬಳಸಿಕೊಂಡು ಬೆಳಗಿನ ಜಾವ ಪೊಲೀಸ್ ಬೆಂಗಾವಲಿನಲ್ಲಿ...

OBC ವಿದ್ಯಾವಂತ ನಿರುದ್ಯೋಗಿಗಳ ಕುರಿತು ಅಧ್ಯಯನ; ಪ್ರವೀಣ ಪತ್ತಾರಗೆ ಕವಿವಿ ಪಿಎಚ್‌ಡಿ

ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡದ ಸಮಾಜಶಾಸ್ತ್ರ ವಿಭಾಗದ ಸಂಶೋಧಕರಾದ ಪ್ರವೀಣ ಪತ್ತಾರ ಅವರು...

ಆಲಗೂರ ಪುನರ್ವಸತಿ ಕೇಂದ್ರವನ್ನು ಮರಳಿ ಗ್ರಾಮ ಪಂಚಾಯತಿಗೆ ಸೇರಿಸಲು ಆಗ್ರಹ

ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರಸಭೆ ವ್ಯಾಪ್ತಿಗೆ ಸೇರಿಸಲಾಗಿರುವ ಆಲಗೂರ ಪುನರ್ವಸತಿ ಕೇಂದ್ರವನ್ನು...