ಯಾದಗಿರಿ ಜಿಲ್ಲೆಯ ಶಹಾಪುರ್ ತಾಲೂಕಿನ ರಸ್ತಾಪುರ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲೆಯ ಮುಖ್ಯಗುರುಗಳಾದ ವಾಣಿಶ್ರೀ ಮಾತನಾಡಿ, ʼಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ. ಎಲ್ಲ ಹೆಣ್ಣುಮಕ್ಕಳು ಉತ್ತಮ ಶಿಕ್ಷಣ ಪಡೆಯಬೇಕು. ಹೆಣ್ಣು ಮಕ್ಕಳಿಗೆ ರಕ್ಷಣೆ ನೀಡುವದು ನಮ್ಮೆಲ್ಲರ ಕರ್ತವ್ಯ’ ಎಂದರು.
ಕಾರ್ಯಕ್ರಮದಲ್ಲಿ ವರ್ಲ್ಡ್ ವಿಷನ್ ಸಂಸ್ಥೆ ವತಿಯಿಂದ ಅಪೌಷ್ಟಿಕ ಮಕ್ಕಳಿಗೆ ಆಹಾರ ಕಿಟ್ಟು ಮತ್ತು ನೀರಿನ ಫಿಲ್ಟರ್ ಬಾಟಲ್‌ಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಕಸ್ತೂರ್ಬಾ ಗಾಂಧಿ ವಸತಿ ನಿಲಯ ಮೇಲ್ವಿಚಾರಕರಾದ ಶಾರದಾ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯಗುರುಗಳಾದ ಶ್ರೀಶೈಲ್, ಉರ್ದು ಶಾಲೆಯ ಶಿಕ್ಷಕರಾದ ಹಿನಾ ಮಹಿಬೂಬ್, ಸಂತೋಷ ವಿಶ್ವಕರ್ಮ, ರಾಜ್ ಕಿರಣ್, ಸುಪ್ರೀಂ ಜಾಯ್, ದೇವಮ್ಮ, ಶಾಂತಮ್ಮ, ಶಿವು ಸೇರಿದಂತೆ ಹಲವರು ಉಪಸ್ಥಿತರಿದ್ದರು.