ಯಾದಗಿರಿ ಜಿಲ್ಲೆ ಶಹಾಪುರ ತಾಲೂಕು ಗೋಲಗೆರಾ ಗ್ರಾಮದ ಬಾಪುಗೌಡ ನಗರದಲ್ಲಿ ನಿವಾಸಿಗಳು ಸುಮಾರು ಐದು ತಿಂಗಳಿನಿಂದ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದ್ದಾರೆ.
ಕುಡಿಯುವ ನೀರಿಗಾಗಿ ಪಕ್ಕದ ಗ್ರಾಮಗಳಿಗೆ ತೆರಳಿ ನೀರು ತರುವ ಪರಿಸ್ಥಿತಿ ನಿರ್ಮಾಣವಾಗಿದೆ. ಸಂಬಂಧ ಪಟ್ಟ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಗ್ರಾಮ ಪಂಚಾಯಿತಿ ಎದುರು ಖಾಲಿ ಕೊಡಗಳು ಹಿಡಿದು ಗ್ರಾಮಸ್ಥರು ಅನೇಕ ಬಾರಿ ಪ್ರತಿಭಟನೆ ನಡೆಸಿದರೂ ಕುಡಿಯು ನೀರಿನ ಸಮಸ್ಯೆಗೆ ಅಧೀಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಬಾಪುಗೌಡ ನಗರ ನಿವಾಸಿಗಳು ನಿತ್ಯವೂ ಐದಾರು ಮೈಲಿ ದೂರ ಹೋಗಿ ನೀರು ತರಬೇಕ್ಕಾಗಿದೆ. ಸಂಬಂಧ ಪಟ್ಟ ಅಧಿಕಾರಿಗಳು ಕೂಡಲೇ ನೀರಿನ ಸಮಸ್ಯೆ ಬಗೆಹರಿಸಬೇಕು. ಜನರಿಗೆ ಅನುಕೂಲ ಮಾಡಿಕೊಡಬೇಕು ಎಂದು ಸತೀಶ್ ಯಾದವ್ ಅವರು, ಈದಿನ.ಕಾಮ್ ಮೂಲಕ ಆಗ್ರಹಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ಉಸ್ತುವಾರಿ ಸಚಿವರ ನೇಮಕಕ್ಕೆ ತೀವ್ರ ವಿರೋಧ; ‘ಗೋ ಬ್ಯಾಕ್’ ಚಳವಳಿ